Amit Shah Muslim Reservation: ಯಾವ ಜಾತಿಯಲ್ಲಿ ಕಡಿಮೆ ಮಾಡಿ ಮುಸ್ಲಿಮರಿಗೆ ಮೀಸಲಾತಿ ಕೊಡ್ತೀರಿ?: "ಕೈ"ಗೆ ಅಮಿತ್‌ ಶಾ ಪ್ರಶ್ನೆ

ಚಾಮರಾಜನಗರ, ಏಪ್ರಿಲ್‌, 24: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದಲ್ಲಿ ರೋಡ್ ಶೋ ನಡೆಸಿ ಡಿ.ಕೆ.ಶಿವಕುಮಾರ್‌ ವಿರುದ್ಧ ಹರಿಹಾಯ್ದ ಅಮಿತ್‌ ಶಾ ಅವರು, ಮುಸ್ಲಿಮರಿಗೆ ಮೀಸಲಾತಿ ಕೊಡುತ್ತೇನೆ ಎಂದಿದ್ದಾರೆ. ಯಾವ ಜಾತಿಯಲ್ಲಿ ಕಡಿಮೆ ಮಾಡಿ ಅವರಿಗೆ ಕೊಡುತ್ತೀರಿ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಾರಿ ಜಿಲ್ಲೆಯ ನಾಲ್ಕೂ ಸ್ಥಾನಗಳಲ್ಲೂ ಕಮಲ ಅರಳಲಿದ್ದು, ನಿರಂಜನಕುಮಾರ್ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ಎಂದು ಜನರಿಗೆ ಅಮಿತ್ ಶಾ ಮನವಿ ಮಾಡಿದರು.

Amit Shah question To Congress: On what basis you will give reservation to Muslim community?

ಹೆಲಿಕಾಪ್ಟರ್‌ನಲ್ಲಿ ಮೈಸೂರಿನಿಂದ ಗುಂಡ್ಲುಪೇಟೆಗೆ ಬಂದಿಳಿದ ಚುನಾವಣಾ ಚಾಣಕ್ಯ ಪಟ್ಟಣದ ಮಡಹಳ್ಳಿ ವೃತ್ತದಿಂದ ರೋಡ್ ಶೋ ಆರಂಭಿಸಿದ್ದು, ಬಸ್ ನಿಲ್ದಾಣ, ಪೋಸ್ಟ್ ಆಫೀಸ್, ತಾಲೂಕು ಕಚೇರಿ ಬಳಿಕ ಹಳೇ ಬಸ್ ನಿಲ್ದಾಣದಲ್ಲಿಅಂತ್ಯಗೊಳಿಸಲಾಯಿತು. ರೋಡ್‌ ಶೋನಲ್ಲಿ 10-12 ಸಾವಿರ ಬಿಜೆಪಿ ಕಾರ್ಯಕರ್ತರು ಭಾಗಿಯಾಗಿದ್ದರು‌ ಎನ್ನುವ ಮಾಹಿತಿ ಲಭ್ಯವಾಗಿದೆ.

ರೋಡ್ ಶೋನಲ್ಲಿ ಭಾಗಿಯಾದ ಅಮಿತ್‌ ಶಾ

ಚುನಾವಣಾ ಚಾಣಕ್ಯ ಅಮಿತ್‌ ಶಾ ಅವರು ಮೈಸೂರಿನಿಂದ ಹೆಲಿಕಾಪ್ಟರ್‌ನಲ್ಲಿ ಗುಂಡ್ಲುಪೇಟೆಗೆ ಬಂದಿಳಿದಿದ್ದು, ನಂತರ ಪಟ್ಟಣದ ಮಡಹಳ್ಳಿ ವೃತ್ತದಿಂದ ರೋಡ್ ಶೋನಲ್ಲಿ ಭಾಗಿಯಾಗಿದ್ದಾರೆ.

ಬಸ್ ನಿಲ್ದಾಣ, ಪೋಸ್ಟ್ ಆಫೀಸ್, ತಾಲೂಕು ಕಚೇರಿ ಬಳಿಕ ಹಳೇ ಬಸ್ ನಿಲ್ದಾಣದಲ್ಲಿ ಈ ರೋಡ್‌ ಶೋ ಅಂತ್ಯವಾಗಲಿದೆ ಅನ್ನುವ ಮಾಹಿತಿ ಲಭ್ಯವಾಗಿದೆ. ಇನ್ನು10-12 ಸಾವಿರ ಬಿಜೆಪಿ ಕಾರ್ಯಕರ್ತರು ರೋಡ್ ಶೋನಲ್ಲಿ ಭಾಗಿಯಾಗಿದ್ದು, ಬಿಜೆಪಿ ಬಾವುಟ, ನಿರಂಜನ ಕುಮಾರ್ ಹಾಗೂ ಅಮಿತ್‌ ಶಾ ಅವರ ಫೋಟೋ ಪ್ರದರ್ಶನ ಮಾಡಿದ್ದಾರೆ.

