ನೀವು ಎರಡು ಬಾರಿ ಎಂಪಿ ಆದ್ರೂ ನನ್ನ ಕುರ್ಚಿ ಅಲುಗಾಡಲೇ ಇಲ್ಲ: ಸಿಎಂ ಸಿದ್ದರಾಮಯ್ಯ ಹೀಗೆ ಹೇಳಿದ್ದು ಯಾರಿಗೆ?
ಚಾಮರಾಜನಗರ, ಮಾರ್ಚ್, 12: ಪ್ರತಾಪ್ ಸಿಂಹ ಅವರು ಈ ಹಿಂದೆ ನಾನು ಎಂಪಿ ಆದರೆ ಸಿಎಂ ಸೀಟು ಅಲುಗಾಡುತ್ತದೆ ಎನ್ನುವ ಹೇಳಿಕೆಯನ್ನು ನೀಡಿದ್ದರು. ಇನ್ನು ಈ ಹೇಳಿಕೆಗೆ ಸಿದ್ದರಾಮಯ್ಯ ಅವರು ಯಾವ ರೀತಿ ತಿರುಗೇಟು ನೀಡಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ಪ್ರತಾಪ್ ಸಿಂಹ ಹೆಸರು ಕೆಡಿಸಿಕೊಂಡಿದ್ದಾರೆಂದು ಬಿಜೆಪಿಯವರು ಅಭ್ಯರ್ಥಿ ಬದಲಾವಣೆ ಮಾಡುತ್ತಿರಬಹುದು ನನಗೆ ಗೊತ್ತಿಲ್ಲ, ಯದುವೀರ್ ಆಗುವುದು ಮಾಧ್ಯಮವರು ಸೃಷ್ಟಿ ಮಾಡಿಕೊಂಡ ಹೊಂದಾಣಿಕೆ ರಾಜಕೀಯ ಎಂದರೆ ಹೇಗೆ ಎಂದು ಕಿಡಿಕಾರಿದರು. ಇನ್ನು ತಾನು ಎಂಪಿಯಾದರೇ ಸಿಎಂ ಕುರ್ಚಿ ಅಲುಗಾಡಲಿದೆ ಎಂಬ ಪ್ರತಾಪ್ ಸಿಂಹ ಹೇಳಿಕೆ ಟಾಂಗ್ ನೀಡಿ, ಎರಡು ಸಾರಿ ಎಂಪಿ ಆಗಿದ್ದಾರಲ್ಲ ನನ್ನ ಕುರ್ಚಿ ಅಲುಗಾಡಲೇ ಇಲ್ಲ. ಕ್ಯಾಂಡಿಡೇಟ್ ಯಾರದಾರೂ ಆಗಲಿ ನಾವು ಈ ಬಾರಿ ಬಿಜೆಪಿಯನ್ನು ಸೋಲಿಸುತ್ತೇವೆ ಎಂದು ಸವಾಲು ಹಾಕಿದರು.

ಅನಂತ್ ಕುಮಾರ್ ಹೆಗ್ಡೆ ವಿರುದ್ಧ ವಾಗ್ದಾಳಿ: ಮಾಧ್ಯಮವರೊಂದಿಗೆ ಮಾತನಾಡಿ, ಅನಂತಕುಮಾರ್ ಹೆಗ್ಡೆ ಆರ್ಡಿನರಿ ವ್ಯಕ್ತಿ ಅಲ್ಲ, 5 ಸಲ ಸಂಸದರಾಗಿದ್ದವರು, ಸಚಿವರಾಗಿದ್ದವರು, ಸಂವಿಧಾನ ಬದಲಿನ ವಿಚಾರ ಹೇಳಬೇಕಾದರೆ ಪಕ್ಷದ ತೀರ್ಮಾನ ಆಗಿರದೇ ಹೇಳಲು ಆಗತ್ತಾ, ಅವರ ವಿರುದ್ಧ ಏನಾದರೂ ಕ್ರಮ ತೆಗೆದುಕೊಂಡರಾ ಎಂದು ಪ್ರಶ್ನೆ ಮಾಡಿದರು.
