ಮೌಢ್ಯತೆಗೆ ಸೆಡ್ಡು ಹೊಡೆದ ಬಸವರಾಜ ಬೊಮ್ಮಾಯಿ; ಚಾಮರಾಜನಗರಕ್ಕೆ ಭೇಟಿ ನೀಡಿ ಅಧಿಕಾರ ಕಳೆದುಕೊಂಡವರ ಪಟ್ಟಿ ಇಲ್ಲಿದೆ
ಚಾಮರಾಜನಗರ, ಡಿಸೆಂಬರ್, 13: ಚಾಮರಾಜನಗರಕ್ಕೆ ಹೋದರೆ ಅಧಿಕಾರ ಹೋಗಲಿದೆ ಎಂಬ ಪದ್ಧತಿ ಹಿಂದಿನಿಂದಲೂ ಬಿಜೆಪಿಯಲ್ಲಿ ಇತ್ತು. ಆದರೆ ಇದೀಗ ಮೌಢ್ಯವನ್ನು ಬದಿಗೊತ್ತಿ ಎರಡನೇ ಬಾರಿ ಸಿಎಂ ಬಸವರಾಜ ಬೊಮ್ಮಾಯಿ ನಗರಕ್ಕೆ ಭೇಟಿ ನೀಡುತ್ತಿದ್ದಾರೆ.
ಸಮಾಜವಾದಿ ರಾಜಕಾರಣಿ ಸಿದ್ದರಾಮಯ್ಯ ಅವರಿಂದ ಚಾಮರಾಜನಗರಕ್ಕೆ ಅಂಟಿದ್ದ ಮೌಢ್ಯ ಅಳಿದರೂ ಸಹ ತದನಂತರ ಬಂದ ಬಿ.ಎಸ್.ಯಡಿಯೂರಪ್ಪ ಕೂಡ ಗಡಿಜಿಲ್ಲೆಗೆ ಕಾಲಿಡಲೇ ಇಲ್ಲ. ಆದರೆ ಬಸವರಾಜ ಬೊಮ್ಮಾಯಿ ಇದೀಗ 2ನೇ ಬಾರಿಗೆ ಗಡಿಜಿಲ್ಲೆಗೆ ಆಗಮಿಸುತ್ತಿದ್ದು, ನೂರಾರು ಕೋಟಿ ವೆಚ್ಚದ ಯೋಜನೆಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಂದು ಮೌಢ್ಯ ಪ್ರಾರಂಭವಾಗುವ ಹೊತ್ತಿನಲ್ಲಿ ತಂದೆ ಭೇಟಿ ಕೊಟ್ಟಿದ್ದರೆ, ಮೌಢ್ಯ ಮಾಯವಾಗಿರುವ ಈ ಕಾಲದಲ್ಲಿ ಮಗ ಸಿಎಂ ಆಗಿ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡುತ್ತಿದ್ದಾರೆ.
1988ರಲ್ಲಿ ಮುಖ್ಯಮಂತ್ರಿಯಾಗಿದ್ದ ಎಸ್.ಆರ್. ಬೊಮ್ಮಾಯಿ ಚಾಮರಾಜನಗರಕ್ಕೆ ಭೇಟಿ ಕೊಟ್ಟು ತಾಲೂಕು ಕಚೇರಿ ಸಂಕೀರ್ಣ ಮತ್ತು ತಾಲೂಕು ಆಸ್ಪತ್ರೆಉನ್ನು ಉದ್ಘಾಟಿಸಿದ್ದರು. ಅದರಂತೆಯೇ ಇದೀಗ ಎಸ್.ಆರ್. ಬೊಮ್ಮಾಯಿ ಅವರ ಪುತ್ರ ಹಾಲಿ ಸಿಎಂ ಬಸವರಾಜ ಬೊಮ್ಮಾಯಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ.

