ಚಾಮರಾಜನಗರ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮಹೀಂದ್ರಾ ಬೊಲೆರೊ ಕಾರು ಡಿಕ್ಕಿಯಾಗಿ ಬೈಕ್‌ ಸವಾರ ಸ್ಥಳದಲ್ಲೇ ಸಾವು

ಚಾಮರಾಜನಗರ, ಸೆಪ್ಟೆಂಬರ್‌, 15: ಮಹೀಂದ್ರಾ ಬೊಲೆರೊ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಡಿಜಿಲ್ಲೆ ಚಾಮರಾಜನಗರ ತಾಲೂಕಿನ‌ ಅಟ್ಟಗುಳಿಪುರ ಗ್ರಾಮದ ಸಮೀಪ ನಡೆದಿದೆ. ಹಾಗಾದರೆ ಮೃತರ ಮೂಲ ಯಾವುದು ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.

ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ನಿವಾಸಿ ಪ್ರವೀಣ್(25) ಮೃತ ದುರ್ದೈವಿ. ಇವರಿಗೆ ಮದುವೆಯಾಗಿ ಒಂದೂವರೆ ವರ್ಷವಾಗಿದ್ದು, 2 ತಿಂಗಳ ಮಗು ಇದೆ ಎಂದು ತಿಳಿದುಬಂದಿದೆ. ಇನ್ನು ಅಪಘಾತ ಸ್ಥಳದಲ್ಲೇ ಮಗುವಿಗೆ ಕೊಂಡೊಯ್ತುತ್ತಿದ್ದ ಬಟ್ಟೆಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು.

Bike Rider death on the spot due to Mahindra Bolero car hit near Chamarajanagar

ತಮಿಳುನಾಡಿನಿಂದ ಬರುತ್ತಿದ್ದ ಬೊಲೆರೊ ವಾಹನ ಚಾಲಕ ಬೈಕ್‌ಗೆ ಅತಿವೇಗವಾಗಿ ಬಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಪ್ರವೀಣ್‌ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಇನ್ನು ಅಪಘಾತ ಆಗುತ್ತಿದ್ದಂತೆ ಪೊಲೀಸ್ ಹಾಗೂ ಆ್ಯಂಬುಲೆನ್ಸ್ ತಡವಾಗಿ ಬಂತೆಂದು ಹಾಗೂ ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಪದೇ ಪದೇ ಅಪಘಾತ ಸಂಭವಿಸುತ್ತಿವೆ ಎಂದು ಆಕ್ರೋಶಗೊಂಡ ಸ್ಥಳೀಯರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಯಾವುದೇ ಸೂಚನಾ ಫಲಕಗಳು, ರಸ್ತೆ ಡುಬ್ಬಗಳು, ಜೀಬ್ರಾ ಕ್ರಾಸ್ ಮಾಡಿಲ್ಲ. ವೇಗ ನಿಯಂತ್ರಣಕ್ಕೆ ಯಾವುದೇ ಕ್ರಮ‌ ಕೈಗೊಂಡಿಲ್ಲ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತು ಪೊಲೀಸರ ವಿರುದ್ಧ ಸ್ಥಳೀಯರು ಘೋಷಣೆ ಕೂಗಿ ಆಕ್ರೋಶ ಹೊರಹಾಕುತ್ತಿದ್ದಾರೆ. ತಮಿಳುನಾಡು ಹಾಗೂ ಕರ್ನಾಟಕ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಇದಾಗಿದ್ದು, ಒಂದು ತಾಸಿನಿಂದ ವಾಹನ ಸಂಚಾರ ಬಂದ್ ಆಗಿದೆ‌.

ಇದೇ ರಸ್ತೆಯಲ್ಲಿ ರಾತ್ರಿ ಮತ್ತೋರ್ವ ಸಾವು: ಇದೇ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಹರದನಹಳ್ಳಿ ಬಳಿ ಶನಿವಾರ ತಡರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದರು. ಅಟ್ಟಗುಳಿಪುರದ ಪ್ರಮೋದ್ ಎಂಬವರು ಮೃತಪಟ್ಟವರಾಗಿದ್ದಾರೆ. ಎರಡು ಅಪಘಾತಗಳಿಂದ ಆಕ್ರೋಶಗೊಂಡ ಜನರು ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಅಪಘಾತದಲ್ಲಿ 8 ಜನ ಸಾವು: ಲಾರಿ ಮತ್ತು ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ 8 ಜನ ಸಾವನ್ನಪ್ಪಿದ್ದ, 33 ಮಂದಿ ಭೀಕರವಾಗಿ ಗಾಯಗೊಂಡ ಘಟನೆ ಶುಕ್ರವಾರ ಸೆಪ್ಟೆಂಬರ್‌ 13ರಂದು ಆಂಧ್ರಪ್ರದೇಶದಲ್ಲಿ ನಡೆದಿದೆ.

ತಿರುಪತಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಮೊಘಲಿ ಘಾಟ್ ರಸ್ತೆಯಲ್ಲಿ ಎರಡು ಲಾರಿಗಳಿಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸುಮಾರು 30 ಮಂದಿ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿತ್ತೂರು ಜಿಲ್ಲೆಯ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಮಾಹಿತಿ ತಿಳಿದ ತಕ್ಷಣವೇ ಪೊಲೀಸರು ಮತ್ತು ಇತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ಸ್ಥಳಾಂತರಿಸಿದರು. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳಾಂತರಿಸಲಾಗುತ್ತಿದೆ. ಇನ್ನು ತನಿಖೆ ಆರಂಭಿಸಲು ಪ್ರಕರಣ ದಾಖಲಿಸಲಾಗಿದ್ದು, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದೆ.

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದು, ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+