ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರತದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆದ ಕೊಳ್ಳೇಗಾಲದ ಯುವತಿ

|
Google Oneindia Kannada News

ಚಾಮರಾಜನಗರ, ಮೇ 24: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದ ಆಶ್ರಿತಾ ವಿ ಒಲೆಟಿ ಇಡೀ ಪ್ರಪಂಚದಲ್ಲಿರುವ ಏಳು ವಿಶ್ವವಿದ್ಯಾಲಯಗಳ ಪೈಕಿ ಒಂದಾಗಿರುವ ಭಾರತದ ಪ್ರತಿಷ್ಠಿತ ಏರ್‌ಫೋರ್ಸ್ ಟೆಸ್ಟ್ ಪೈಲಟ್ ಸ್ಕೂಲ್‌ನಿಂದ ಪದವಿಯನ್ನು ಪಡೆದುಕೊಂಡಿದ್ದಾರೆ.

1976ರಲ್ಲಿ ಸ್ಥಾಪನೆಯಾದಾಗಿನಿಂದ ಈವರೆಗೆ ಕೇವಲ 275 ಪದವೀಧರರು ಮಾತ್ರ ಈ ಕೋರ್ಸ್ ಅನ್ನು ಪೂರ್ಣಗೊಳಿಸಿದ್ದು, ಆಶ್ರಿತಾ ಒಲೆಟಿ ಅತ್ಯಂತ ಕಠಿಣ ತರಬೇತಿಗಳನ್ನು ಒಳಗೊಂಡಿರುವ ಈ ಕೋರ್ಸ್ ಅನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದಾರೆ.

ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಎಂಜಿನಿಯರ್ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದು, ಈ ಮೂಲಕ ಭಾರತೀಯ ವಾಯುದಳದ ಮೊಟ್ಟ ಮೊದಲ ಮಹಿಳಾ ಅಧಿಕಾರಿಯಾಗಿ ಕರ್ನಾಟಕದ ಆಶ್ರಿತಾ ಒಲೆಟಿ ಆಯ್ಕೆಯಾಗಿದ್ದಾರೆ.

Ashrita V. Oletti Selected To The Indias First Woman Flight Test Engineer

Recommended Video

ಶಿವಾಜಿನಗರ ಪೋಲಿಸ್ ಠಾಣೆ ಎದುರು ನಡೆದ ಘಟನೆ | Oneindia Kannada

ಫ್ಲೈಟ್ ಟೆಸ್ಟ್ ಇಂಜಿನಿಯರ್‌ಗಳು ಹೊಸ ವಿಮಾನಗಳ ವ್ಯವಸ್ಥೆಯನ್ನು ಮೌಲ್ಯಮಾಪನ ಮಾಡಲಿದ್ದು, ವಿಮಾನಗಳ ಸೇವೆಯಲ್ಲಿ ಇವರು ನಿರ್ಣಾಯಕ ಪಾತ್ರ ವಹಿಸಲಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಪದವಿ ಪ್ರದಾನ ಸಮಾರಂಭ ಮುಗಿದಿದ್ದು, ವಾಯುಸೇನೆಯ ಅಧಿಕೃತವಾಗಿ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

English summary
Ashrita Oletti from Karnataka was elected as the first woman officer of the Indian Air Force.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X