ದಲಿತ ಯುವಕನ ಬೆತ್ತಲೆ ಮೆರವಣಿಗೆ ಪ್ರಕರಣ: ಆರೋಪಿಗಳಿಗೆ ಷರತ್ತುಬದ್ಧ ಜಾಮೀನು
ಚಾಮರಾಜನಗರ, ಜುಲೈ 23: ಚಾಮರಾಜನಗರದ ಗುಂಡ್ಲುಪೇಟೆ ಸಮೀಪದ ಕಬ್ಬೆಕಟ್ಟೆ ಶನೇಶ್ವರ ದೇವಸ್ಥಾನದಲ್ಲಿ ಕಳೆದ ತಿಂಗಳು, ದಲಿತ ಯುವಕನ ಮೇಲೆ ಹಲ್ಲೆ ಹಾಗೂ ಬೆತ್ತಲೆ ಮೆರವಣಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿಗಳಿಗೆ, ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆರೋಪಿಗಳಾದ ದೇವಸ್ಥಾನದ ಅರ್ಚಕ ಶಿವಪ್ಪ, ಬಸವರಾಜು, ಮಾಣಿಕ್ಯ, ಸತೀಶ್, ಚನ್ನಕೇಶವಮೂರ್ತಿ ಹಾಗೂ ಪುಟ್ಟಸ್ವಾಮಿ ಅವರು ಜಾಮೀನು ಕೋರಿ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಧೀಶ ಜಿ.ಬಸವರಾಜ ಅವರು ಆದೇಶ ಪ್ರಕಟಿಸಿದರು.

ಇದಕ್ಕೂ ಮುನ್ನ, ಆರೋಪಿಗಳ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗಿಲ್ಲ. ಹಾಗಾಗಿ, ಜಾಮೀನು ಮಂಜೂರು ಮಾಡಲಾಗಿದೆ ಎಂದು ನ್ಯಾಯಾಧೀಶರು ಹೇಳಿದ್ದು, ಆರೋಪಿಗಳು ತಲಾ 1 ಲಕ್ಷ ಮೊತ್ತದ ಬಾಂಡ್ ಹಾಗೂ ಅದಕ್ಕೆ ಇಬ್ಬರ ಭದ್ರತೆ ನೀಡಬೇಕು. ಪ್ರತಿ ದಿನ ಠಾಣೆಗೆ ಹೋಗಿ ಸಹಿ ಹಾಕಬೇಕು ಮತ್ತು ಸಾಕ್ಷ್ಯಗಳ ನಾಶಕ್ಕೆ ಯತ್ನಿಸಬಾರದು ಎಂದು ಆದೇಶಿಸಲಾಗಿದೆ.












Click it and Unblock the Notifications