ಏಪ್ರಿಲ್‌ 26ರಂದು ಯೋಗಿ ಭೇಟಿ

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯಾನಾಥ್ ಅವರು ಏಪ್ರಿಲ್‌ 26ರಂದು ಮಂಡ್ಯಕ್ಕೆ ಭೇಟಿ ನೀಡಲಿದ್ದು, ಕ್ಷೇತ್ರದ ಅಭ್ಯರ್ಥಿ ಪರವಾಗಿ ಪ್ರಚಾರ ನಡೆಸಲಿದ್ದಾರೆ.

ಅಂದು ಬೆಳಗ್ಗೆ 11 ಗಂಟೆಗೆ ಆಗಮಿಸುವ ಯೋಗಿ ಆದಿತ್ಯಾನಾಥ್ ಅವರು ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ರೋಡ್‌ಶೋ ನಡೆಸಲಿದ್ದಾರೆ. ರಾಜೇಂದ್ರ ಪ್ರಸಾದ್ ರಸ್ತೆ (ಆರ್.ಪಿ.ರಸ್ತೆ), ಅಂಬೇಡ್ಕರ್ ವೃತ್ತ (ಕರ್ನಾಟಕ ಬಾರ್ ಸರ್ಕಲ್), ನೂರಡಿ ರಸ್ತೆ, ಹೊಸಹಳ್ಳಿ ವೃತ್ತ, ವಿಶ್ವೇಶ್ವರಯ್ಯ ರಸ್ತೆ (ವಿ.ವಿ. ರಸ್ತೆ) ಸೇರಿದಂತೆ ವಿವಿಧ ರಸ್ತೆಗಳಲ್ಲಿ ರೋಡ್‌ ಶೋ ನಡೆಸಿ ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.

ವಿ.ವಿ. ರಸ್ತೆ ಮೂಲಕ ಮಹಾವೀರ ವೃತ್ತ, ಮೈಸೂರು-ಬೆಂಗಳೂರು ಹೆದ್ದಾರಿ ಮಾರ್ಗವಾಗಿ ಸಿಲ್ವರ್ ಜ್ಯೂಬಿಲಿ ಪಾರ್ಕಿನವರೆಗೆ ರೋಡ್‌ ಶೋ ನಡೆಸಲಿದ್ದಾರೆ. ಬಳಿಕ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಏಪ್ರಿಲ್‌ 25ರಂದೇ ಬೆಂಗಳೂರಿಗೆ ಆಗಮಿಸುವ ಯೋಗಿ ಆದಿತ್ಯಾನಾಥ್ ಅವರು, ರಾತ್ರಿ ನಾಗಮಂಗಲ ತಾಲೂಕಿನ ಆದಿಚುಂಚನಗಿರಿ ಮಹಾಸಂಸ್ಥಾನಕ್ಕೆ ಆಗಮಿಸಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್‌ 26ರಂದು ಪಕ್ಷದ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಇನ್ನು ಹಳೇ ಮೈಸೂರು ಪ್ರದೇಶದಲ್ಲಿ ಬರುವ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಬಿಜೆಪಿ ಗೆಲ್ಲುವುದು ಮುಖ್ಯ. ಮುಂದಿನ ಸರ್ಕಾರದ ರಚನೆಯಲ್ಲಿ ಇದು ಮಹತ್ವದ ಪಾತ್ರವನ್ನು ವಹಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್.ಸಂತೋಷ್ ಇತ್ತೀಚೆಗಷ್ಟೇ ಹೇಳಿದ್ದರು.

ಮೈಸೂರಿನಲ್ಲಿ ಪಕ್ಷದ ಡಿಜಿಟಲ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಸಂತೋಷ್, 'ಕರಾವಳಿ ಜಿಲ್ಲೆಗಳು, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿ ಕೇಸರಿ ಪಕ್ಷದ ಸಾಧನೆ ಉತ್ತುಂಗಕ್ಕೇರಿದೆ. ಈಗ ಹಳೇ ಮೈಸೂರು ಭಾಗದಲ್ಲಿ ಇದನ್ನು ನೋಡುವ ಆಕಾಂಕ್ಷೆ ಇದೆ' ಎಂದು ಅವರು ತಿಳಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+