ಗುಂಡ್ಲುಪೇಟೆ: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಅಪಘಾತ: ಸ್ಥಳದಲ್ಲೇ ಇಬ್ಬರು ಸಾವು
ಚಾಮರಾಜನಗರ, ಅಕ್ಟೋಬರ್, 20: ದಿನದಿಂದ ದಿನಕ್ಕೆ ಅಪಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಲೇ ಇವೆ. ಇದೀಗ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗುಂಡ್ಲುಪೇಟೆ ತಾಲೂಕಿನ ಚೌಡಹಳ್ಳಿ ಗ್ರಾಮದ ಸಮೀಪ ಭಾನುವಾರ (ಅಕ್ಟೋಬರ್ 20) ನಡೆದಿದೆ.
ಚೌಡಹಳ್ಳಿ ಗ್ರಾಮದ ಶಿವಯ್ಯ(56) ಹಾಗೂ ಹುಂಡಿಪುರ ಗ್ರಾಮದ ಅಜೀತ್(22) ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಚೌಡಹಳ್ಳಿ ಗ್ರಾಮದ ಚಂದು ಎಂಬಾತನಿಗೆ ತೀವ್ರ ಗಾಯಗಳಾದ ಹಿನ್ನೆಲೆ ಆಸ್ಪತ್ರೆಗೆ ರವಾನಿಸಲಾಗಿದೆ.

ಚೌಡಹಳ್ಳಿ ಗ್ರಾಮದ ತಿರುವಿನಲ್ಲಿ ಎರಡು ಬೈಕ್‌ಗಳು ವೇಗವಾಗಿ ಚಲಿಸುತ್ತಿದ್ದ ಪರಿಣಾಮ ಮುಖಾಮುಖಿ ಡಿಕ್ಕಿ ಸಂಭವಿಸಿದೆ ಎನ್ನಲಾಗುತ್ತಿದೆ. ಘಟನಾ ಸ್ಥಳಕ್ಕೆ ಗುಂಡ್ಲುಪೇಟೆ ಠಾಣೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿ ಮೃತ ದೇಹಗಳನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಬಳಿಕ ಎರಡು ಬೈಕ್‌ಗಳನ್ನು ವಶಕ್ಕೆ ಪಡೆದು ಕೊಂಡಿದ್ದಾರೆ. ಇನ್ನೂ ಈ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
ಸಾರಿಗೆ ಬಸ್ ಪಲ್ಟಿ: ರಾಜ್ಯದ ಹಲವೆಡೆ ಕೆಎಸ್‌ಆರ್‌ಟಿಸಿ ಬಸ್ ಅಪಘಾತ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಇನ್ನು ಸೆಪ್ಟೆಂಬರ್ 30ರಂದು ಮತ್ತೆ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಸಂಸ್ಥೆಯ (KSRTC) ಬಸ್ ಪಲ್ಟಿಯಾಗಿ ಶಾಲಾ-ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡ ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದೆ.
ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಹೋಬಳಿಯ ಓಬಳಾಪುರ ತಾಂಡಾ ಬಳಿ ಸೋಮವಾರ ಬೆಳಗ್ಗೆ ಸುಮಾರು 9 ಗಂಟೆ ಸಮಯದಲ್ಲಿ ಈ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು. ಹಿರಿಯೂರು ಕಡೆ ಬರುವಾಗ ಓಬಳಾಪುರ ತಾಂಡಾ ಬಳಿ ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಸದ್ಯ ಈ ವೇಳೆ ಯಾವುದೇ ಪ್ರಾಣಾಪಾಯ ಸಂಬವಿಸಿಲ್ಲ. ಕೆಲವು ವಿದ್ಯಾರ್ಥಿಗಳಿಗೆ ಕೈ, ಕಾಲು, ಕಣ್ಣು ಇನ್ನೀತರ ಭಾಗಗಳಲ್ಲಿ ಗಾಯಗಳಾಗಿವೆ. ಈ ಗಾಯಗೊಂಡ ವಿದ್ಯಾರ್ಥಿಗಳನ್ನು ತಕ್ಷಣ ಸ್ಥಳೀಯ ವಾಹನ ಹಾಗೂ ಅಂಬುಲೆನ್ಸ್‌ಗಳಲ್ಲಿ ಸಾಗಿಸಿ ಸ್ಥಳೀಯ ಮತ್ತು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.
ಇನ್ನು ಸ್ಥಳೀಯರ ಮಾಹಿತಿ ಮೇರೆಗೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣದ ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದೆ.












Click it and Unblock the Notifications