ಮನುಸ್ಮೃತಿ ಮೇಲೆ ನಂಬಿಕೆ ಇಟ್ಟಿರುವ ಪಕ್ಷ ಅದಾಗಿದ್ದು, ಮನುವಾದದಲ್ಲಿ ನಂಬಿಕೆ ಇಟ್ಟವರು, ಸಂವಿಧಾನ ಜಾರಿಯಾದ ದಿನದಿಂದಲೂ ಅವರು ಸಂವಿಧಾನ ವಿರೋಧ ಮಾಡಿಕೊಂಡೇ ಬಂದಿದ್ದಾರೆ. ಈಗ ಅನಂತ್ ಕುಮಾರ್ ಹೆಗ್ಡೆ ಮೂಲಕ ಹೇಳಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇನ್ನು ಧರ್ಮದ ಆಧಾರದ ಮೇಲೆ ಪೌರತ್ವ ಕೊಡಲು ನಮ್ಮ ವಿರೋಧವಿದೆ ಎಂದು ಸಿಎಎ ಜಾರಿಗೆ ಅಸಮಾಧಾನ ವ್ಯಕ್ತಪಡಿಸಿದರು.
ಆರ್.ಅಶೋಕ್ ವಿರುದ್ಧ ವಾಗ್ದಾಳಿ: ಕದ್ದುಮುಚ್ಚಿ ತಮಿಳುನಾಡಿಗೆ ನೀರು ಬಿಡುತ್ತಿದ್ದಾರೆ ಎಂಬ ಆರ್.ಆಶೋಕ್ ಆರೋಪಕ್ಕೆ ಪ್ರತಿಕ್ರಿಯಿಸಿ, ಯಾರಾದರೂ ಕದ್ದು ಮುಚ್ಚಿ ನೀರು ಬಿಡುತ್ತಾರಾ? ನೀರು ಇದ್ದರಲ್ಲವಾ ಬಿಡೋದು.? ಅವರು ಹೇಳುವುದು ಸುಳ್ಳು, ತಮಿಳುನಾಡಿಗೆ ತೊಟ್ಟು ನೀರು ಕೊಡುವುದಿಲ್ಲ. ಕುಡಿಯಲು ನೀರು ಇಟ್ಟುಕೊಳ್ಳದೇ ನಾವು ಕೊಡುವುದಿಲ್ಲ. ಅವರು ನೀರು ಕೊಡಿ ಎಂದು ಕೇಳೂ ಇಲ್ಲ. ಸುಮ್ಮಸುಮ್ಮನೇ ಯಾಕೆ ನೀರು ಕೊಡುತ್ತೇವೆ ಎಂದು ಹೇಳುತ್ತೀದ್ದೀರ. ಕೇಂದ್ರ ಹೇಳಿದರು ನೀರು ಕೊಡಲ್ಲ, ಯಾರೂ ಹೇಳಿದರು ನೀರು ಕೊಡಲ್ಲ ಎಂದರು.
ಸಂವಿಧಾನ ಉಳಿದರೇ ನಾವು-ನೀವು ಉಳಿಯುತ್ತೇವೆ: ಆರ್.ಧ್ರುವನಾರಾಯಣ ಅವರು ಮಾದರಿ ಜನನಾಯಕರಾಗಿದ್ದರು. ಕಾಲಾನಂತರವೂ ಅವರ ಜನಪ್ರಿಯತೆ ಬೆಳೆಯುತ್ತಿದೆ ಎಂದು ಸಿ.ಎಂ. ಸಿದ್ದರಾಮಯ್ಯ ಅವರು ಸ್ಮರಿಸಿದರು.
ಚಾಮರಾಜನಗರ ತಾಲೂಕಿನ ಹೆಗ್ಗವಾಡಿ ಗ್ರಾಮದಲ್ಲಿ ಆಯೋಜಿಸಿದ್ದ ದಿ.ಧ್ರುವನಾರಾಯಣ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕ್ಷೇತ್ರದ ಅಭಿವೃದ್ಧಿ ಮತ್ತು ಚಾಮರಾಜನಗರ ಜಿಲ್ಲೆಯ ಪ್ರಗತಿ ಬಗ್ಗೆ ನಿರಂತರ ಪ್ರಯತ್ನ ಮಾಡಿದ್ದ ದ್ರುವನಾರಾಯಣ್ ಅವರು ಜನರ ಮಧ್ಯ ಓಡಾಡದ ದಿನವೇ ಇಲ್ಲ. ಇವರದ್ದು ಜನಪರ ರಾಜಕಾರಣಕ್ಕೆ ಮಾದರಿ ವ್ಯಕ್ತಿತ್ವ ಎಂದರು.
