Bharachukki Waterfalls: 10 ವರ್ಷಗಳ ಬಳಿಕ ಭರಚುಕ್ಕಿ ಜಲಪಾತೋತ್ಸವ ಆಯೋಜನೆ- ದಿನಾಂಕ & ಕಾರ್ಯಕ್ರಮಗಳ ವಿವರ ತಿಳಿಯಿರಿ

Bharachukki Waterfalls: ಭಾರೀ ಮಳೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಜಲಪಾತ, ಜಲಾಶಯಗಳು ತುಂಬಿ ಹರಿಯುತ್ತಿವೆ. ಹಾಗೆಯೇ ಕಾವೇರಿ ಮೈದುಂಬಿ ಹರಿಯುತ್ತಿರುವ ಪರಿಣಾಮ‌ ಕೊಳ್ಳೇಗಾಲ ತಾಲೂಕಿನ ಭರಚುಕ್ಕಿ ಜಲಪಾತ ವೈಯ್ಯಾರದಿಂದ ಧುಮ್ಮಿಕ್ಕುತ್ತಿದ್ದು, 10 ವರ್ಷಗಳ ಬಳಿಕ ಜಿಲ್ಲಾಡಳಿತ ಜಲಪಾತೋತ್ಸವ ಆಯೋಜನೆ ಮಾಡಿದೆ.

ಆಗಸ್ಟ್‌ 10ರಂದು ಸಂಜೆ 6ಕ್ಕೆ ಭರಚುಕ್ಕಿಯಲ್ಲಿ ಜಲಪಾತೋತ್ಸವ ನಡೆಯಲಿದ್ದು, ಇದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ್ ಸೇರಿದಂತೆ ಇನ್ನಿತರರು ಈ ವೇಳೆ ಹಾಜರಿರಲಿದ್ದಾರೆ.

Bharachukki Waterfalls festival After 10 years-Know details

ಶಬ್ಧ-ಬೆಳಕಿನ ಜುಗಲ್ಬಂದಿ: ಧುಮ್ಮಿಕ್ಕುವ ಜಲಪಾತಕ್ಕೆ ಶಬ್ಧ ಮತ್ತು ಬೆಳಕಿನ್ನು ಸಂಯೋಜನೆ ಮಾಡಲಿದ್ದು, ಇದರಿಂದ ಜಲಪಾತ ಮತ್ತಷ್ಟು ಆಕರ್ಷಕ ಆಗಿರಲಿದೆ. ಇನ್ನು, ಖ್ಯಾತ ಗಾಯಕಿ ಅನನ್ಯ ಭಟ್ ತಂಡ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿ ಕೊಡಲಿದೆ. ಜಾನಪದಗಳ ನಾಡು ಎಂದೇ ಚಾಮರಾಜನಗರವನ್ನು ಕರೆಯುವ ಹಿನ್ನೆಲೆ ಜಾನಪದ ಸಂಗೀತ ಸುಧೆಯೂ ಇರಲಿದೆ.

ಜಿಲ್ಲಾಡಳಿತದ ವತಿಯಿಂದ 4,000 ಆಸನ ವ್ಯವಸ್ಥೆ ಮಾಡಲಾಗಿದ್ದು, ಪಾರ್ಕಿಂಗ್ ಹಾಗೂ ಸೂಕ್ತ ಬಂದೋಬಸ್ತ್ ಅನ್ನು ಕೂಡ ಮಾಡಲಾಗಿದೆ. ಒಂದು ದಿನ ಸಾಂಸ್ಕೃತಿಕ ಕಾರ್ಯಕ್ರಮ, ಎರಡು ದಿನ ಶಬ್ಧ-ಬೆಳಕಿನ ಚಿತ್ತಾರ ಇರಲಿದ್ದು, ಪ್ರವೇಶ ಉಚಿತ ಇರಲಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಪ್ರವೇಶ ನಿರ್ಬಂಧ ತೆರವು: ಭಾರೀ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಹಲವು ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿತ್ತು. ಹಾಗೆಯೇ ಭಾರತದ ನಯಾಗರ ಎಂದೇ ಪ್ರಸಿದ್ಧಿಯಾಗಿರುವ ಕರ್ನಾಟಕ ಮತ್ತು ತಮಿಳುನಾಡು ಗಡಿಯಲ್ಲಿರುವಚಾಮರಾಜನಗರ ಜಿಲ್ಲೆಯ ಹೊಗೇನಕಲ್ ಜಲಪಾತಕ್ಕೆ ನಿರ್ಬಂಧ ಹೇರಲಾಗಿದ್ದು, ಇದೀಗ ಮತ್ತೆ ಅವಕಾಶ ಕಲ್ಪಿಸಲಾಗಿದೆ.

ಕೇರಳದ ವೈನಾಡಿನಲ್ಲಿ ಅಪಾರ ಪ್ರಮಾಣದ ಮಳೆಯಾಗಿ ಕಬಿನಿ ಜಲಾಶಯ ಭರ್ತಿಯಾಗಿದ್ದ ಹಿನ್ನೆಲೆ ಕಬಿನಿ ಜಲಾಶಯದಿಂದ 70,000 ಕ್ಯೂಸೆಕ್ಸ್ ಹಾಗೂ ಕೆಆರ್‌ಎಸ್ ಜಲಾಶಯದಿಂದ ಒಂದು ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ನೀರನ್ನು ನದಿಗೆ ಬಿಡಲಾಗಿತ್ತು. ಆದರೆ ಹೊಗೇನಕಲ್ ಫಾಲ್ಸ್‌ನಲ್ಲಿ ಕಾವೇರಿ ರೌದ್ರ ನರ್ತನ ಉಂಟಾಗಿ ಜಲಪಾತವೇ ಮುಚ್ಚಿ ಹೋಗಿತ್ತು. ಈ ಹಿನ್ನೆಲೆ ಕಾವೇರಿ ವನ್ಯಜೀವಿ ವಲಯ ವ್ಯಾಪ್ತಿಯಲ್ಲಿ ಬರುವ ಗೋಪಿನಾಥಂ ವಲಯ ಅರಣ್ಯ ಅಧಿಕಾರಿಗಳು ಜುಲೈ 20ರಿಂದ ಪ್ರವಾಸಿಗರಿಗೆ ನಿರ್ಬಂಧ ಹೇರಿದ್ದರು.

ಇದೀಗ ನದಿ ಹರಿವಿನಲ್ಲಿ ನೀರಿನ ಪ್ರಮಾಣ ಕಡಿಮೆ ಆಗಿರುವುದರಿಂದ ಆಗಸ್ಟ್ 7ರಿಂದ ಪ್ರವಾಸಿಗರಿಗೆ ತೆಪ್ಪದಲ್ಲಿ ಸಂಚಾರ ಮಾಡಲು ಅವಕಾಶ ಕಲ್ಪಿಸಿಕೊಡಲಾಗಿದೆ. ಕೆಲವು ದಿನಗಳ ಹಿಂದೆ ನದಿಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದರಿಂದ ಪ್ರವಾಸಿಗರಿಗೆ ತೆಪ್ಪ ಸಂಚಾರ ನಿರ್ಬಂಧ ಮಾಡಲಾಗಿತ್ತು. ಇದೀಗ ನೀರಿನ ಪ್ರಮಾಣ ಕಡಿಮೆಯಾಗಿದ್ದು, ತೆಪ್ಪ ಸಂಚರಿಸಲು ಅನುಕೂಲ ಆಗಿರುವುದರಿಂದ ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಆರ್‌ಎಫ್ಒ ಸಂಪತ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+