ತಂದೆ ಇಲ್ಲದ ಮಕ್ಕಳ ಖಾತೆಗೆ ವಾರ್ಷಿಕ 48 ಸಾವಿರ ಸ್ಕಾಲರ್ ಶಿಪ್ ಸೌಲಭ್ಯ, ಸ್ಪಷ್ಟನೆಗಳು
ಚಾಮರಾಜನಗರ, ನವೆಂಬರ್ 30: ತಂದೆ ಇಲ್ಲದ ಮಕ್ಕಳ ಖಾತೆಗೆ ವಾರ್ಷಿಕ 48 ಸಾವಿರ ರೂ. ಸ್ಕಾಲರ್ ಶಿಪ್ ಸೌಲಭ್ಯವಿದೆ ಎಂಬ ಸಂದೇಶ ಕೊಡಗು ಬಳಿಕ ಮತ್ತೊಂದು ಜಿಲ್ಲೆಯಲ್ಲಿ ಜನರ ಗೊಂದಲಕ್ಕೆ ಕಾರಣವಾಗಿದೆ. ಆದ್ದರಿಂದ ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಾದ ಶಿಲ್ಪಾ ನಾಗ್ ಅವರು ಈ ಕುರಿತು ಸ್ಪಷ್ಟನೆಯನ್ನು ನೀಡಿದ್ದಾರೆ.
ಈ ಮಾದರಿ ಸ್ಕಾಲರ್ ಶಿಪ್ ಇದೆ ಎಂದು ಒಂದು ಅರ್ಜಿಯ ಫೋಟೋ ಹೊಂದಿರುವ ವ್ಯಾಟ್ಸಪ್ ಸಂದೇಶ ಸಾಮಾಜಿಕ ಜಾಲತಾಣದ ಮೂಲಕ ಹರಿದಾಡುತ್ತಿದೆ. ಆದ್ದರಿಂದ ಜಿಲ್ಲಾಧಿಕಾರಿಗಳು ಸ್ಪಷ್ಟನೆಯನ್ನು ನೀಡಿದ್ದಾರೆ. ಸ್ಕಾಲರ್ ಶಿಪ್ ಸೌಲಭ್ಯ ಇರುವುದು ಹೌದು, ಆದರೆ ಈ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಮಾನದಂಡಗಳಿವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲಾಧಿಕಾರಿಗಳು ನೀಡಿರುವ ಸ್ಪಷ್ಟನೆಗಳು
* ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 48 ಸಾವಿರ ರೂ. ಸ್ಕಾಲರ್ ಶಿಪ್ ಸೌಲಭ್ಯ ಇರುವ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಮಾನದಂಡಗಳಿದ್ದು, ಈ ಸಂಬಂಧ ಸಾರ್ವಜನಿಕರು ಗೊಂದಲಕ್ಕೆ ಒಳಗಾಗಬಾರದೆಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.
* ತಂದೆ ಇಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 48 ಸಾವಿರ ರೂ. ಸ್ಕಾಲರ್ ಶಿಪ್ ಸೌಲಭ್ಯವಿದ್ದು, ಜನ ಸಾಮಾನ್ಯರಿಗೆ ಈ ವಿಚಾರ ತಿಳಿದೇ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳು ಇದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂಬ ಸಂದೇಶ ವ್ಯಾಟ್ಸಪ್‍ನಲ್ಲಿ ಹರಿದಾಡುತ್ತಿದ್ದು ಜನರನ್ನು ಗೊಂದಲಕ್ಕೀಡು ಮಾಡಿದೆ.
* ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ, ದಕ್ಷಿಣ ಕನ್ನಡ ಎಂದು ಮೊಹರು ಹಾಕಿರುವ ಒಂದು ಅರ್ಜಿಯ ಫೋಟೋ ಹೊಂದಿರುವ ಈ ವ್ಯಾಟ್ಸಪ್ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಸಂದೇಶವನ್ನು ನೋಡಿದ ಜನರು ಜಿಲ್ಲಾಧಿಕಾರಿಗಳ ಕಚೇರಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಶಿಶು ಅಭಿವೃದ್ಧಿ ಯೋಜನಾ ಕಚೇರಿ ಹೀಗೆ ಹಲವು ಸರ್ಕಾರಿ ಕಚೇರಿಗಳಿಗೆ ಅಲೆದಾಡುತ್ತಿದ್ದು ಜನರನ್ನು ಗೊಂದಲಕ್ಕೀಡು ಮಾಡಿದೆ.