ಕಾಂಗ್ರೆಸ್ ಸಿದ್ಧಾಂತ ಮತ್ತು ಕಾಂಗ್ರೆಸ್ ಪಕ್ಷದ ಆಸ್ತಿಯಾಗಿದ್ದ ದ್ರುವನಾರಾಯಣ್ ಅವರು ವಿದ್ಯಾರ್ಥಿ ಕಾಂಗ್ರೆಸ್ ಅವಧಿಯಿಂದ ಪಕ್ಷದ ಕಾರ್ಯಾಧ್ಯಕ್ಷರಾಗುವವರೆಗೂ ಬೆಳೆದರು. ಶಾಸಕರಾಗಿ, ಸಂಸದರಾಗಿ ಕ್ಷೇತ್ರದ ಅಭಿವೃದ್ಧಿಗೆ ನಿರಂತರ ಶ್ರಮಿಸಿದವರು. ಹೀಗಾಗಿ ಇವರ ಅಗಲಿಕೆ ಕೇವಲ ಕಾಂಗ್ರೆಸ್ ಪಕ್ಷಕ್ಕೆ ಮಾತ್ರವಲ್ಲ, ಕನ್ನಡ ನಾಡಿಗೆ ತುಂಬಲಾರದ ನಷ್ಟ ಆಗಿದೆ ಎಂದರು.
ಅಜಾತಶತ್ರು ಆಗಿದ್ದು ದ್ರುವನಾರಾಯಣ್ ಅವರ ವ್ಯಕ್ತಿತ್ವವನ್ನೇ ಅವರ ಪುತ್ರ ಶಾಸಕ ದರ್ಶನ್ ದ್ರುವನಾರಾಯಣ್ ಅವರೂ ಹೊಂದಿದ್ದು, ಜನಪರತೆ ಬೆಳೆಸಿಕೊಂಡಿದ್ದಾರೆ. ಇವರಿಗೆ ನಾನು ಸಂಪೂರ್ಣ, ಸಹಕಾರ, ಬೆಂಬಲ ನೀಡುತ್ತೇನೆ ಎಂದರು. ಇನ್ನು ರಾಜಕಾರಣಿಗೆ ಸೈದ್ಧಾಂತಿಕ ಸ್ಪಷ್ಟತೆ ಮತ್ತು ಬದ್ಧತೆ ಅತ್ಯಗತ್ಯ. ದ್ರುವನಾರಾಯಣ್ ಅವರಿಗೆ ಇವೆರಡೂ ಇತ್ತು. ಸಮಾಜದ ಅಸಮಾನತೆ ಅಳಿಸಲು, ದುರ್ಬಲರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಕೆಲಸವನ್ನು ಅವರು ಮಾಡುತ್ತಿದ್ದರು ಎಂದರು.
ಅಂಬೇಡ್ಕರ್ ಅವರ ಸಂವಿಧಾನದ ಬಗ್ಗೆ ದ್ರುವನಾರಾಯಣ್ ಅಪಾರವಾದ ನಂಬಿಕೆ, ಗೌರವ ಹೊಂದಿದ್ದರು. ಈಗ ಈ ಸಂವಿಧಾನವನ್ನು ಬದಲಾಯಿಸುವ ಪ್ರಯತ್ನಗಳು ನಡೆಯುತ್ತಿವೆ. ಸಂವಿಧಾನ ಉಳಿದರೆ ಮಾತ್ರ ನಾವೂ, ನೀವೂ ಉಳಿಯುತ್ತೇವೆ ಎಂದು ಎಚ್ಚರಿಸಿದರು. ಈ ವೇಳೆ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್.ಸಿ.ಮಹದೇವಪ್ಪ, ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕ ದರ್ಶನ್ ಧ್ರುವನಾರಾಯಣ ಸೇರಿದಂತೆ ಮತ್ತಿತರರು ಇದ್ದರು.
-
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
"5 ತಿಂಗಳಾದ್ರೂ ಸಿಗದ ದಸರಾ ಲೆಕ್ಕ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ'' -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ












Click it and Unblock the Notifications