ಸಚಿವ ಬಿ. ಶ್ರೀರಾಮುಲು ಮಾನವೀಯತೆಗೆ ಜನರ ಶ್ಲಾಘನೆ
ಚಾಮರಾಜನಗರ, ಸೆಪ್ಟೆಂಬರ್ 25 : "ಜೀವಕ್ಕೆ ಬೆಲೆ ಕಟ್ಟಲಾಗದು. ಆಪತ್ಕಾಲದಲ್ಲಿ ಹೆಣ್ಣು ಮಗಳ ಜೀವ ರಕ್ಷಿಸಿ ಧನ್ಯನಾದೆ" ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
"ನಾನೇನೋ ದೊಡ್ಡ ಕೆಲಸ ಮಾಡಿದೆ ಎಂದು ಹೇಳಿಕೊಳ್ಳುತ್ತಿಲ್ಲ. ಪ್ರತಿಯೊಬ್ಬರಿಗೂ ಮಾನವೀಯ ಕಳಕಳಿ ಇದ್ದರೆ ಆರೋಗ್ಯವಂತ ಸಮಾಜ ನಿರ್ಮಾಣವಾಗುತ್ತದೆ ಎಂಬುದು ನನ್ನ ಆಶಯ" ಎಂದು ಶ್ರೀರಾಮುಲು ಫೇಸ್ಬುಕ್ನಲ್ಲಿ ಬರೆದುಕೊಂಡಿದ್ದಾರೆ.
ಚಾಮರಾಜನಗರದಲ್ಲಿ ತೀವ್ರವಾಗಿ ಅಸ್ವಸ್ಥಗೊಂಡು ಕುಸಿದು ಬಿದ್ದ ಮಹಿಳೆಯನ್ನು ತಮ್ಮ ಕಾರಿನಲ್ಲಿಯೇ ಆಸ್ಪತ್ರೆಗೆ ಕಳುಹಿಸಿದ ಆರೋಗ್ಯ ಸಚಿವರ ಕಾರ್ಯ ವೈಖರಿಗೆ ಶ್ಲಾಘನೆ ವ್ಯಕ್ತವಾಗುತ್ತಿದೆ. ಮಹಿಳೆ ಆರೋಗ್ಯವಾಗಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಕ್ಕಿದೆ.

ರಸ್ತೆಯಲ್ಲಿ ಆಗಿದ್ದೇನು?: ಆರೋಗ್ಯ ಸಚಿವ ಬಿ. ಶ್ರೀರಾಮುಲು ಚಾಮರಾಜನಗರಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ರಸ್ತೆ ಬದಿಯ ಮನೆಯೊಂದರ ಬಳಿ ಮಹಿಳೆಯೊಬ್ಬರು ಅನಾರೋಗ್ಯದಿಂದ ತೀವ್ರ ಅಸ್ವಸ್ಥಗೊಂಡು ಕುಸಿದು ಬಿದ್ದಿದ್ದರು.
ಇದನ್ನು ಗಮನಿಸಿದ ಸಚಿವರು ಅವರ ಕಾರಿನಲ್ಲಿ ಮಹಿಳೆಯನ್ನು ಮಲೆ ಮಹದೇಶ್ವರದ ಆಸ್ಪತ್ರೆಗೆ ಕಳುಹಿಸಿಕೊಟ್ಟರು. ಬೆಟ್ಟಕ್ಕೆ ಹೋಗಿ ವಾಪಸ್ ಆಗುವಾರ ಆಸ್ಪತ್ರೆಗೆ ಭೇಟಿ ನೀಡಿ ಮಹಿಳೆ ಆರೋಗ್ಯ ವಿಚಾರಿಸಿದ್ದಾರೆ. ಮಹಿಳೆ ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
"ಆರೋಗ್ಯ ಸಚಿವನಾಗಿ ಅಲ್ಲದೇ ಇದ್ದರೂ ಒಬ್ಬ ಸಾಮಾನ್ಯನಾಗಿ ಇನ್ನೊಬ್ಬರ ಪ್ರಾಣ ಉಳಿಸಿದ್ದಕ್ಕಿಂತ ಸಮಾಧಾನದ ಸಂಗತಿ ಇನ್ನೇನಿದೆ?" ಎಂದು ಬಿ. ಶ್ರೀರಾಮುಲು ಹೇಳಿದ್ದಾರೆ.