* ಆದರೆ ಪ್ರಾಯೋಜಕತ್ವ ಕಾರ್ಯಕ್ರಮವು ಮಕ್ಕಳನ್ನು ಸಂಸ್ಥೆಯ ವಾತಾವರಣದಿಂದ ಬೇರ್ಪಡಿಸಿ ಕುಟುಂಬದ ವಾತಾವರಣದಲ್ಲಿ ಬೆಳೆಸುವಂತೆ ಪ್ರೋತ್ಸಾಹಿಸುವ ಹಾಗೂ ವಿವಿಧ ಕಾರಣಗಳಿಂದ ಪೊಷಕರಿಂದ ಬೇರ್ಪಟ್ಟು ನಿರ್ಗತಿಕರಾಗುವುದು, ಸಂಕಷ್ಟಕ್ಕೀಡಾಗುವುದು, ಓಡಿಹೋಗುವುದು, ಬಲವಂತದ ಬಾಲ್ಯವಿವಾಹ, ಬಾಲಕಾರ್ಮಿಕತೆ ಹಾಗೂ ಇತರೆ ಶೋಷಣೆಗೆ ಒಳಗಾಗುವುದನ್ನು ತಪ್ಪಿಸಿ ಮಕ್ಕಳು ಕೌಟುಂಬಿಕ ವ್ಯವಸ್ಥೆಯಲ್ಲಿಯೇ ಬೆಳೆಯಲು ನೆರವಾಗುವಂತೆ ತಾತ್ಕಾಲಿಕ ಅವಧಿಗೆ ಆರ್ಥಿಕ ಸಹಾಯ ನೀಡುವ ಯೋಜನೆಯಾಗಿದೆ.
* ಮಕ್ಕಳ ನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ, 2015ರ ಕಲಂ 2(58)ರ ಪ್ರಕಾರ, ಪ್ರಾಯೋಜಕತ್ವವನ್ನು ಕುಟುಂಬಗಳಿಗೆ, ಮಗುವಿನ ವೈದ್ಯಕೀಯ, ಶೈಕ್ಷಣಿಕ ಹಾಗೂ ಅಭಿವೃದ್ಧಿಯ ಅಗತ್ಯಗಳನ್ನು ಪೂರೈಸಲು ಅಗತ್ಯವಿರುವ ಪೂರಕ ಬೆಂಬಲ, ಹಣಕಾಸು ಅಥವಾ ಇತರೆ ಸಹಕಾರ ಎಂದು ವ್ಯಾಖ್ಯಾನಿಸಲಾಗಿದೆ. ಪ್ರಾಯೋಜಕತ್ವ ಕಾರ್ಯಕ್ರಮ ಮಗುವಿನ ಸಮರ್ಪಕ ಆರೈಕೆಗಾಗಿ ಪೋಷಣೆ ಹಾಗೂ ರಕ್ಷಣೆಯ ಅಗತ್ಯವಿರುವಂತೆ ಕುಟುಂಬಗಳು ಅಥವಾ ವಿಸ್ತೃತ ಕುಟುಂಬಗಳಿಗೆ ಪೂರಕವಾಗಿರುತ್ತದೆ. ಸಮುದಾಯದಲ್ಲಿ ಸ್ಥಳಾಂತರವಿಲ್ಲದೆ ತಮ್ಮ ಸಾಮಾಜಿಕ ಹಾಗೂ ಸಾಂಸ್ಕೃತಿಕ ಪರಿಸರದಲ್ಲಿಯೇ ಮಕ್ಕಳು ಬೆಳೆಯಲು ಅವಕಾಶ ಪಡೆಯುವುದನ್ನು ಖಾತರಿಪಡಿಸಲು ಇದೊಂದು ಷರತ್ತುಬದ್ಧ ಸಹಾಯವಾಗಿದೆ.
