ಚಾಮರಾಜನಗರ: ಕೊರೊನಾ ವೈರಸ್ ಗೆ ಆಯುಷ್ ವೈದ್ಯಾಧಿಕಾರಿ ಸಾವು
ಚಾಮರಾಜನಗರ, ಆಗಸ್ಟ್ 02: ಚಾಮರಾಜನಗರ ಜಿಲ್ಲಾ ಆಯುಷ್ ವೈದ್ಯಾಧಿಕಾರಿ ಡಾ.ರಾಚಯ್ಯ ಅವರು ಕೋವಿಡ್-19 ಗೆ ಬಲಿಯಾಗಿದ್ದಾರೆ. ಕೊರೊನಾ ಸೋಂಕು ದೃಢಪಟ್ಟ ನಂತರ ಜುಲೈ 26 ರಿಂದ ಮೈಸೂರಿನ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ಡಾ.ರಾಚಯ್ಯ ಇಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೈಸೂರಿನ ಉದಯಗಿರಿ ನಿವಾಸಿಯಾಗಿದ್ದ ರಾಚಯ್ಯ ಅವರು, ಕಳೆದ 22 ವರ್ಷಗಳಿಂದ ಚಾಮರಾಜನಗರ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜುಲೈ 31 ರಂದು ಇವರು ನಿವೃತ್ತರಾಗಿದ್ದರೂ ಸಹ ಆಸ್ಪತ್ರೆಯಲ್ಲಿ ಇದ್ದುದ್ದರಿಂದ ಇನ್ನು ಅಧಿಕಾರಿ ಹಸ್ತಾಂತರ ಮಾಡಿರಲಿಲ್ಲ. ಅಷ್ಟರೊಳಗೆ ಕೊರೊನಾ ಸೋಂಕಿಗೆ ತುತ್ತಾಗಿ ಮೃತಪಟ್ಟಿದ್ದಾರೆ.

ಆಯುಷ್ ವೈದ್ಯಾಧಿಕಾರಿ ಡಾ.ರಾಚಯ್ಯ ಅವರಿಗೆ ಮಧುಮೇಹ ಹಾಗೂ ರಕ್ತದೊತ್ತಡ ಇತ್ತು ಎಂದು ಹೇಳಲಾಗಿದೆ. ಇವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಆಯುಷ್ ಇಲಾಖೆಯ ಇಬ್ಬರು ಸಿಬ್ಬಂದಿಯ ಕೊರೊನಾ ವರದಿ ನೆಗೆಟಿವ್ ಬಂದಿದೆ.












Click it and Unblock the Notifications