ಅಶ್ವತ್ಥ್ ನಾರಾಯಣ್‌ರನ್ನು ಬಂಧಿಸಬೇಕು: ಡಿ.ಕೆ. ಶಿವಕುಮಾರ್‌ ಪೊಲೀಸರಿಗೆ ಹೀಗೆ ಎಚ್ಚರಿಕೆ ನೀಡಿದ್ದೇಕೆ?

ಸಚಿವ ಅಶ್ವತ್ಥ್‌ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟಿದ್ದಾರೆಯೋ, ಅಲ್ಲೇ ಕೇಸ್ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಡಿ.ಕೆ.ಶಿವಕುಮಾರ್ ಹನೂರಿನಲ್ಲಿ ಒತ್ತಾಯಿಸಿದರು.

ಚಾಮರಾಜನಗರ, ಫೆಬ್ರವರಿ, 21: ಸಚಿವ ಅಶ್ವತ್ಥ್‌ ನಾರಾಯಣ್ ಎಲ್ಲಿ ಕೊಲೆ ಪ್ರಚೋದನೆ ಹೇಳಿಕೆ ಕೊಟ್ಟಿದ್ದಾರೆಯೋ, ಅಲ್ಲೇ ಕೇಸ್ ದಾಖಲಿಸಿ ಅವರನ್ನು ಬಂಧಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಹನೂರಿನಲ್ಲಿ ಒತ್ತಾಯಿಸಿದರು.

ಚಾಮರಾಜನಗರ ಜಿಲ್ಲೆಯ ಹನೂರಿನಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಶ್ವತ್ಥ್ ನಾರಾಯಣ್‌ ಒಬ್ಬ ಮಂತ್ರಿಯಾಗಿ ಮಾಜಿ ಸಿಎಂ ಅನ್ನು ಕೊಲೆ ಮಾಡುವ ಪ್ರಚೋದನೆ ಕೊಟ್ಟಿದ್ದಾರೆ. ಕ್ಷಮಾಪಣೆ ಕೇಳುವುದೆಲ್ಲಾ ಬೇಡ. ಭಾರತದ ಕಾನೂನು ಏನಿದೆ ಅದನ್ನು ರಾಜ್ಯ ಸರ್ಕಾರ ಪ್ರಯೋಗ ಮಾಡಲಿ ಎಂದು ಒತ್ತಾಯಿಸಿದರು.

Ashwath Narayan should be arrested: D.K.Shivakumar Warned to police

ಅಶ್ವತ್ಥ್‌ ನಾರಾಯಣ್‌ ವಿರುದ್ಧ ಆಕ್ರೋಶ

ಅಶ್ಚತ್ಥ್‌ ನಾರಾಯಣ್‌ ಪ್ರಚೋಧನಾತ್ಮಕ ಹೇಳಿಕೆ ನೀಡಿದ್ದು, ಮುಂದೆ ಅದರ ಪರಿಣಾಮ ಎದುರಿಸಬೇಕಾಗುತ್ತದೆ. ಆತ ಅರೆಸ್ಟ್ ಆಗದಿದ್ದರೇ ಪೊಲೀಸ್ ಅಧಿಕಾರಿಗಳು ಕೂಡ ಹೊಣೆಯಾಗುತ್ತಾರೆ. ಅವರು ರಿಟೈರ್ ಆದರೂ ಸಮಸ್ಯೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಟಿಪ್ಪುವನ್ನು ಯಾರೋ ಗೌಡ ಕೊಂದ ಅಂಥಾ ಹೇಳುತ್ತಿದ್ದಾರೆ. ಅವರು ಯಾವ ಇತಿಹಾಸ ಹೇಳುತ್ತಿದ್ದಾರೋ ಗೊತ್ತಿಲ್ಲ ಎಂದು ಬಿಜೆಪಿ ವಿರುದ್ಧ ಕಿಡಿಕಾರಿದರು. ಇನ್ನು ಪಿಯು ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಪ್ರತಿಕ್ರಿಯಿಸಿ, ಕುಲಪತಿಯಾಗಲು 15-20 ಕೋಟಿ ಕೊಡಬೇಕು ಎಂದು ಸಂಸದ ಪ್ರತಾಪ್ ಸಿಂಹ ಹೇಳುತ್ತಾರೆ. ಪಿಎಸ್ಐ ಪ್ರಶ್ನೆ ಪತ್ರಿಕೆಗಳು ಲೀಕ್ ಆಗಿತ್ತು. ಸರ್ಕಾರದ ಆಡಳಿತ ವೈಫಲ್ಯದಿಂದ ಈ ರೀತಿ ಆಗುತ್ತಿದೆ. ಪ್ರಶ್ನೆ ಪತ್ರಿಕೆ ಸೋರಿಕೆಗೂ ಸರ್ಕಾರವೇ ಕಾರಣ ಎಂದು ಆರೋಪಿಸಿದರು.

Ashwath Narayan should be arrested: D.K.Shivakumar Warned to police

ಬಿಜೆಪಿ ಸರ್ಕಾರದ ಆಡಳಿತದಲ್ಲಿ ವೈಫಲ್ಯ

ಬಿಜೆಪಿ ಸರ್ಕಾರದ ಆಡಳಿತದಲ್ಲಿ ವೈಫಲ್ಯ ಎದ್ದು ಕಾಣುತ್ತಿದೆ. ಕೋಮು ಗಲಭೆ, ಸಂಘರ್ಷದಿಂದ ಯಾವ ಉದ್ಯಮಿಯೂ ರಾಜ್ಯ ಸರ್ಕಾರದಲ್ಲಿ ಹೂಡಿಕೆ ಮಾಡಲು ಮನಸ್ಸು ಮಾಡುತ್ತಿಲ್ಲ. ಇದೀಗ ದೊಡ್ಡ ಉದ್ಯಮಿಗಳು ಕೂಡ ತಮಿಳುನಾಡು, ಆಂಧ್ರ ಪ್ರದೇಶಗಳ ಕಡೆಗೆ ಹೋಗುತ್ತಿದ್ದಾರೆ. ಬಿಜೆಪಿ ಸರ್ಕಾರದ ಆಡಳಿತ ವೈಫಲ್ಯದಿಂದ ಹೀಗೆ ಆಗುತ್ತಿದೆ ಎಂದು ಡಿ.ಕೆ. ಶಿವಕುಮಾರ್‌ ಆರೋಪ ಮಾಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+