ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬಂಡೀಪುರ ಕಾಳ್ಗಿಚ್ಚು, ಬೆಂಕಿ ನಂದಿಸಲು ಹರಸಾಹಸ

|
Google Oneindia Kannada News

ಚಾಮರಾಜನಗರ, ಫೆಬ್ರವರಿ 24 : ಬಂಡೀಪುರ ರಾಷ್ಟ್ರೀಯ ಉದ್ಯಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಬೆಂಕಿ ಇನ್ನೂ ಹತೋಟಿಗೆ ಬಂದಿಲ್ಲ. ಬೆಂಕಿಯನ್ನು ನಂದಿಸುವ ಪ್ರಯತ್ನ ಮುಂದುವರೆದಿದ್ದರೂ ಬೀಸುತ್ತಿರುವ ಭಾರಿ ಗಾಳಿಯಿಂದಾಗಿ ಬೆಂಕಿ ವಿಸ್ತರಿಸುತ್ತಲೇ ಹೋಗುತ್ತಿದೆ.

ರಾಷ್ಟ್ರೀಯ ಉದ್ಯಾನದ ವ್ಯಾಪ್ತಿಗೆ ಬರುವ ಗೋಪಾಲಸ್ವಾಮಿ ಬೆಟ್ಟವಲಯದ ಕಬ್ಬೇಪುರ-ಚೌಡಹಳ್ಳಿ ಭಾಗದಲ್ಲಿ ಶುಕ್ರವಾರ ಮಧ್ಯಾಹ್ನ ಬೆಂಕಿ ಕಂಡುಬಂದಿತ್ತು. ಎರಡು ದಿನಗಳು ಕಳೆದರೂ ಬೆಂಕಿ ಇನ್ನೂ ಹತೋಟಿಗೆ ಬಂದಿಲ್ಲ.

ಬಂಡೀಪುರದಲ್ಲಿ ಆರದ ಬೆಂಕಿ;ವನ್ಯ ಪ್ರಾಣಿಗಳು ಸಾವು, ಸಾವಿರಾರು ಎಕರೆ ಅರಣ್ಯ ನಾಶಬಂಡೀಪುರದಲ್ಲಿ ಆರದ ಬೆಂಕಿ;ವನ್ಯ ಪ್ರಾಣಿಗಳು ಸಾವು, ಸಾವಿರಾರು ಎಕರೆ ಅರಣ್ಯ ನಾಶ

ಅರಣ್ಯ ಇಲಾಖೆ ಸಿಬ್ಬಂದಿ, ಸ್ವಯಂ ಸೇವಕರ ನೆರವಿನಿಂದ ಕಾಳ್ಗಿಚ್ಚು ನಿಯಂತ್ರಿಸಲು ಹರಸಾಹಸ ಪಡಲಾಗುತ್ತಿದೆ. ಗಾಳಿಯ ವೇಗಕ್ಕೆ ಬೆಂಕಿ ವ್ಯಾಪಿಸುತ್ತಲೇ ಇದ್ದು, ವನ್ಯ ಜೀವಿಗಳು ಸಂಕಷ್ಟಕ್ಕೆ ಸಿಲುಕಿವೆ. ಬೆಂಕಿ ನಂದಿಸಲು ಜನರ ಸಹಕಾರವನ್ನು ಕೋರಲಾಗಿದೆ.

ಕಾಡ್ಗಿಚ್ಚಿನಿಂದ ಬಂಡೀಪುರ ಅರಣ್ಯ ರಕ್ಷಿಸಿ : ನಟ ದರ್ಶನ್ ಮನವಿಕಾಡ್ಗಿಚ್ಚಿನಿಂದ ಬಂಡೀಪುರ ಅರಣ್ಯ ರಕ್ಷಿಸಿ : ನಟ ದರ್ಶನ್ ಮನವಿ

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಂಡೀಪುರ ಕಾಳ್ಗಿಚ್ಚು ಕುರಿತು ಟ್ವೀಟ್ ಮಾಡಿದ್ದಾರೆ. ಬೆಂಕಿ ಅವಘಡ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ.

Array

ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ

ಬಂಡೀಪುರ ಮೀಸಲು ಅರಣ್ಯದ ಬೆಂಕಿ ಅವಘಡದ ಬೆಳವಣಿಗೆಯನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಅರಣ್ಯ ಸಚಿವರು ಬೆಂಕಿ ಹರಡದಂತೆ ನಡೆಯುತ್ತಿರುವ ಕಾರ್ಯಾಚರಣೆಯ ಮೇಲುಸ್ತುವಾರಿ ವಹಿಸಿದ್ದಾರೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಹೊತ್ತಿ ಉರಿದ ಬಂಡೀಪುರ: ಬೆಂಕಿಯಲ್ಲಿ ಬೆಂದ ಪ್ರಾಣಿಗಳು, 2500 ಎಕರೆ ಅರಣ್ಯ ಪ್ರದೇಶ ನಾಶ

ಸಚಿವರ ಟ್ವೀಟ್

ಬಂಡೀಪುರದ ಬೆಂಕಿಯ ಸಂಬಂಧ ಮಾನ್ಯ ಮುಖ್ಯಮಂತ್ರಿಗಳು ವಿಶೇಷ ಕಾಳಜಿ ವಹಿಸಿದ್ದು, ಬೆಂಕಿ ಆರಿಸಲು ಸೂಕ್ತ ಕ್ರಮ ಕೈಗೊಳ್ಳಲು ಆದೇಶಿಸಿದ್ದಾರೆ ಎಂದು ಸಚಿವ ಜಿ.ಟಿ.ದೇವೇಗೌಡ ಟ್ವೀಟ್ ಮಾಡಿದ್ದಾರೆ.

ಸ್ವಯಂ ಸೇವಕರು ನೆರವಾಗಿ

ನಟ ದರ್ಶನ್ ಅವರು ಬಂಡೀಪುರ ಕಾಳ್ಗಿಚ್ಚು ಕುರಿತು ಟ್ವೀಟ್ ಮಾಡಿದ್ದಾರೆ. ವನಜೀವಿ ಸಂಕುಲಕ್ಕೆ ತೊಂದರೆಯುಂಟಾಗಿದೆ ಸ್ವಯಂ ಸೇವಕರು ದಯಮಾಡಿ ಸಹಕಾತ ನೀಡಿ ಎಂದು ಮನವಿ ಮಾಡಿದ್ದಾರೆ.

ಬೆಂಕಿಯ ತೀವ್ರತೆಗೆ ಸಾಕ್ಷಿ

ಬಂಡೀಪುರ ರಾಷ್ಟ್ರೀಯ ಉದ್ಯಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಾಣಿಸಿಕೊಂಡಿರುವ ಬೆಂಕಿ ಇನ್ನೂ ಹತೋಟಿಗೆ ಬಂದಿಲ್ಲ. ಬೆಂಕಿಯ ತೀವ್ರತೆ ಎಷ್ಟಿದೆ? ಎಂಬುದಕ್ಕೆ ಚಿತ್ರಗಳೇ ಸಾಕ್ಷಿಯಾಗಿವೆ.

English summary
A major fire in Karnataka's Bandipur Tiger Reserve forest. Fire spread to over 8 km. In a tweet Chief Minister H.D.Kumaraswamy said that, We are closely monitoring the forest fire in Bandipur.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X