ಹನೂರು: ಚರ್ಚ್‌ನಲ್ಲಿ ಆಯುಧ ಪೂಜೆ ಮಾಡಿ ಗಮನ ಸೆಳೆದ ಕ್ರೈಸ್ತರು
ಚಾಮರಾಜನಗರ, ಅಕ್ಟೋಬರ್, 11: ಇಂದು (ಅಕ್ಟೋಬರ್ 11) ಆಯುಧ ಪೂಜಾ ಕಾರ್ಯಗಳು ನಡೆಯುತ್ತಿವೆ. ಮತ್ತೊಂದೆಡೆ ಕ್ರೈಸ್ತ ಸಮುದಾಯದವರು ಹಿಂದೂಗಳ ಪವಿತ್ರ ಆಚರಣೆಯಾದ ಆಯುಧ ಪೂಜೆಯನ್ನು ಮಾಡುವ ಮೂಲಕ ಗಮನ ಸೆಳೆದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯವರೇ ಅಧಿಕ ಸಂಖ್ಯೆಯಲ್ಲಿದ್ದು, ಇಂದು ವಾಹನಗಳನ್ನು ಶುಚಿಗೊಳಿಸಿ, ಅಲಂಕೃತಗೊಳಿಸಿ ಚರ್ಚ್‌ಗೆ ಕೊಂಡೊಯ್ದು ಆಯುಧ ಪೂಜೆ ನೆರವೇರಿಸಿದ್ದಾರೆ. ಅಲ್ಲಿನ ಪಾದ್ರಿ ಸಗಾಯ್ ರಾಜ್ ಪ್ರಾರ್ಥನೆ, ಶುಭ ಸಂದೇಶ ತಿಳಿಸಿ ಪವಿತ್ರ ಜಲವನ್ನು ನೂರಾರು ವಾಹನಗಳಿಗೆ ಪ್ರೋಕ್ಷಣೆ ಮಾಡಿ ಯಾವುದೇ ಅಪಘಾತಗಳಾಗದಿರಲಿ, ಶುಭ-ಲಾಭ ತರಲಿ ಎಂದು ಹಾರೈಸಿದರು.

ಆಯುಧ ಪೂಜೆ ಹೇಗೆ ನಡೆಯಲಿದೆ?: ರಾಜಮಹಾರಾಜರ ಕಾಲದಿಂದಲೂ ಆಯುಧಪೂಜೆಗೆ ತನ್ನದೇ ಆದ ಮಹತ್ವವಿದೆ. ವರ್ಷಪೂರ್ತಿ ಖಡ್ಗ ಹಿಡಿದು ಶತ್ರುಸಂಹಾರ ಮಾಡುತ್ತಿದ್ದ ಮಹಾರಾಜರು ವಿಜಯದಶಮಿಗೆ ಮುನ್ನ ದಿನ ತಮ್ಮ ಆಯುಧಗಳಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸುತ್ತಿದ್ದರು. ಕೇವಲ ಆಯುಧ ಮಾತ್ರವಲ್ಲದೆ ಯುದ್ಧದಲ್ಲಿ ಭಾಗಿಯಾಗುತ್ತಿದ್ದ ಆನೆ, ಕುದುರೆ ಮತ್ತು ಅರಮನೆಯಲ್ಲಿರುತ್ತಿದ್ದ ಹಸು, ಒಂಟೆಗಳಿಗೂ ಪೂಜೆಯನ್ನು ಸಲ್ಲಿಸಲಾಗುತ್ತಿತ್ತು. ಇದು ಮುಂದುವರೆದು ಬಂದಿದ್ದು, ರಾಜಪರಂಪರೆಯನ್ನು ಸಾರುತ್ತಿರುವ ಮೈಸೂರು ಅರಮನೆಯಲ್ಲಿಯೂ ಅದ್ಧೂರಿಯಾಗಿ ನಡೆಯುತ್ತಿದೆ.
ಇನ್ನು ದ್ರೌಪದಾಯುಗದಲ್ಲಿ ಅರ್ಜುನನು ಅಜ್ಞಾತವಾಸದಲ್ಲಿದ್ದ ಸಂದರ್ಭ ಬನ್ನಿಮರದಲ್ಲಿಟ್ಟ ಶಸ್ತ್ರಗಳನ್ನು ತೆಗೆದು ಪೂಜಿಸಿದ ದಿನ ಆಯುಧ ಪೂಜೆಯೆಂದೂ, ವಿರಾಟನ ಗೋವುಗಳನ್ನು ಸೆರೆ ಹಿಡಿದ ಕೌರವ ಸೈನ್ಯದ ಮೇಲೆ ಆಕ್ರಮಣ ಮಾಡಿ ವಿಜಯ ಸಾಧಿಸಿದ ದಿನ ವಿಜಯದಶಮಿ ಎಂದು ಹೇಳಲಾಗುತ್ತಿದೆ. ಸೈನ್ಯ ಮತ್ತು ಆಯುಧಗಳು ರಾಜರ ಆಡಳಿತದಲ್ಲಿ ಪ್ರಮುಖವಾಗಿದ್ದವು. ಸದಾ ಯುದ್ಧಗಳಲ್ಲಿಯೇ ನಿರತರಾಗಿರುತ್ತಿದ್ದ ರಾಜರು ಆಯುಧಗಳಿಗೆ ಹೆಚ್ಚಿನ ಒತ್ತು ನೀಡುತ್ತಿದ್ದರಲ್ಲದೆ, ಯುದ್ಧದ ಗೆಲುವಿಗಾಗಿ ಆಯುಧ ಪೂಜೆ ಮಾಡುತ್ತಿದ್ದರು.
