Get Updates
Get notified of breaking news, exclusive insights, and must-see stories!

Adhik Maas Amavasya 2023: ಮಲೆ ಮಾದಪ್ಪನ ಬೆಟ್ಟಕ್ಕೆ ಹರಿದುಬಂದ ಭಕ್ತರ ದಂಡು, ಪ್ರಯಾಣಿಕರನ್ನು ನಿಯಂತ್ರಿಸಲು ಖಾಕಿ ಹರಸಾಹಸ

ಚಾಮರಾಜನಗರ, ಆಗಸ್ಟ್‌, 16: ಅಧಿಕ ಶ್ರಾವಣ ಮಾಸದ ಅಮಾವಾಸ್ಯೆ ಹಿನ್ನೆಲೆ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗರವೇ ಹರಿದುಬರುತ್ತಿದ್ದೆ. ಶಕ್ತಿ ಯೋಜನೆ ಪರಿಣಾಮದಿಂದ ಕೊಳ್ಳೇಗಾಲದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಬಸ್ ಹತ್ತಲು ಜನಸಾಗರವೇ ಹರಿದು ಬರುತ್ತಿದ್ದು, ಸೀಟ್‌ಗಾಗಿ ಕಿಟಕಿಗಳಿಂದ ಜನ ಹತ್ತುತ್ತಿದ್ದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಪ್ರಯಾಣಿಕರನ್ನು ನಿಯಂತ್ರಿಸಲು ಲಾಠಿ ಹಿಡಿದು ಪೊಲೀಸರು ಹಾಗೂ ಕೆಎಸ್‌ಆರ್‌ಟಿಸಿ ಅಧಿಕಾರಿಗಳು ನಿಲ್ಲುತ್ತಿದ್ದಾರೆ.

ಕೊಳ್ಳೇಗಾಲ ಬಸ್ ನಿಲ್ದಾಣದಲ್ಲಿ ಪೊಲೀಸರ ಸರ್ಪಗಾವಲು ಏರ್ಪಟ್ಟಿದೆ. ಮತ್ತೊಂದೆಡೆ ಜನರರನ್ನು ನಿಯಂತ್ರಿಸಲು ಸಾರಿಗೆ ಸಂಸ್ಥೆ ಅಧಿಕಾರಿಗಳು ಕೂಡ ಹರಸಾಹಸ ಪಡುತ್ತಿದ್ದಾರೆ.

Adhik Maas Amavasya 2023: Devotees flocked to Male Mahadeshwara Hill

1.56 ಕೋಟಿ ರೂಪಾಯಿ ಕಾಣಿಕೆ ಹಣ ಸಂಗ್ರಹ

ಶಕ್ತಿ ಯೋಜನೆ ಜಾರಿಯಾದಾಗಿನಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಧಾರ್ಮಿಕ ಸ್ಥಳಗಳಿಗೆ ಭೇಟಿ ನೀಡುತ್ತಿದ್ದು, ಇದರಿಂದ ದೇವಸ್ಥಾನಗಳ ಹುಂಡಿಯ ಮೊತ್ತವೂ ಏರಿಕೆಯಾಗುತ್ತಲೇ ಇದೆ ಎಂದು ತಿಳಿದುಬರುತ್ತಿದೆ. ಹಾಗೆಯೇ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಲೆಮಾದಪ್ಪನ ಹುಂಡಿಯಲ್ಲಿ ಇತ್ತೀಚೆಗಷ್ಟೇ ಬರೋಬ್ಬರಿ 1.56 ಕೋಟಿ ರೂಪಾಯಿ ಕಾಣಿಕೆ ಹಣ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಪ್ರಾಧಿಕಾರ ಕಾರ್ಯದರ್ಶಿ ಗೀತಾ ಹುಡೇದಾ ಹಾಗೂ ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಸಮ್ಮುಖದಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಈ ವೇಳೆ ಬ್ಯಾಂಕ್ ಆಫ್ ಬರೋಡ ನೌಕರರು ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು ಭಾಗಿಯಾಗಿದ್ದರು.

ಸಿಸಿ ಕ್ಯಾಮರಾ ಕಣ್ಗಾವಲಿನಲ್ಲಿ ಬೆಳಗ್ಗೆ 8 ರಿಂದ ಸಂಜೆಯವರೆಗೂ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 1,56,28,122 ರೂಪಾಯಿ ನಗದು, 30 ಗ್ರಾಂ ಚಿನ್ನ ಹಾಗೂ 1 ಕೆ.ಜಿ 26 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ತಿಳಿದುಬಂದಿತ್ತು.