ಚಾಮರಾಜನಗರಕ್ಕೆ ಭೇಟಿ ನೀಡಲಿರೋ ಸಿಎಂ
ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಹೋದರೆ ಅಧಿಕಾರ ಹೋಗುತ್ತದೆ ಎನ್ನುವ ಅಪವಾದ ಆರಂಭವಾಗಿದ್ದು ದೇವರಾಜ ಅರಸು ಅವರ ಕಾಲದಿಂದ. ಆರ್. ಗುಂಡೂರಾವ್, ರಾಮಕೃಷ್ಣ ಹೆಗಡೆ, ಎಸ್.ಆರ್. ಬೊಮ್ಮಾಯಿ ಹಾಗೂ ವೀರೇಂದ್ರ ಪಾಟೀಲ್ ಅಧಿಕಾರ ಕಳೆದುಕೊಂಡಿರುವ ಕೆಲ ಉದಾಹರಣೆಗಳಾಗಿವೆ. ರಾಜ್ಯದ ಮುಖ್ಯಮಂತ್ರಿಗಳ ಪಟ್ಟಿಯಲ್ಲಿ ವಿಶಿಷ್ಟ ಸಾಲಿನಲ್ಲಿ ನಿಲ್ಲುವ ದೇವರಾಜ ಅರಸು, ಐದು ವರ್ಷದ ಮೊದಲ ಅವಧಿ ಮುಗಿಸಿ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರಕ್ಕೇರಿದ್ದರು. 1977ರ ಡಿಸೆಂಬರ್ 31ರಂದು ಎರಡನೇ ಬಾರಿ ಮುಖ್ಯಮಂತ್ರಿಯಾಗಿದ್ದ ಅರಸು, 1980ರ ಜನವರಿ 7ರಂದು ಅಧಿಕಾರ ಕಳೆದುಕೊಂಡರು. ಇದಕ್ಕೂ ಮುನ್ನ ಅವರು ಚಾಮರಾಜನಗರಕ್ಕೆ ಭೇಟಿ ನೀಡಿದ್ದರು.

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಏಕೆ?
ದೇವರಾಜ ಅರಸು ರಾಜೀನಾಮೆ ನಂತರ ಮುಖ್ಯಂಮತ್ರಿಯಾಗಿ ಆರ್. ಗುಂಡೂರಾವ್ ಪ್ರಮಾಣ ವಚನ ಸ್ವೀಕಾರ ಮಾಡಿದರು. ಅವರು 1980ರ ಜನವರಿ 12 ರಿಂದ 1983ರ ಜನವರಿ 6 ರವರೆಗೆ ಆಡಳಿತ ನಡೆಸಿದರು. ಅದರೂ, ಮರು ಆಯ್ಕೆ ಆಗಲಿಲ್ಲ. ಚಾಮರಾಜನಗರಕ್ಕೆ ಭೇಟಿ ನೀಡಿದ್ದನ್ನು ಇಲ್ಲಿಯೂ ಸ್ಮರಿಸಬಹುದಾಗಿದೆ. ನಂತರ ರಾಮಕೃಷ್ಣ ಹೆಗಡೆ ಮೊದಲ ಕಾಂಗ್ರೆಸೇತರ ಮುಖ್ಯಂಮತ್ರಿಯಾಗಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರು. 1983ರ ಜನವರಿ 10 ರಿಂದ 1984ರ ಡಿಸೆಂಬರ್ 29, 1985ರ ಮಾರ್ಚ್ 8 ರಿಂದ 1986ರ ಫೆಬ್ರವರಿ 13 ಮತ್ತು 1986ರ ಫೆಬ್ರವರಿ 16 ರಿಂದ 1988ರ ಆಗಸ್ಟ್ 10ರವರೆಗೆ ಒಟ್ಟು ಮೂರು ಬಾರಿ ಮುಖ್ಯಮಂತ್ರಿಯಾದರು. ಆದರೂ ಒಮ್ಮೆಯೂ ಅವಧಿ ಮುಗಿಸಲಿಲ್ಲ. ಟೆಲಿಫೋನ್ ಕದ್ದಾಲಿಕೆ ಪ್ರಕರಣದ ಆರೋಪದಿಂದ ಅವರು ರಾಜೀನಾಮೆ ನೀಡಬೇಕಾಯಿತು. ರಾಜೀನಾಮೆಗೂ ಮುನ್ನ ಅವರು ಕೂಡ ಚಾಮರಾಜನಗರ ಜಿಲ್ಲಾ ಕೇಂದ್ರಕ್ಕೆ ಭೇಟಿ ನೀಡಿದ್ದರು.