ಪ್ರಜಾಪ್ರಭುತ್ವದ ಈ ಕಾಲದಲ್ಲಿ ಕೆಲವರು ತಮ್ಮ ಮನೆಗಳಲ್ಲಿರುವ ಆಯುಧ, ವಾಹನ, ದಿನನಿತ್ಯ ಕೆಲಸ ಕಾರ್ಯಗಳಿಗೆ ಬಳಸುವ ಯಂತ್ರಗಳು ಸೇರಿದಂತೆ ವಿವಿಧ ಉಪಕರಣಗಳಿಗೆ ಪೂಜೆ ಸಲ್ಲಿಸುತ್ತಾರೆ. ಇದೆಲ್ಲದರ ನಡುವೆ ಮೈಸೂರು ಅರಮನೆಯಲ್ಲಿ ಅಂದಿನ ರಾಜಮಹಾರಾಜರ ಕಾಲದಲ್ಲಿ ಹೇಗೆ ಆಯುಧ ಪೂಜೆಯನ್ನು ನಡೆಸಲಾಗುತ್ತಿತ್ತೋ ಅದೇ ರೀತಿಯಲ್ಲಿ ಈಗಲೂ ನಡೆಸುತ್ತಿರುವುದು ವಿಶೇಷವಾಗಿದೆ.
ಮೈಸೂರು ರಾಜವಂಶಸ್ಥರು ಆಯುಧಪೂಜೆ ಮತ್ತು ವಿಜಯದಶಮಿ ಸಂಪ್ರದಾಯವನ್ನು ಮುನ್ನಡೆಸಿಕೊಂಡು ಬಂದಿದ್ದು ಸುಮಾರು ನಾನೂರು ವರ್ಷಗಳ ಸುಧೀರ್ಘ ಇತಿಹಾಸವಿರುವುದನ್ನು ನಾವು ಕಾಣಬಹುದಾಗಿದೆ. ಅದರಲ್ಲೂ ಮೈಸೂರು ಮಹಾರಾಜರು ಸಂಪ್ರದಾಯವನ್ನು ಚಾಚೂ ತಪ್ಪದೆ ಪಾಲಿಸಿಕೊಂಡು ಬಂದಿರುವುದೇ ಹೆಮ್ಮೆಯಾಗಿದೆ.
ಮೈಸೂರು ಅರಮನೆಯಲ್ಲಿ ಆಯುಧಪೂಜಾ ಕಾರ್ಯಕ್ರಮ ಹೇಗೆ ನಡೆಯುತ್ತದೆ ಎನ್ನುವುದನ್ನು ನೋಡುವುದಾದರೆ, ಆಯುಧ ಪೂಜೆಯ ದಿನದಂದು ಯುವರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅಂಬಾ ವಿಲಾಸ ಅರಮನೆಯ ಕರಿಕಲ್ಲು ತೊಟ್ಟಿಯಲ್ಲಿ ಆಯುಧಗಳು ಸೇರಿದಂತೆ ತಮ್ಮಲ್ಲಿರುವ ವಾಹನ ಪಟ್ಟದ ಆನೆ, ಕುದುರೆ ಹಸುಗಳಿಗೆ ಪೂಜೆಯನ್ನು ಸಲ್ಲಿಸುತ್ತಾರೆ. ಈ ವಿಧ ವಿಧಾನಗಳು ಪೂಜಾ ಕಾರ್ಯಗಳು ಪ್ರಾತಃಕಾಲದಲ್ಲಿ ಆರಂಭಗೊಂಡು ಮಧ್ಯಾಹ್ನದವರೆಗೂ ನಡೆಯುತ್ತದೆ.
