ಕಿಚ್‌ಗುತ್ ಮಾರಮ್ಮ ದೇವಸ್ಥಾನ ಅ. 20 ರಿಂದ ಆರಂಭ!
ಬೆಂಗಳೂರು, ಅ. 08: ಇಡಿ ದೇಶವನ್ನೆ ಬೆಚ್ಚಿ ಬೀಳಿಸಿದ್ದ ಸುಳ್ವಾಡಿ ವಿಷ ಪ್ರಸಾದ ದುರಂತದ ಕೇಂದ್ರ ಬಿಂದು ಕಿಚ್‌ಗುತ್ ಮಾರಮ್ಮ ದೇಗುಲ ತೆರೆಯಲು ದಿನಗಣನೆ ಶುರುವಾಗಿದೆ. 22 ತಿಂಗಳುಗಳ ಬಳಿಕ ಭಕ್ತಿಗರಿಗೆ ಕಿಚ್‌ಗುತ್ ಮಾರಮ್ಮ ದರ್ಶನ ನೀಡಲಿದ್ದಾಳೆ. ವಿಷ ಪ್ರಸಾದ ದುರಂತದ ಹಿನ್ನಲೆಯಲ್ಲಿ ಮಾರಮ್ಮ ದೇವಸ್ಥಾನವನ್ನು ರಾಜ್ಯ ಸರ್ಕಾರ ಬಂದ್ ಮಾಡಿತ್ತು.
ಕಳೆದ 2018ರ ಡಿಸೆಂಬರ್ 14 ರಂದು ನಡೆದಿದ್ದ ವಿಷ ಪ್ರಸಾದ ಪ್ರಕರಣದಿಂದ ದೇವಸ್ಥಾನವನ್ನು ಮುಚ್ಚಲಾಗಿತ್ತು. ಅವತ್ತು ದೇಗುಲದಲ್ಲಿ ನೀಡಿದ್ದ ಪ್ರಸಾದವನ್ನು ತಿಂದು 17 ಜನ ಸಾವಿಗಿಡಾಗಿದ್ದರೆ, 125 ಕ್ಕೂ ಹೆಚ್ಚು ಜನ ಅಸ್ವಸ್ಥ ಗೊಂಡು ಸಾವಿನ ದವಡೆಯಿಂದ ಪಾರಾಗಿದ್ದರು.
ಅಂದು ಮುಚ್ಚಿದ್ದ ದೇವಸ್ಥಾನದ ಬಾಗಿಲನ್ನು ಇದೇ ತಿಂಗಳ 20 ರಂದು ತೆರೆಯಲು ಸರ್ಕಾರದ ಸೂಚನೆ ಹಿನ್ನಲೆಯಲ್ಲಿ ಸೀಲ್‌ನ್ನು ಕಂದಾಯ ಇಲಾಖೆ ಅಧಿಕಾರಿಗಳು ತೆರೆದಿದ್ದಾರೆ. ಹೀಗಾಗಿ ಸ್ಥಳೀಯರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ದೇವಸ್ಥಾನದ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಕಳೆದ ವಿಧಾನ ಸಭಾ ಅಧಿವೇಶನದಲ್ಲಿ ಸ್ಥಳೀಯ ಶಾಸಕ ಆರ್ ನರೇಂದ್ರ ಅವರು ದೇಗುಲತೆರೆಯುವ ಕುರಿತು ಸರ್ಕಾರವನ್ನು ಒತ್ತಾಯಿಸಿದ್ದರು.

ಶಾಸಕರ ಪ್ರಶ್ನೆಗೆ ಉತ್ತರಿಸಿದ್ದ ಮುಜರಾಯಿ ಸಚಿವರು ಆಗಮಿಕರನ್ನು ನೇಮಕ ಮಾಡಿಕೊಂಡಿದ್ದು ಅಕ್ಟೋಬರ್ 20 ರ ಬಳಿಕ ನಿರ್ಬಂದ ತೆರವು ಗೊಳಿಸಲಾಗುತ್ತದೆ ಎಂದಿದ್ದರು. ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಸುಳ್ವಾಡಿಯಲ್ಲಿ ಕಿಚ್‌ಗುತ್ ಮಾರಮ್ಮ ದೇವಸ್ಥಾನವಿದೆ.
Recommended Video
-
Ragi Mudde: ಕರ್ನಾಟಕದ ರಾಗಿ ಮುದ್ದೆ ಸವಿಯಬೇಕು: ಮಂಡ್ಯದಲ್ಲಿ ಬಯಕೆ ಬಿಚ್ಚಿಟ್ಟ ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ












Click it and Unblock the Notifications