ಬೈಕ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿ, ಇಬ್ಬರ ಸಾವು

By: ಚಾಮರಾಜನಗರ ಪ್ರತಿನಿಧಿ
Subscribe to Oneindia Kannada

ಚಾಮರಾಜನಗರ, ಆಗಸ್ಟ್ 13 : ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದರೆ, ಮತ್ತೋರ್ವ ಜಿಲ್ಲಾಸ್ಪತ್ರೆಯಲ್ಲಿ ಸಾವನ್ನಪ್ಪಿರುವ ದುರ್ಘಟನೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ.

ನಗರದ ಸೋಮವಾರಪೇಟೆ ಗ್ರಾಮದ ಶಿವಕುಮಾರ್(40) ಮತ್ತು ಕೆರೆಹಳ್ಳಿ ಗ್ರಾಮದ ರಂಗಸ್ವಾಮಿ(55) ಸಾವನ್ನಪ್ಪಿರುವ ಮೃತ ದುರ್ದೈವಿಗಳಾಗಿದ್ದಾರೆ. ಇಬ್ಬರೂ ಅತೀವೇಗವಾಗಿ ವಾಹನ ಚಲಾಯಿಸುತ್ತಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ನಂಜನಗೂಡು ಕಡೆಯಿಂದ ಹೊಂಡಾ ಪ್ಯಾಷನ್ ಪ್ರೊದಲ್ಲಿ ಚಾಮರಾಜನಗರ ಕಡೆಗೆ ಬರುತ್ತಿದ್ದ ಶಿವಕುಮಾರ್ ಹಾಗೂ ಚಾಮರಾಜನಗರದಿಂದ ಕಡೆಯಿಂದ ನಂಜನಗೂಡು ಕಡೆಗೆ ಬರುತ್ತಿದ್ದ ಯಮಹಾ ಲಿಬಿರೋ ನಡುವೆ ಈ ಅಪಘಾತ ಸಂಭವಿಸಿದೆ.

Accident between two bikes, two die in Chamarajanagar

ಬೆಂಡರವಾಡಿ ಕೆರೆ ಸಮೀಪದ ರಾಷ್ಟ್ರೀಯ ಹೆದ್ದಾರಿ 209ರಲ್ಲಿ ಈ ಘಟನೆ ನಡೆದಿದೆ. ರಂಗಸ್ವಾಮಿ ಅವರ ಹಿಂಬದಿ ಸವಾರ ಸಿಂಗನಪುರದ ಸಿದ್ದರಾಜು ಎಂಬುವವರಿಗೆ ತೀವ್ರವಾಗಿ ಗಾಯವಾಗಿದ್ದು, ಅವರನ್ನು ಸರ್ಕಾರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಈ ಸಂಬಂಧ ಚಾಮರಾಜನಗರ ಸಂಚಾರಿ ಠಾಣೆಯಲ್ಲಿ ದೂರು ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮಕೈಗೊಂಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Two riders die as two bikes collide with each other in Chamarajanagar district on Saturday. Shivakumar was riding Honda Pashion Pro, while Rangaswamy was riding Yamaha Libiro bike.
Please Wait while comments are loading...