ರಜನಿಕಾಂತ್ ಬೆನ್ನಲ್ಲೇ ನಟ ಅಕ್ಷಯ ಕುಮಾರ್ ಬಂಡೀಪುರಕ್ಕೆ ಭೇಟಿ

ಚಾಮರಾಜನಗರ, ಜನವರಿ 29: ಮ್ಯಾನ್ ವರ್ಸಸ್ ವೈಲ್ಡ್ ಎಂಬ ಸಾಕ್ಷ್ಯಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳಲು ಖ್ಯಾತ ಬಾಲಿವುಡ್ ನಟ ಅಕ್ಷಯಕುಮಾರ್ ಇಂದು ಬಂಡೀಪುರಕ್ಕೆ ಆಗಮಿಸಿದ್ದಾರೆ.

ಮುಂಬೈಯಿಂದ ಬೆಂಗಳೂರಿಗೆ ಬಂದು, ಅಲ್ಲಿಂದ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದ ಕಿಲಾಡಿ ಅಕ್ಷಯ್ ಕುಮಾರ್ ನೇರವಾಗಿ ಬಂಡೀಪುರದಲ್ಲಿರುವ ಸೆರೆಯ್ ರೆಸಾರ್ಟ್ ಗೆ ಆಗಮಿಸಿ ವಾಸ್ತವ್ಯ ಹೂಡಿದ್ದಾರೆ.

ಖ್ಯಾತ ಸಾಹಸಿ ನಿರ್ದೇಶಕ ಬೇರ್ ಗ್ರಿಲ್ಸ್ ನಿರ್ದೇಶನದಲ್ಲಿ ಈ ಸಾಕ್ಷ್ಯಚಿತ್ರ ತಯಾರಾಗುತ್ತಿದ್ದು ನಿನ್ನೆ ಇಡೀ ದಿನ ಸೂಪರ್ ಸ್ಟಾರ್ ರಜನೀಕಾಂತ್ ಚಿತ್ರೀಕರಣದಲ್ಲಿ ಪಾಲ್ಗೊಂಡು ಚೆನೈಗೆ ತೆರಳಿದ್ದಾರೆ.

Actor Akshay Kumar Visits To Bandipur After Rajinikanth

ಇಂದು ಬಾಲಿವುಡ್ ನಟ ಅಕ್ಷಯ್ ಕುಮಾರ್ ಬಂಡೀಪುರಕ್ಕೆ ಸಕಾಲದಲ್ಲಿ ಬಾರದ ಕಾರಣ ಚಿತ್ರೀಕರಣ ನಿಲ್ಲಿಸಲಾಗಿತ್ತು. ನಾಳೆ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಕಿಲಾಡಿ ಅಕ್ಷಯ್ ಕುಮಾರ್ ಚಿತ್ರೀಕರಣದಲ್ಲಿ ಪಾಲ್ಗೊಳಲಿದ್ದಾರೆ ಎನ್ನಲಾಗಿದೆ.

ನಟ ರಜನಿಕಾಂತ್ ನಿನ್ನೆ ಚಿತ್ರೀಕರಣದಲ್ಲಿ ಪಾಲ್ಗೊಂಡು ವಾಪಸ್ ಚೆನೈಗೆ ಹೋಗಿದ್ದಾರೆ. ರಜನಿಕಾಂತ್ ಚಿತ್ರೀಕರಣದ ವೇಳೆ ಬಿದ್ದು ಗಾಯವಾಗಿತ್ತು ಎಂದು ಸುದ್ದಿಯಾಗಿತ್ತು. ಆದರೆ ರಜನಿಕಾಂತ್ ಅವರ ಆರೋಗ್ಯದಲ್ಲಿ ವ್ಯತ್ಯಾಸವಾಗಿಲ್ಲ. ಯಾವುದೇ ತೊಂದರೆ ಇಲ್ಲದೆ ಸರಾಗವಾಗಿ ನಡೆದುಬಂದ ತಲೈವ ನಡೆದು ಬಂದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+