ಅದರಲ್ಲೂ ಈ ಬಾರಿ ಉಚಿತ ಬಸ್ ಪ್ರಯಾಣದ ಹಿನ್ನೆಲೆ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮಲೆಮಹದೇಶ್ವ ಬೆಟ್ಟಕ್ಕೆ ಭೇಟಿ ನಿಡಿದ್ದಾರೆ. ಜೊತೆಗೆ ಹುಣ್ಣಿಮೆ, ಭೀಮನ ಅಮಾವಾಸ್ಯೆ ಹಾಗೂ ಸರ್ಕಾರಿ ರಜಾ ದಿನಗಳಿಂದ ಭಕ್ತ ಸಾಗರರವೇ ಹರಿದು ಬಂದಿದ್ದು, ಈ ವೇಳೆ ಇಷ್ಟಾರ್ಥ ಸಿದ್ಧಿಗಾಗಿ ಹರಕೆಯ ರೂಪದಲ್ಲಿ ಹಣ, ಚಿನ್ನ ಹಾಗೂ ಬೆಳ್ಳಿ ಪದಾರ್ಥಗಳನ್ನು ಹುಂಡಿಗೆ ಹಾಕಿದ್ದಾರೆ. ಇದರಿಂದ ಹುಂಡಿಯಲ್ಲಿ ಇಷ್ಟು ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿತ್ತು.

2.53 ಕೋಟಿ ರೂಪಾಯಿ ಸಂಗ್ರಹ

ಹಾಗೆಯಯೇ ಮೇ ತಿಂಗಳಿನಲ್ಲಿ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿಗಳ ಎಣಿಕೆ ಕಾರ್ಯ ನಡೆದಿದ್ದು, ಹುಂಡಿಯಲ್ಲಿ 2.53 ಕೋಟಿ ರೂಪಾಯಿ ಸಂಗ್ರಹವಾಗಿದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.

ಮಲೆಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್‌ನಲ್ಲಿ ಹುಂಡಿ ಎಣಿಕೆ ಕಾರ್ಯವನ್ನು ಪ್ರಾರಂಭ ಮಾಡಲಾಗಿತ್ತು.

ಅಮಾವಾಸ್ಯೆ, ವಿಶೇಷ ದಿನಗಳಲ್ಲಿ ಹಾಗೂ ಸರ್ಕಾರಿ ರಜಾ ದಿನಗಳಂದು ರಾಜ್ಯದ ವಿವಿಧೆಡೆಯಿಂದ ಸಾವಿರರು ಜನರು ಮಾದಪ್ಪನ ದರ್ಶನಕ್ಕೆ ಆಗಮಿಸಿದ್ದರು. ಅಲ್ಲದೆ ವಿದ್ಯಾರ್ಥಿಗಳಿಗೆ ಬೇಸಿಗೆ ರಜೆ ಹಾಗೂ ವಿಧಾನಸಭಾ ಚುನಾವಣೆಯಿದ್ದ ಹಿನ್ನೆಲೆ ಕಳೆದ 32 ದಿನಗಳ ಅವಧಿಯಲ್ಲಿ 2.53,58,519 ರೂಪಾಯಿ ಹಣ, 65 ಗ್ರಾಂ ಚಿನ್ನ ಹಾಗೂ 3.358 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ ಎಂದು ತಿಳಿದುಬಂದಿತ್ತು.

ಮಲೆ ಮಹದೇಶ್ವರಸ್ವಾಮಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕಾತ್ಯಾಯಿನಿ ದೇವಿ, ಉಪಕಾರ್ಯದರ್ಶಿ ಬಸವರಾಜು, ದ್ವಿತೀಯ ದರ್ಜೆ ಸಹಾಯಕ ಸರಗೂರು ಮಹದೇವಸ್ವಾಮಿ ಬ್ಯಾಂಕ್ ಆಫ್ ಬರೋಡದ ವ್ಯವಸ್ಥಾಪಕರು, ಮಲೆಮಹದೇಶ್ವರ ಬೆಟ್ಟದ ಪೊಲೀಸ್ ಸಿಬ್ಬಂದಿಗಳು ಸೇರಿದಂತೆ ಪ್ರಾಧಿಕಾರದ ಸಿಬ್ಬಂದಿ ವರ್ಗದವರು ಹಾಜರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+