ಗುಂಡ್ಲುಪೇಟೆಯಲ್ಲಿ ಗುಡುಗಿದ ಅಮಿತ್‌ ಶಾ: ಕಾಂಗ್ರೆಸ್‌ ವಿರುದ್ಧ ಮೀಸಲಾತಿ ಅಸ್ತ್ರ

ಚಾಮರಾಜನಗರ, ಏಪ್ರಿಲ್‌ 24: ಚುನಾವಣಾ ಚಾಣಕ್ಯ ಎಂದೇ ಜನಪ್ರಿಯತೆ ಪಡೆದಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೋಮವಾರ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಡೆಸಿ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತುಂಬಿದ್ದಾರೆ.

ಮೈಸೂರಿನಲ್ಲಿ ನಾಡ ಅಧಿದೇವತೆ ಚಾಮುಂಡೇಶ್ವರಿ ದೇವರ ದರ್ಶನ ಪಡೆದು ಚುನಾವಣಾ ಪ್ರಚಾರ ಆರಂಭಿಸಿದ ಅಮಿತ್‌ ಶಾ ಮೊದಲಿಗೆ ಗುಂಡ್ಲುಪೇಟೆಗೆ ಬಂದು ಮಡಹಳ್ಳಿ ವೃತ್ತದಿಂದ ರೋಡ್ ಶೋ ಆರಂಭಿಸಿದರು‌. ಬಸ್ ನಿಲ್ದಾಣ, ಪೋಸ್ಟ್ ಆಫೀಸ್, ಕಿತ್ತೂರು ರಾಣಿ ಚೆನ್ನಮ್ಮ ರಸ್ತೆ ಮೂಲಕ ಹಳೇ ಬಸ್ ನಿಲ್ದಾಣದ ತನಕ ಅಮಿತ್‌ ಶಾ ರೋಡ್ ಶೋ ನಡೆಸಿದ್ದು, ಮಾರ್ಗದುದ್ದಕ್ಕೂ ಕಾರ್ಯಕರ್ತರು ಹೂವಿನ ಮಳೆ ಸುರಿಸಿದರು.

Amit Shah Holds Roadshow In Gundlupet Ahead Of Karnataka Elections

ಬ್ಯಾರಿಕೇಡ್ ಹಿಂದೆ ಬಿಸಿಲಿನಲ್ಲಿ ತಾಸುಗಳಿಂದ ನಿಂತಿದ್ದ ಜನರ ಉತ್ಸಾಹ ಕಂಡ ಅಮಿತ್‌ ಶಾ ರೋಡ್ ಶೋ ವಾಹನದ ಮುಂದಕ್ಕೆ ಬನ್ನಿ ಎಂದು ಕಾರ್ಯಕರ್ತರನ್ನು ಕರೆದರು. ಪ್ರಧಾನಿ ನರೇಂದ್ರ ಮೋದಿ, ಅಮಿತ್‌ ಶಾ, ಬಿ.ಎಸ್‌.ಯಡಿಯೂರಪ್ಪ, ಬಿಜೆಪಿ ಅಭ್ಯರ್ಥಿ ನಿರಂಜನಕುಮಾರ್ ಪರವಾಗಿ ಕಾರ್ಯಕರ್ತರು ಘೋಷಣೆಗಳನ್ನು ಕೂಗುತ್ತಾ ಕುಣಿದು ಕುಪ್ಪಳಿಸಿದರು. ರೋಡ್ ಶೋನಲ್ಲಿ ಸಂಸದ ಪ್ರತಾಪ್ ಸಿಂಹ ಸೇರಿದಂತೆ ಸ್ಥಳೀಯಬಿಜೆಪಿ ಮುಖಂಡರು ಭಾಗಿಯಾಗಿದ್ದರು.

ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಅಮಿತ್‌ ಶಾ

ಹಳೇ ಬಸ್ ನಿಲ್ದಾಣದಲ್ಲಿ ಪ್ರಚಾರ ರಥದಲ್ಲಿ ಅಮಿತ್ ಶಾ ಮಾತನಾಡಿ ಕಾಂಗ್ರೆಸ್ ವಿರುದ್ಧ ಮೀಸಲಾತಿ ಅಸ್ತ್ರ ಪ್ರಯೋಗ ಮಾಡಿದರು. ತಾವು ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿಯನ್ನು ಮತ್ತೆ ಜಾರಿ ಮಾಡುತ್ತೇವೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅವರು ಹೇಗೆ ಮಾಡಿ ಯಾವ ಜಾತಿ ಮೀಸಲಾತಿಯನ್ನು ಕಿತ್ತುಕೊಳ್ಳುತ್ತಾರೆ. ಲಿಂಗಾಯತರದ್ದೋ, ಒಕ್ಕಲಿಗರದ್ದೋ ಇಲ್ಲವೇ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಡಿಮೆ ಮಾಡಿ ಮುಸ್ಲಿಂರಿಗೆ ಕೊಡುತ್ತಾರೋ ಎಂದು ಪ್ರಶ್ನಿಸಿದರು.