ಬೊಮ್ಮಾಯಿ ಅಧಿಕಾರ ಕಳೆದುಕೊಂಡಿದ್ದೇಕೆ?
ರಾಮಕೃಷ್ಣ ಹೆಗಡೆ ರಾಜೀನಾಮೆ ನಂತರ ಮುಖ್ಯಮಂತ್ರಿಯಾದ ಎಸ್.ಆರ್. ಬೊಮ್ಮಾಯಿ 1988ರ ಆಗಸ್ಟ್ 13 ರಿಂದ 1989ರ ಏಪ್ರಿಲ್ 21ರವರೆಗೆ ಮಾತ್ರ ಆಡಳಿತ ನಡೆಸಿದರು. ರಾಜ್ಯದಲ್ಲಿ ಬೊಮ್ಮಾಯಿ ರಾಜೀನಾಮೆ ನಂತರ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಲಾಯಿತು. ಬೊಮ್ಮಾಯಿ ಕೂಡ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು. ನಂತರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಆಡಳಿತಕ್ಕೆ ಬಂದಿದ್ದು, 1989ರ ನವೆಂಬರ್ 30 ರಂದು ವೀರೇಂದ್ರ ಪಾಟೀಲ್ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದರು. ಆದರೆ, 1990ರ ಅಕ್ಟೋಬರ್ 10 ರಂದು ಅವರು ಅಧಿಕಾರವನ್ನು ಕಳೆದುಕೊಂಡರು. ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ ಎಸ್.ಬಂಗಾರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಲಾಯಿತು. ವೀರೇಂದ್ರ ಪಾಟೀಲ್ ಕೂಡ ಚಾಮರಾಜನಗರಕ್ಕೆ ಭೇಟಿ ನೀಡಿದ್ದರು. ಇದು ಚಾಮರಾಜನಗರಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿಗಳು ಅಧಿಕಾರ ಕಳೆದುಕೊಳ್ಳುತ್ತಾರೆ ಎನ್ನುವ ಮೌಢ್ಯ ಬೆಳೆಯಲು ಪೂರಕವಾಗಿತ್ತು ಎನ್ನಲಾಗಿದೆ.

ಮೌಢ್ಯತೆಯನ್ನು ಮೆಟ್ಟಿನಿಂತ ಹಾಲಿ ಸಿಎಂ
ಇದೆಲ್ಲಾ ಹೊರತಾಗಿ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದ ವೇಳೆ ಜಿಲ್ಲೆಗೆ ಭೇಟಿ ಕೊಟ್ಟಿದ್ದರು. ಅವರ ಬಳಿಕ, ಬೊಮ್ಮಾಯಿ ಎರಡನೇ ಬಾರಿ ಭೇಟಿ ಕೊಡುತ್ತಿದ್ದಾರೆ. ಮೈಸೂರಿನಿಂದ ರಸ್ತೆಯ ಮೂಲಕ ಆಗಮಿಸುವ ಸಿಎಂ, ಬೆಳಗ್ಗೆ 11:15ಕ್ಕೆ ಚಾಮರಾಜನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿರುವ ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳುವವರು.
ಮಧ್ಯಾಹ್ನ 2:30ಕ್ಕೆ ಹನೂರು ಪಟ್ಟಣದ ಮಹದೇಶ್ವರ ಕ್ರೀಡಾಂಗಣಕ್ಕೆ ಆಗಮಿಸಿ ಹನೂರು ಮತ್ತು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಳುವವರು. ಸಂಜೆ 4:30ಕ್ಕೆ ಮೈಸೂರಿಗೆ ತೆರಳಲಿದ್ದು, ಮಳೆ ಹಿನ್ನೆಲೆಯಲ್ಲಿ ಮಲೆಮಹದೇಶ್ವರ ಬೆಟ್ಟದ ಭೇಟಿ ಕಾರ್ಯಕ್ರಮ ರದ್ದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.
-
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ












Click it and Unblock the Notifications