ಮೊದಲಿಗೆ ಅರಮನೆಯ ಆವರಣದಲ್ಲಿ ಆಯುಧಪೂಜೆಯನ್ನು ರಾಜಪರಂಪರೆಯಂತೆ ಆರಂಭಿಸಲಾಗುತ್ತದೆ. ಆರಂಭದಲ್ಲಿ ಸಾಲಿಗ್ರಾಮ ಪೂಜೆ ನೇರವೇರಿಸಿ, ನಂತರ ಅರಮನೆ ಆವರಣದಲ್ಲಿರುವ ಕೋಡಿ ಸೋಮೇಶ್ವರ ದೇವಾಲಯಕ್ಕೆ ಚಿನ್ನದ ಖಡ್ಗ, ಪಿಸ್ತೂಲು ಸೇರಿದಂತೆ ಅರಮನೆಯ ಆಯುಧಗಳನ್ನು ಚಿನ್ನಲೇಪಿತ ಪಲ್ಲಕ್ಕಿಯಲ್ಲಿ ಕೊಂಡೊಯ್ದು ಪುರಾತನ ಬಾವಿಯ ಗಂಗೆಯಿಂದ ಅದನ್ನು ಶುಚಿಗೊಳಿಸಿ ಬಳಿಕ ಪೂಜೆ ನೆರವೇರಿಸಲಾಗುತ್ತದೆ.
ಇದೇ ಸಮಯದಲ್ಲಿ ಅರಮನೆಯಲ್ಲಿ ಮಹಾರಾಜ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ವಿವಿಧ ಪೂಜೆ ಹೋಮ ಹವನಗಳನ್ನು ನೇರವೇರಿಸುತ್ತಾರೆ. ಅಷ್ಟರಲ್ಲಿ ಅದೇ ಸಮಯಕ್ಕೆ ಕೋಡಿ ಸೋಮೇಶ್ವರ ದೇವಾಲಯದಿಂದ ಶುಚಿಗೊಳಿಸಿ ಪಲ್ಲಕಿಯಲ್ಲಿ ತಂದ ಆಯುಧ ಸೇರಿದಂತೆ ಇತರೆ ವಸ್ತುಗಳನ್ನು ಅರಮನೆಯ ಆನೆಬಾಗಿಲು ಮೂಲಕ ಕಲ್ಯಾಟಮಂಟಪಕ್ಕೆ ಕೊಂಡೊಯ್ದು ಜೋಡಿಸಲಾಯಿತು.
ಆ ನಂತರ ಆಗಮಿಸಿದ ರಾಜಪುರೋಹಿತರು ನೀಡಿದ ಮಾರ್ಗದರ್ಶನದಂತೆ ಆಯುಧಗಳನ್ನು ಜೋಡಿಸಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಎಲ್ಲ ಆಯುಧಗಳಿಗೆ ಪೂಜೆ ಸಲ್ಲಿಸುತ್ತಾರೆ. ಇದೆಲ್ಲದರ ನಡುವೆ ನವರಾತ್ರಿ ಆರಂಭದಲ್ಲಿ ಖಾಸಗಿ ದರ್ಬಾರ್ ಗೆ ಮುನ್ನ ಸಿಂಹಾಸನಕ್ಕೆ ಜೋಡಿಸಿದ್ದ ಸಿಂಹಕ್ಕೆ ಪೂಜೆ ಸಲ್ಲಿಸಿ ಅದನ್ನು ವಿಸರ್ಜಿಸಲಾಗುತ್ತದೆ. ಆಯುಧಪೂಜೆಯ ಹಿನ್ನಲೆಯಲ್ಲಿ ಬೆಳಿಗ್ಗೆ ಚಂಡಿಕಾ ಹೋಮ ಆರಂಭಿಸಿ ಬಳಿಕ ಪೂರ್ಣಾಹುತಿ ನಡೆಯುತ್ತದೆ.
ಆ ನಂತರ ಕರಿಕಲ್ಲು ತೊಟ್ಟಿಯಲ್ಲಿ ಅರಮನೆಯಲ್ಲಿರುವ ಐಷಾರಾಮಿ ಕಾರು ಮತ್ತು ಇತರೆ ವಾಹನಗಳಿಗೂ ಪೂಜೆಯನ್ನು ಮಾಡಲಾಗುತ್ತದೆ. ಹಿಂದಿನ ಕಾಲದ ಸಂಪ್ರದಾಯದಂತೆ ಅರಮನೆಯಲ್ಲಿರುವ ಪಟ್ಟದ ಆನೆ, ಪಟ್ಟದ ಕುದುರೆಗಳು, ಪಟ್ಟದ ಒಂಟೆಗಳು, ಪಟ್ಟದ ಹಸುಗಳು ಹಾಗೂ ಅರಮನೆ ಆರು ಆನೆಗಳಿಗೂ ಸಂಪ್ರದಾಯಬದ್ಧ ಪೂಜೆ ನೆರವೇರಿಸಿ ಪ್ರಾರ್ಥನೆ ಸಲ್ಲಿಸಲಾಗುತ್ತದೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications