ಯಳಂದೂರು: ಕಾನ್ಸ್‌ಟೇಬಲ್ ಮೇಲೆ ಹಲ್ಲೆ, ಬಿಎಂಟಿಸಿ ಡ್ರೈವರ್ ಬಂಧನ
ಚಾಮರಾಜನಗರ, ಆಗಸ್ಟ್, 04: ಕಾನ್ಸ್‌ಟೇಬಲ್ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಬಿಎಂಟಿಸಿಯಲ್ಲಿ ಚಾಲಕ ವೃತ್ತಿ ಮಾಡಿಕೊಂಡಿರುವ ವ್ಯಕ್ತಿಯನ್ನು ಬಂಧಿಸಿದ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರಲ್ಲಿ ನಡೆದಿದೆ.
ಮಹೇಶ್ ಕುಮಾರ್(45) ಬಂಧಿತ ವ್ಯಕ್ತಿಯಾಗಿದ್ದು, ಯಳಂದೂರು ಠಾಣೆಯ ಅನ್ಸರ್ ಪಾಷಾ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಯಳಂದೂರು ತಾಲೂಕಿನ ಕಂದಹಳ್ಳಿಯಲ್ಲಿ ಭೀಮನ ಅಮಾವಾಸ್ಯೆ ಹಿನ್ನೆಲೆ ಮಹದೇಶ್ವರ ಜಾತ್ರೆ ಹಿನ್ನೆಲೆ ಯಳಂದೂರು ಬಸ್ ನಿಲ್ದಾಣದಲ್ಲಿ ಅನ್ಸರ್ ಪಾಷಾ ಅವರನ್ನು ಬಂದೋಬಸ್ತ್ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಕುಡಿದು ವ್ಯಕ್ತಿಯೊಬ್ಬರು ಗಲಾಟೆ ಮಾಡುತ್ತಿದ್ದಾರೆಂದು ಸಾರ್ವಜನಿಕರು ದೂರು ನೀಡಿದ್ದರು. ಈ ಹಿನ್ನೆಲೆ ಸ್ಥಳಕ್ಕೆ ತೆರಳಿ ಮಹೇಶ್ ಅವರನ್ನು ಅನ್ಸರ್ ಪಾಷಾ ವಿಚಾರಿಸಿದಾಗ ಅವಾಚ್ಯ ಶಬ್ಧಗಳಿಂದ ಬೈದು, ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸದ್ಯ, ಯಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಹಲ್ಲೆಗೊಳಗಾದ ಕಾನ್ಸ್‌ಟೇಬಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳ ಆತ್ಮಹತ್ಯೆ ಮುಂದುವರೆದಿದ್ದು, ಇತ್ತ ಕೋಟೆ ನಾಡು ಚಿತ್ರದುರ್ಗದಲ್ಲೂ ಸಹ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಚಿತ್ರದುರ್ಗ ನಗರದ ಬಸವೇಶ್ವರ ಮೆಡಿಕಲ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಹಾಸನ ಮೂಲದ ವಿದ್ಯಾರ್ಥಿ ಮನೋಜ್(22) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಯಾಗಿದ್ದಾನೆ.
ಬಸವೇಶ್ವರ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನಲ್ಲಿ ಫ್ಯಾನ್‌ಗೆ ಸೀರೆಯಿಂದ ಮನೋಜ್ ನೇಣಿಗೆ ಶರಣಾಗಿದ್ದಾನೆ. ಕಾಲೇಜಿನ 2ನೇ ವರ್ಷದಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಓದುವ ಒತ್ತಡದಿಂದ ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕೋಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಮಟ್ರೋ ಹಳಿಗೆ ಜಿಗಿದ ವ್ಯಕ್ತಿ ಆತ್ಮಹತ್ಯೆ: ಬೆಂಗಳೂರು ನಮ್ಮ ಮೆಟ್ರೋ ಒಂದಲ್ಲ ಒಂದು ರೀತಿಯಲ್ಲಿ ಸುದ್ದಿಯಾಗುತ್ತಲೇ ಬಂದಿದೆ. ಅದರಲ್ಲೂ ಮೊಟ್ರೋ ಹಳಿಗೆ ಜಿಗಿದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಗಳು ನಡೆದಿವೆ. ಹಾಗೆಯೇ ಇದೀಗ ನಗರದಲ್ಲಿ ಅಂತಹದ್ದೇ ಒಂದು ಘಟನೆ ಮತ್ತೆ ನಡೆದಿದ್ದು, ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ.
ನಮ್ಮ ಮೆಟ್ರೋ ಟ್ರ್ಯಾಕ್‌ಗೆ ಜಿಗಿದು 35 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಿನ್ನೆ ನಾಗಸಂದ್ರ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ (ಹಸಿರು) ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ನಡೆದಿದೆ. ಆದರೆ ಆತ್ಮಹತ್ಯೆಗೆ ಕಾರಣ ಏನೆಂದು ಇನ್ನೂ ತಿಳಿದುಬಂದಿದ್ದು, ಮತ್ತೊಂದೆಡೆ ಮೃತರ ಗುರುತು ಪತ್ತೆಯಾಗಿಲ್ಲ.
ಘಟನೆ ಬಳಿಕ ತಾತ್ಕಾಲಿಕ ಮೆಟ್ರೋ ರೈಲು ಸಂಚಾರದಲ್ಲಿ ವ್ಯತ್ಯಯ ಆಗಿದೆ. ಇನ್ನು ಸ್ಥಳಕ್ಕೆ ಕೋಣನಕುಂಟೆ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದು, ಉಳಿದ ಮಾರ್ಗದಲ್ಲಿ ಸೇವೆಗಳು ಲಭ್ಯವಿದೆ ಎಂದು ಬಿಎಂಆರ್‌ಸಿಎಲ್ ಅಧಿಕೃಯ ಟ್ವೀಟ್‌ನಲ್ಲಿ ತಿಳಿಸಿದೆ.












Click it and Unblock the Notifications