ಹಳೇ ಮೈಸೂರು ಭಾಗದಲ್ಲಿ ಬಿಜೆಪಿಗೆ ಉತ್ತಮ ವಾತಾವರಣ ಇದ್ದು ಚಾಮರಾಜನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲೂ ಈ ಬಾರಿ ಕಮಲ ಅರಳಲಿದೆ. ಗುಂಡ್ಲುಪೇಟೆ ಅಭ್ಯರ್ಥಿ ನಿರಂಜನಕುಮಾರ್ ಅವರನ್ನು ಪ್ರಚಂಡ ಬಹುಮತ ಕೊಟ್ಟು ಗೆಲ್ಲಿಸಿ ಎಂದು ಅಮಿತ್‌ ಶಾ ಮತದಾರರಲ್ಲಿ ಮನವಿ ಮಾಡಿದರು.

Amit Shah Holds Roadshow In Gundlupet Ahead Of Karnataka Elections

ಅಮಿತ್‌ ಶಾ ರೋಡ್‌ ಶೋನಲ್ಲಿ 10-12 ಸಾವಿರ ಮಂದಿ ಭಾಗಿ

ಅಮಿತ್‌ ಶಾ ಅಂದಾಜು 1 ಕಿಮೀ ನಷ್ಟು ರೋಡ್ ಶೋ ನಡೆಸಿದರು‌. ಈ ವೇಳೆ, 10-12 ಸಾವಿರ ಮಂದಿ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು. ಅಮಿತ್ ಶಾ ಅವರರನ್ನು ನೋಡುವ ಖುಷಿಯಲ್ಲಿ ವೃದ್ಧರೊಬ್ಬರು ಬಿಜೆಪಿ ಬಾವುಟ ಹಿಡಿದು ರಸ್ತೆಯಲ್ಲಿ ಕುಣಿದು ಕುಪ್ಪಳಿಸಿದರು. ಜೊತೆಗೆ, ಮೋದಿ, ನಿರಂಜನಕುಮಾರ್ ಹಾಗೂ ಅಮಿತ್ ಷಾ ಪರವಾಗಿ ಘೋಷಣೆಗಳನ್ನು ಕೂಗಿ ಉತ್ಸಾಹದಿಂದ ಕುಣಿದರು.

ಇನ್ನು, ಟಿ‌‌.ನರಸೀಪುರದ ಸಿದ್ದು ಎನ್ನುವವರು ಹುಲಿ ಹಾಗೂ ಅಮಿತ್ ಶಾ ಅವರ ಹಚ್ಚೆ ಹಾಕಿಸಿಕೊಂಡು ರೋಡ್ ಶೋಗೆ ಬಂದು ಗಮನ ಸೆಳೆದರು. ಕಾಶ್ಮೀರದ ವಿಶೇಷ ಪ್ರಾತಿನಿಧ್ಯ ತೆಗೆದಿರುವುದು, ಗುಂಡ್ಲುಪೇಟೆಗೆ ಬರುತ್ತಿರುವ ದ್ಯೋತಕವಾಗಿ ಈ ಟ್ಯಾಟು ಉಡುಗೊರೆ ಎಂದು ಸಂತಸದಿಂದ ಹೇಳಿಕೊಂಡಿದ್ದಾರೆ‌.

ಕಾಂಗ್ರೆಸ್‌ ಮುಖಂಡರಲ್ಲಿ ನಡುಕ ಹುಟ್ಟಿದೆ

ಅಮಿತ್ ಶಾ ಅವರ ಭೇಟಿ ಬಗ್ಗೆ ಶಾಸಕ ನಿರಂಜನ ಕುಮಾರ್ ಮಾಧ್ಯಮದವರೊಂದಿಗೆ ಮಾತನಾಡಿ, ಅಮಿತ್ ಶಾ ಅವರ ಭೇಟಿ ಕಾರ್ಯಕರ್ತರಿಗೆ ಬೂಸ್ಟ್ ಅಪ್ ಕೊಟ್ಟಿದೆ. ಅವರ ಭೇಟಿಯಿಂದಾಗಿ ಕಾಂಗ್ರೆಸ್ ಮುಖಂಡರಲ್ಲಿ ನಡುಕ ಹುಟ್ಟಿದೆ. ಅವರಿಗೆ ವಿಚಾರಗಳು ಯಾವುದು ಇಲ್ಲದಿರುವುದರಿಂದ ಅಮಿತ್ ಶಾ ಬಂದರೂ ಟೀಕೆ ಮಾಡುತ್ತಾರೆ ಎಂದು ಕಿಡಿಕಾರಿದರು.

Amit Shah Holds Roadshow In Gundlupet Ahead Of Karnataka Elections

ಒಟ್ಟಿನಲ್ಲಿ ಇಂದು ಅಮಿತ್ ಷಾ ಅವರ ಮಿಂಚಿನ ಸಂಚಾರ ಬಿಜೆಪಿ ಕಾರ್ಯಕರ್ತರಲ್ಲಿ ರಣೋತ್ಸಾಹ ತುಂಬಿದ್ದು, ಚುನಾವಣಾ ರಂಗು ಇಂದಿನಿಂದ ಹೆಚ್ಚಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+