Bharat Rice: ಚಾಮರಾಜನಗರದಲ್ಲಿ ಅಕ್ಕಿ ಖರೀದಿಸಲು ನೂಕು ನುಗ್ಗಲು, ಭಾರತ್ ರೈಸ್‌ಗೆ ಬಲು ಡಿಮ್ಯಾಂಡ್‌.. ದರ ಎಷ್ಟು?

ಚಾಮರಾಜನಗರ, ಮಾರ್ಚ್‌, 01: ₹29 ರೂಪಾಯಿಗೆ 1 ಕೆಜಿ ಅಕ್ಕಿ ಕೊಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೆಯ ಭಾರತ್ ರೈಸ್ ಖರೀದಿಗೆ ಜನರು ಮುಗಿಬಿದ್ದ ಘಟನೆ ಇಂದು (ಮಾರ್ಚ್‌ 1) ಚಾಮರಾಜನಗರದಲ್ಲಿ ನಡೆಯಿತು.

ಚಾಮರಾಜನಗರ ಜಿಲ್ಲಾಡಳಿತ ಭವನ ಮುಂಭಾಗ ಎರಡು ವಾಹನಗಳಲ್ಲಿ ಇಂದು ಭಾರತ್ ರೈಸ್ ಮಾರಾಟ ಮಾಡಲು ವಾಹನಗಳು ಬರುತ್ತಿರುವ ವಿಚಾರ ತಿಳಿಯುತ್ತಿದ್ದಂತೆ ನೂರಾರು ಮಂದಿ ಅಕ್ಕಿ ಕೊಳ್ಳಲು ಮುಗಿಬಿದ್ದರು.

Bharat Rice: People Crowd to buy Bharat Rice in Chamarajanagar

ಆಹಾರ ಇಲಾಖೆ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ನೀಡಿದ ಭಾರತ್ ರೈಸ್ ಕೊಳ್ಳಲು ಚಾಮರಾಜನಗರ ಅಲ್ಲದೇ,0 ಕಾರ್ಯನಿಮಿತ್ತ ಬಂದಿದ್ದ ಗ್ರಾಮೀಣ ಪ್ರದೇಶದ ಜನರು ಕೂಡ ಸರತಿ ಸಾಲಲ್ಲಿ ನಿಂತು ಭಾರತ್ ರೈಸ್ ಖರೀದಿಸಿದರು. ಅನ್ನಭಾಗ್ಯ ಯೋಜನೆಯಡಿ ಕೂಡ 5 ಕೆಜಿ ಬದಲಿಗೆ ಹಣ ಕೊಡುತ್ತಿರುವ ಹಿನ್ನೆಲೆ ಅಕ್ಕಿಗೆ ಬೇಡಿಕೆ ಇದ್ದು, ಜನರು ಮುಗಿಬಿದ್ದು ಅಕ್ಕಿ ಖರೀದಿಸಿದರು.

ಓದಿದ ಶಾಲೆಗೆ ಅನುದಾನ ಕೊಟ್ಟ ಸಿದ್ದರಾಮಯ್ಯ: ಸಿಎಂ ಸಿದ್ದರಾಮಯ್ಯ ಅವರು ತಾವು ಓದಿದ ಸರ್ಕಾರಿ ಶಾಲೆ ಸೇರಿದಂತೆ ಇನ್ನಿತರ ಶಲೆಗಳಿಗೂ ಅನುದಾನ ನೀಡಿದ್ದಾರೆ. ಹಾಗಾದರೆ ಎಷ್ಟು ಅನುದಾನ ಕೊಟ್ಟಿದ್ದಾರೆ ಎನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.

ಸಿಎಂ ಸಿದ್ದರಾಮಯ್ಯನವರು ತಾವು ಪ್ರಾಥಮಿಕ ಶಿಕ್ಷಣ ಪಡೆದ ತಲ್ಲೂಕಿನ ಕುಪ್ಪೇಗಾಲ ಹಾಗೂ ಸಿದ್ದರಾಮನಹುಂಡಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ತಲಾ 10 ಲಕ್ಷ ರೂಪಾಯಿ ವೈಯಕ್ತಿಕ ನೆರವು ನೀಡಿದ್ದಾರೆ ಅಂತಾ ಪ್ರಜಾವಾಣಿ ವರದಿ ಮಾಡಿದೆ.

ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರವು ಶಾಲೆಗಳ ಅಭಿವೃದ್ದಿಗೆ "ನನ್ನ ಶಾಲೆ, ನನ್ನ ಜವಾಬ್ದಾರಿ" ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದ್ದು, ಶಾಲೆಗಳಲ್ಲಿ ಓದಿದ ಹಳೇ ವಿದ್ಯಾರ್ಥಿಗಳಿಗೆ ಶಾಲಾಭಿವೃದ್ಧಿ ಜವಾಬ್ದಾರಿಯನ್ನು ವಹಿಸಲಾಗುತ್ತಿದೆ. ಇನ್ನು ಈ ಯೋಜನೆ ಆರಂಭಕ್ಕೆ ಸಿಎಂ ಸಿದ್ದರಾಮಯ್ಯನವರೇ ತಾವು ಓದಿದ ಶಾಲೆಗಳಿಗೆ ದೇಣಿಗೆ ನೀಡಿದ್ದು, ಮಾರ್ಚ್‌ 7ರಂದು ಬೆಂಗಳೂರಿನಲ್ಲಿ ಚಾಲನೆ ನೀಡಲಿದ್ದಾರೆ ಎಂದು ಡಿಡಿಪಿಐ ಎಚ್‌.ಕೆ.ಪಾಂಡು ತಿಳಿಸಿದ್ದಾರೆ ಅಂತಾ ವರದಿಯಾಗಿದೆ.

10ನೇ ವರ್ಷದವರೆಗೂ ಸಿದ್ದರಾಮಯ್ಯ ಅವರು ಶಾಲೆಗೆ ಹೋಗಿರಲಿಲ್ಲ. ಸಿದ್ದರಾಮನಹುಂಡಿಯಿಂದ 1.5 ಕಿಲೋ ಮೀಟರ್‌ ದೂರವಿರುವ ಕುಪ್ಪೇಗಾಲ ಶಾಲೆಗೆ 5ನೇ ತರಗತಿವರೆಗೆ ನೇರವಾಗಿ ಪ್ರವೇಶ ಪಡೆದ ಅವರು, 7ನೇ ತರಗತಿವರೆಗೂ ಇಲ್ಲಿಯೇ ಶಿಕ್ಷಣ ಪಡೆದಿದ್ದರು ಎಂದು ತಿಳಿಸಿದರು.

2015-16ರಲ್ಲಿ ಶಾಲೆಗೆ 1 ಹೆಕ್ಟೇರ್‌ ಜಾಗದಲ್ಲಿ 8 ಕೊಠಡಿ, 2 ಶೌಚಾಲಯ ಹಾಗೂ ಕಾಂಪೌಂಡ್‌ ಸೇರಿ ಹೊಸ ಕಟ್ಟಡ ಕಟ್ಟಿಸಿಕೊಟ್ಟು ಉನ್ನತೀಕರಿಸಿದ್ದರು. ಇದೀಗ 10 ಲಕ್ಷ ರೂಪಾಯಿ ವೈಯಕ್ತಿಕ ನೆರವು ನೀಡುತ್ತಿದ್ದಾರೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರವಿ ಅವರು ತಿಳಿಸಿದ್ದಾರೆ ಎಂದು ವರದಿಯಾಗಿದೆ.

ನೆರವಿನಿಂದ ಸ್ಮಾರ್ಟ್‌ ಕ್ಲಾಸ್‌ಗಳನ್ನು ನಡೆಸಲು ಅನುಕೂಲವಾಗುವಂತೆ ಸ್ಮಾರ್ಟ್‌ ಸಿಟಿ, ಪ್ರೋಜೆಕ್ಟರ್‌ ತರಲಾಗುವುದು. ಕುರ್ಚಿ, ಮೇಜು ಸೇರಿದಂತೆ ಅಗತ್ಯ ಪರಿಕರಗಳನ್ನು ಖರೀದಿಸಲಾಗುವುದು ಎಂದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+