ಶಾಲಾ-ಕಾಲೇಜಿಗೆ ಹೋಗಲು ಸಮಯಕ್ಕೆ ಸರಿಯಾಗಿ KSRTC ಬಸ್ ಕಲ್ಪಿಸಿ, ಹನೂರಿನಲ್ಲಿ ವಿದ್ಯಾರ್ಥಿಗಳ ಆಕ್ರೋಶ
ಹನೂರು, ಜೂನ್, 16: ಸಮರ್ಪಕ ಕೆಎಸ್‌ಆರ್‌ಟಿಸಿ ಬಸ್ ವ್ಯವಸ್ಥೆ ಇಲ್ಲದ ಪರಿಣಾಮ ಶಾಲಾ ಕಾಲೇಜು ವಿದ್ಯಾರ್ಥಿಗಳು ಇಂದು ಬೆಳ್ಳಂಬೆಳ್ಳಗೆ ಹನೂರಿನಲ್ಲಿ ದಿಢೀರ್ ಪ್ರತಿಭಟನೆ ನಡೆಸಿದರು.
ಕಳೆದ ಮೂರು ದಿನಗಳಿಂದ ಸಮರ್ಪಕ ಬಸ್ ಇಲ್ಲದೆ ಇರುವುದರಿಂದ ಶಾಲಾ-ಕಾಲೇಜುಗಳಿಗೆ ಸರಿಯಾದ ಸಮಯಕ್ಕೆ ತೆರಳಲು ಸಾಧ್ಯವಾಗುತ್ತಿಲ್ಲ, ಮೂರು ದಿನಗಳಿಂದ ಹೆಚ್ಚುವರಿ ಬಸ್‌ಗಳನ್ನು ಬಿಡುವಂತೆ ಮನವಿ ಮಾಡಿದರೂ ಯಾವುದೇ ಪ್ರಯೋಜನ ಇಲ್ಲದಂತಾಗಿದೆ. ಆದ್ದರಿಂದ ನೂರಾರು ವಿದ್ಯಾರ್ಥಿಗಳು ಹನೂರು ಪಟ್ಟಣದ ಕೆಎಸ್ಆರ್‌ಸಿ ಬಸ್ ನಿಲ್ದಾಣದ ಎಲ್ಲಾ ಕೆಎಸ್ಆರ್‌ಟಿಸಿ ಬಸ್ ಗಳನ್ನು ತಡೆದು ಪ್ರತಿಭಟನೆ ನಡೆಸುತ್ತಿದ್ದೇನೆ ಎಂದು ವಿದ್ಯಾರ್ಥಿಗಳು ಹೇಳಿದರು.

ವಿದ್ಯಾರ್ಥಿಗಳ ಆಕ್ರೋಶ
ವಿಶೇಷ ಜಾತ್ರ ಹಬ್ಬ ಹರಿದಿನ ಸಂದರ್ಭದಲ್ಲಿ ಬಸ್‌ಗಳು ಇಲ್ಲದೆ ನಮಗೆ ಶಾಲಾ-ಕಾಲೇಜುಗಳಿಗೆ ಹೋಗಲು ತೊಂದರೆ ಆಗುತ್ತಿದೆ. ಈ ಬಗ್ಗೆ ಹಲವಾರು ಬಾರಿ ಡಿಪೋ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದ್ದರೂ ಕೂಡ ಯಾವುದೇ ಪ್ರಯೋಜನ ಆಗಿಲ್ಲ. 10 ನಿಮಿಷ ತಡವಾಗಿ ಹೋದರೂ ಸಹ ನಮ್ಮನ್ನು ಕಾಲೇಜಿಗೆ ಸೇರಿಸಿಕೊಳ್ಳುವುದಿಲ್ಲ. ಇದರಿಂದ ನಮಗೆ ತೀವ್ರ ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ನಂತರ ರಾಮಪುರ ಗ್ರಾಮದ ಶ್ರೀನಿವಾಸ್ ಮಾತನಾಡಿ, ಕೆಎಸ್ಆರ್‌ಟಿಸಿ ಬಸ್‌ನ ನಿರ್ವಾಹಕರು ಹಾಗೂ ಚಾಲಕರು ವಿದ್ಯಾರ್ಥಿಗಳ ಜೊತೆ ಅಸಭ್ಯವಾಗಿ ನಡೆದುಕೊಳ್ಳುತ್ತಿದ್ದಾರೆ. ನಾವು ಮೊದಲೇ ಹಣ ಪಾವತಿ ಮಾಡಿ ಬಸ್ ಪಾಸ್ ಪಡೆದಿದ್ದರೂ ಸಹ ಯಾವುದೇ ಪ್ರಯೋಜನ ಆಗುತ್ತಿಲ್ಲ. ಸಾರಿಗೆ ಇಲಾಖೆ ಅಧಿಕಾರಿಗಳು ಸರಿಯಾಗಿ ಸ್ಪಂದಿಸದೆ ಇರುವುದರಿಂದ ನಮ್ಮ ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.












Click it and Unblock the Notifications