-
ಮನೆಯಲ್ಲಿ ಹಾಗಲಕಾಯಿ ಬೆಳೆಸುತ್ತಿದ್ದೀರಾ? ಹಾಗಾದರೆ 4 ವಾಸ್ತು ನಿಯಮಗಳು ತಿಳಿಯಿರಿ -
ಬಾತ್ರೂಮ್ಗೂ ವಾಸ್ತು ಇದೆ; ಐದು ತಪ್ಪುಗಳನ್ನು ಮಾಡುವವರು ಈ ನಿಯಮಗಳು ತಿಳಿಯಿರಿ -
Darshan: ನಟ ದರ್ಶನ್ ಕಾನೂನು ಹೋರಾಟಕ್ಕೆ ಗೆಲುವು: 'ಬಾಸ್' ಸಿನಿಮಾ ಬಿಡುಗಡೆಗೆ ಕೋರ್ಟ್ ತಡೆ -
Copra Price: ಇದೇ ಮೊಟ್ಟ ಮೊದಲ ಬಾರಿ ತಿಪಟೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ -
KSRTC ನೌಕರರ ಹಿಂಬಾಕಿ 1271 ರೂ ಬಿಡುಗಡೆ; ವೇತನ ಹೆಚ್ಚಳಕ್ಕೆ ಮುಹೂರ್ತ ಫಿಕ್ಸ್: ಏ.17ಕ್ಕೆ ನಿರ್ಣಾಯಕ ಸಭೆ -
ಕರ್ನಾಟಕ ದ್ವಿತೀಯ PUC ಫಲಿತಾಂಶಕ್ಕೆ ತಟ್ಟಿದ ಚುನಾವಣಾ ನೀತಿ ಸಂಹಿತೆ ಬಿಸಿ: ಏಪ್ರಿಲ್ 8ಕ್ಕೂ ರಿಸಲ್ಟ್ ಬರೋದು ಡೌಟ್? -
Viral: ಕಚೇರಿಗೆ ಬಂದ ಪೋಷಕರು, ಮ್ಯಾನೇಜರ್ ಬಳಿ ಮಗಳ ವರ್ತನೆ ಬಗ್ಗೆ ವಿಚಾರಣೆ: ಶಾಲಾ ದಿನಗಳನ್ನು ನೆನಪಿಸಿದ ವಿಡಿಯೋ -
Divorce Celebration: ಡಿವೋರ್ಸ್ ಪಡೆದ ಮಗಳಿಗೆ ಸಿಹಿ ತಿನ್ನಿಸಿ ಅದ್ದೂರಿ ಸ್ವಾಗತ: ತಂದೆಯ ಸಂಭ್ರಮಾಚರಣೆ ವಿಡಿಯೋ ವೈರಲ್ -
Gold Rate April 7: ಚಿನ್ನ - ಬೆಳ್ಳಿ ಬೆಲೆ ಸತತ 3ನೇ ದಿನವೂ ಇಳಿಕೆ; ಚಿನ್ನ ಪ್ರಿಯರಿಗೆ ಗುಡ್ನ್ಯೂಸ್ -
Viral Video: ಆರ್ಸಿಬಿ Vs ಸಿಎಸ್ಕೆ ಪಂದ್ಯ; ಕರ್ನಾಟಕ Vs ತಮಿಳುನಾಡು ಮಾಡಬೇಡಿ ಎಂದ ಸಿಎಸ್ಕೆ ಫ್ಯಾನ್ -
Viral Video: ನಾಳೆಯೇ ನಿಮ್ಮ ಕೆಲಸ ಹೋದರೆ ಏನು ಮಾಡುವಿರಿ? ಮಾಜಿ ಗೂಗಲ್ ಉದ್ಯೋಗಿಯ ಪ್ರಶ್ನೆಗೆ ದಂಗಾದ ನೆಟ್ಟಿಗರು -
Karnataka Rain Updates: ಚಂಡಮಾರುತ ಪ್ರಸರಣ ಪ್ರಭಾವ: ಬೆಂಗಳೂರು ಸೇರಿ ಕರ್ನಾಟಕದ 8 ಜಿಲ್ಲೆಗಳಲ್ಲಿ 3ದಿನ ಮಳೆ












Click it and Unblock the Notifications