ಚಾಮರಾಜನಗರದಲ್ಲಿ ಶಂಕಿತ ಉಗ್ರರ ಬಂಧನ

ಚಾಮರಾಜನಗರ, ಜನವರಿ 12: ಕೇರಳದ ಉಗ್ರರೊಂದಿಗೆ ಸಂಪರ್ಕ ಹೊಂದಿದ್ದಾರೆ ಎನ್ನಲಾದ ಇಬ್ಬರು ಶಂಕಿತ ಉಗ್ರರನ್ನು ಗುಂಡ್ಲಿಪೇಟೆ ವ್ಯಾಪ್ತಿಯಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ.

ಗುಂಡ್ಲುಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಚಾಮರಾಜನಗರ ಜಿಲ್ಲಾ ಪೊಲೀಸ್, ಐಎಸ್ ಡಿ ಮತ್ತು ಎಟಿಎಸ್ ಅವರಿಂದ ಜಂಟಿ ಕಾರ್ಯಾಚರಣೆ ನಡೆಸಿದ್ದಾರೆ. ಇವರಿಗೆ ಆಂತರಿಕ ಭದ್ರತಾ ವಿಭಾಗ ಮತ್ತು ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ ಕಾರ್ಯಾಚರಣೆಯ ನೇತೃತ್ವ ವಹಿಸಿತ್ತು.

ಫೋನ್ ಮಾಹಿತಿ ಆಧರಿಸಿ ಬಂಧಿಸಲಾಗಿದೆ. ಇಬ್ಬರು ಸದ್ಯ ಪೊಲೀಸ್ ವಶದಲ್ಲಿದ್ದು, ಇವರಿಂದ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕಲಾಗುತ್ತಿದೆ. ಬೆಂಗಳೂರಿನಲ್ಲಿ ಇತ್ತೀಚೆಗಷ್ಟೇ ಬಂಧಿತರಾಗಿರುವ ಐಎಸ್ ಸಂಘಟನೆಗೆ ಸೇರಿದ ಶಂಕಿತ ಉಗ್ರರು ಎನ್ನಲಾಗಿದೆ.

Arrest Of Suspected Terrorists In Chamarajanagara

ಇತ್ತೀಚಿಗೆ ಬಂಧಿತರಾಗಿರುವ ಐಎಸ್ ಉಗ್ರರಿಂದಲೇ ಮಾಹಿತಿ ಪಡೆದು ಕೇಂದ್ರ ತನಿಖಾ ತಂಡಗಳು ಮತ್ತು ರಾಜ್ಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಇಂದು ಶಂಕಿತ ಉಗ್ರರನ್ನು ಬಂಧಿಸಲಾಗಿದೆ.

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆಯು ಕೇರಳ ಗಡಿಯೊಂದಿಗೆ ಹಂಚಿಕೊಂಡಿದೆ. ಬಂಡೀಪುರ ಅಭಯಾರಣ್ಯವು ಸಮೀಪವಿದೆ. ಗಣರಾಜ್ಯೋತ್ಸವ ದಿನದಂದು ಹಲವು ಕೃತ್ಯ ಎಸಗಲು ತಯಾರಿ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+