* ಈ ಯೋಜನೆಯ ಫಲಾನುಭವಿಯಾಗಲು ಹಲವು ಮಾನದಂಡಗಳಿದ್ದು ಈ ಪ್ರಕಾರ ಮಕ್ಕಳು ಅನಾಥವಾಗಿದ್ದರೆ ಹಾಗೂ ವಿಸ್ತೃತ ಕುಟುಂಬದೊಡನೆ ಜೀವಿಸುತ್ತಿದ್ದರೆ, ಪೋಷಕರು ಜೀವಕ್ಕೆ ಬೆದರಿಕೆ ಒಡ್ಡುವ, ಗಂಭೀರ ಸ್ವರೂಪದ ಕಾಯಿಲೆಯ ಸಂತ್ರಸ್ತರಾಗಿದ್ದರೆ, ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಬಾಲಸ್ವರಾಜ್ ಪೋರ್ಟಲ್‍ನಲ್ಲಿ ನೋಂದಾಯಿಸಲಾದ ಮಕ್ಕಳು, ಪೋಷಕರು/ ತಾಯಿ ವಿಧವೆ ಮಕ್ಕಳನ್ನು ನೋಡಿಕೊಳ್ಳಲು ಆರ್ಥಿಕ ಹಾಗೂ ದೈಹಿಕವಾಗಿ ಅಸಮರ್ಥರಾಗಿದ್ದು ಈ ಮಕ್ಕಳು ಮಕ್ಕಳ ನ್ಯಾಯಾಲಯ, ಮಕ್ಕಳ ಕಲ್ಯಾಣ ಸಮಿತಿಯಿಂದ ಬಾಲನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015 ಸೆಕ್ಷನ್ 14ರಂತೆ ಪೋಷಣೆ ಮತ್ತು ರಕ್ಷಣೆ ಅಗತ್ಯವಿರುವ ಮಗುವೆಂದು ಘೋಷಿಸಲ್ಪಟ್ಟ ಮಕ್ಕಳು ಮತ್ತು ಪಾಲನೆ ಮತ್ತು ರಕ್ಷಣೆ ಅಗತ್ಯವಿರುವ ಪಾಲನಾ ಸಂಸ್ಥೆಯ ಮಕ್ಕಳು ಈ ಯೋಜನೆಗೆ ಅರ್ಹರಾಗಿರುತ್ತಾರೆ.
* ಯೋಜನೆ ಬಗ್ಗೆ ತಿಳಿಯದೆ ಈ ಸಂಬಂಧ ಸಾಮಾಜಿಕ ಜಾಲತಾಣಗಳಲ್ಲಿ ಸಾರ್ವಜನಿಕರು ತಪ್ಪು ಮಾಹಿತಿಯನ್ನು ಹರಡುತ್ತಿರುವುದು ಸರಿಯಲ್ಲ. ಹೆಚ್ಚಿನ ಮಾಹಿತಿಗಾಗಿ ಜನರು ಜಿಲ್ಲಾ ಮಕ್ಕಳ ರಕ್ಷಣಾ ಘಟಕವನ್ನು ಸಂಪರ್ಕಿಸಬಹುದು.
-
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
ಬೆಂಗಳೂರಿನಲ್ಲಿ ನಡೆಯುವ ಆರ್ಸಿಬಿ-ಎಸ್ಆರ್ಎಚ್ ಉದ್ಘಾಟನಾ ಪಂದ್ಯದ ಟಿಕೆಟ್ ಬುಕ್ ಮಾಡುವುದ್ಹೇಗೆ? ಇಲ್ಲಿದೆ ಮಾಹಿತಿ -
Summer Drinks: ಎಳನೀರು ಅಥವಾ ಕಬ್ಬಿನ ರಸ – ಬೇಸಿಗೆಯಲ್ಲಿ ಯಾವುದು ಉತ್ತಮ?












Click it and Unblock the Notifications