ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ರಾಘವಾಪುರಲ್ಲಿ ಕಾರು, ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜನವರಿ, 11: ಸರಕು ಸಾಗಾಣಿಕೆಯ ಲಾರಿ ಹಾಗೂ ಕಾರಿನ ನಡುವೆ ಅಪಘಾತ ಸಂಭವಿಸಿದ ಪರಿಣಾಮ ನಾಲ್ವರು‌ ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ರಾಘವಾಪುರ ಗ್ರಾಮದ ಸಮೀಪ ನಡೆದಿದೆ.

ಮಕರ ಸಂಕ್ರಾಂತಿ ವಿಶೇಷ ಪುಟ

ವಿಜಯಪುರ ಜಿಲ್ಲೆಯ ಜೇವರ್ಗಿ ಗ್ರಾಮದ ದೊರೆಯಪ್ಪ, ಶಶಿ ಬಡಿಗೇರ, ಪ್ರಭು ಬಡಿಗೇರ ಹಾಗೂ ಬೈಕ್‌ನಲ್ಲಿ ಬರುತ್ತಿದ್ದ ಚಾಮರಾಜನಗರ ತಾಲೂಕಿನ ಕುಲಗಾಣ ಗ್ರಾಮದ ಬಸಪ್ಪ ಅವರ ತಲೆ, ಕೈ, ಕಾಲಿಗೆ ತೀವ್ರ ತರ ಪೆಟ್ಟು ಬಿದ್ದಿದೆ. ಕಾರಿನಲ್ಲಿದ್ದ ವಿಜಯಪುರ ಮೂಲದ ಆರು ಜನ ಕೇರಳದ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ತೆರಳುವಾಗ ಈ ಘಟನೆ ಸಂಭವಿಸಿದೆ. ಈ ಆರು ಮಂದಿಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ.

ವನ್ಯ ಜೀವಿಗಳಿಂದ ಬೆಳೆ ಉಳಿಸಿಕೊಳ್ಳಲು ಶ್ವಾನಕ್ಕೆ ಹುಲಿ ರೂಪ ಕೊಟ್ಟ ರೈತ: ಜನ ಕಂಗಾಲುವನ್ಯ ಜೀವಿಗಳಿಂದ ಬೆಳೆ ಉಳಿಸಿಕೊಳ್ಳಲು ಶ್ವಾನಕ್ಕೆ ಹುಲಿ ರೂಪ ಕೊಟ್ಟ ರೈತ: ಜನ ಕಂಗಾಲು

ಕಾರು ಹಾಗೂ ಗೂಡ್ಸ್ ಲಾರಿ ನಡುವೆ ಅಪಘಾತ

ಕಾರು ಹಾಗೂ ಈಚರ್ ಗೂಡ್ಸ್ ಟೆಂಪೋ ಎದುರು ಬದುರು ರಾಘವಾಪುರ ಗ್ರಾಮದ ಗ್ರಾಮ ಪಂಚಾಯತಿ ಕಚೇರಿ ಮುಂದೆ ಬಂದಾಗ ಅಪಘಾತ ನಡೆದಿದೆ. ಇನ್ನು ಬೈಕ್ ಸವಾರ ಬಸಪ್ಪ ಮದ್ಯೆ ಸಿಲುಕಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವೇಗದಿಂದ ಬರುತ್ತಿದ್ದ ಕಾರು ಹಾಗೂ ಟೆಂಪೋ ಡಿಕ್ಕಿ ಹೊಡೆದ ರಭಸಕ್ಕೆ ಟೆಂಪೋದ ಮುಂದಿನ ಚಕ್ರಗಳು ಕಿತ್ತು ನೂರು ಮೀಟರ್‌ನಷ್ಟು ದೂರು ಕಳಚಿ ಬಿದ್ದಿದೆ. ಜೊತೆಗೆ ಈಚರ್ ವಾಹನ ರಸ್ತೆಯಲ್ಲೇ ಪಲ್ಟಿಯಾಗಿದ್ದು, ಕಾರು ಕೂಡ ಸಂಪೂರ್ಣವಾಗಿ ಜಖಂಗೊಂಡಿದೆ. ಘಟನೆ ಸಂಬಂಧ ವಾಹನಗಳನ್ನು ವಶಕ್ಕೆ ಪಡೆದಿರುವ ಬೇಗೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Accident between car and goods lorry in Raghavapura: Four Ayyappa devotees seriously injured

ಕಲುಷಿತ ನೀರು ಸೇವಿಸಿ ಮಹಿಳೆ ಸಾವು

ಕಲುಷಿತ ನೀರು ಸೇವಿಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಹೊಸಪೇಟೆ ನಗರದ ರಾಣಿಪೇಟೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ರಾಣಿಪೇಟೆಯ 12ನೇ ಕ್ರಾಸ್‌ ನಿವಾಸಿ ಲಕ್ಷ್ಮೀದೇವಿ (50) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ರಾಣಿಪೇಟೆಯಲ್ಲಿ ಕಲುಷಿತ ನೀರು ಸೇವಿಸಿ ಲಕ್ಷ್ಮೀದೇವಿ ಅವರ ಮನೆಯ 11 ತಿಂಗಳ ಮಗು ಸೇರಿದಂತೆ 40ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೃತ ಲಕ್ಷ್ಮೀದೇವಿ ಕಲುಷಿತ ನೀರು ಸೇವಿಸಿ ಮಂಗಳವಾರ ಎಂಟರಿಂದ ಹತ್ತು ಸಲ ವಾಂತಿ ಮಾಡಿಕೊಂಡು ಅಸ್ವಸ್ಥರಾಗಿದ್ದಾರೆ. ಆರೋಗ್ಯ ಕಾರ್ಯಕರ್ತೆಯರು ಕೂಡಲೇ ಆಸ್ಪತ್ರೆಗೆ ದಾಖಲಾಗುವಂತೆ ತಿಳಿಸಿದ್ದಾರೆ. ಆದರೆ ಲಕ್ಷ್ಮೀದೇವಿ ಆರ್‌ಎಂಪಿ ವೈದ್ಯರ ಬಳಿ ಚಿಕಿತ್ಸೆ ಪಡೆದು, ಮನೆಯಲ್ಲೇ ಗ್ಲುಕೋಸ್‌ ಹಾಕಿಸಿಕೊಂಡಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ಮಹಿಳೆ ಮಂಗಳವಾರ ಸಂಜೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ನಗರದಲ್ಲಿ ಪೈಪ್ ಲೈನ್ ಕಾಮಗಾರಿ ನಡೆಯುವ ವೇಳೆ ನೀರು ಕಲುಷಿತಗೊಂಡಿದ್ದು, ಕುಡಿಯುವ ನೀರು ಸೇರಿರುವ ಅನುಮಾನ ವ್ಯಕ್ತವಾಗಿದೆ.

English summary
Accident between car and goods lorry near Raghavapura village of Gundlupete taluk, Four Ayyappa devotees seriously injured, know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X