ಬಿಳಿಗಿರಿರಂಗನ ಬೆಟ್ಟಕ್ಕೆ 2 ದಿನ ದ್ವಿಚಕ್ರ ವಾಹನ ನಿರ್ಬಂಧ, ಯಾಕೆ ಹಾಗೂ ಯಾವಾಗ?-ಮಾಹಿತಿ ತಿಳಿಯಿರಿ
ಚಾಮರಾಜನಗರ, ಜನವರಿ, 12: ಸಂಕ್ರಾಂತಿ ಹಬ್ಬದ ಪ್ರಯುಕ್ತ ನಡೆಯಲಿರುವ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ ಹಾಗೂ ಚಿಕ್ಕ ಜಾತ್ರಾ ಸಂಬಂಧ ಬಿಳಿಗಿರಿರಂಗನಬೆಟ್ಟಕ್ಕೆ ಯಳಂದೂರು ತಾಲೂಕಿನ ಗುಂಬಳ್ಳಿ ಮತ್ತು ಚಾಮರಾಜನಗರ ತಾಲೂಕಿನ ಹೊಂಡರಬಾಳು ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಮೂಲಕ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಜನವರಿ 15ರಿಂದ 16ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಬಿಳಿಗಿರಿರಂಗನ ಬೆಟ್ಟದಲ್ಲಿ ಜರುಗಲಿರುವ ಬಿಳಿಗಿರಿರಂಗನಾಥಸ್ವಾಮಿ ರಥೋತ್ಸವ ಹಾಗೂ ಚಿಕ್ಕ ಜಾತ್ರಾ ಹಿನ್ನೆಲೆ ಜಿಲ್ಲೆ, ಹೊರ ಜಿಲ್ಲೆಗಳಿಂದ ಲಕ್ಷಕ್ಕೂ ಅಧಿಕ ಭಕ್ತಾಧಿಗಳು ಸೇರುವ ಸಂಭವವಿದ್ದು, ವಾಹನ ದಟ್ಟಣೆ ಹೆಚ್ಚಾಗಿ ಸಾರ್ವಜನಿಕ ಸಾರಿಗೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗುವುದರಿಂದ ಮತ್ತು ಸದರಿ ರಸ್ತೆಯು ಅರಣ್ಯ ಪ್ರದೇಶದಿಂದ ಕೂಡಿದ್ದು, ತುಂಬಾ ಕಡಿದಾದ ಹಾಗೂ ಕಿರಿದಾಗಿರುವುದರಿಂದ ರಸ್ತೆಯ ಸಂಚಾರದಲ್ಲಿ ದಟ್ಟಣೆಯಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುತ್ತದೆ.

ಆದ್ದರಿಂದ ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ, ನಿಯಮಾವಳಿ ಹಾಗೂ ಸಂಚಾರಿ ನಿಯಂತ್ರಣ ಕಾಯ್ದೆ ಅನ್ವಯ ಬಿಳಿಗಿರಿರಂಗನಬೆಟ್ಟಕ್ಕೆ ಜನವರಿ 15ರಿಂದ 16ರವರೆಗೆ ಯಳಂದೂರು ತಾಲೂಕಿನ ಗುಂಬಳ್ಳಿ ಮತ್ತು ಚಾಮರಾಜನಗರ ತಾಲೂಕಿನ ಹೊಂಡರಬಾಳು ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ಮೂಲಕ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಆದೇಶದಲ್ಲಿ ತಿಳಿಸಿದ್ದಾರೆ.
ಮಲೆ ಮಾದಪ್ಪನ ಬೆಟ್ಟಕ್ಕೆ ಹರಿದುಬಂದ ಭಕ್ತಸಾಗರ
ಎಳ್ಳು ಅಮಾವಾಸ್ಯೆ ಹಿನ್ನೆಲೆ ನಿನ್ನೆ (ಜನವರಿ 11) ಪ್ರಸಿದ್ಧ ಯಾತ್ರಸ್ಥಳವಾದ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಭಕ್ತಸಾಗಾರವೇ ಹರಿದು ಬಂದಿತ್ತು.
ಅಮಾವಾಸ್ಯೆ ಪೂಜೆ ಹಿನ್ನೆಲೆ ಬೆಂಗಳೂರು, ರಾಮನಗರ, ಕನಕಪುರ, ಮೈಸೂರು, ಮಂಡ್ಯ ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಮೈಸೂರು ನಂಜನಗೂಡು ಸೇರಿದಂತೆ ರಾಜ್ಯದ ವಿವಿಧಡೆಯಿಂದ ಶ್ರೀ ಕ್ಷೇತ್ರಕ್ಕೆ ಆಗಮಿಸಿ ವಿವಿಧ ಸೇವೆಗಳನ್ನು ಸಮರ್ಪಿಸಿ ದರ್ಶನ ಪಡೆದರು.
ಶ್ರೀ ಕ್ಷೇತ್ರಕ್ಕೆ ಆಗಮಿಸಿದ್ದ ಭಕ್ತಾದಿಗಳಿಗೆ ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕುಡಿಯುವ ನೀರು, ನೆರಳಿನ ವ್ಯವಸ್ಥೆ, ವ್ಯವಸ್ಥಿತ ಸರತಿ ಸಾಲು, ಶಿಫಾರಸ್ಸು ಪತ್ರ ತಂದವರಿಗೆ ನೇರದರ್ಶನ, 60 ವರ್ಷ ಮೇಲ್ಪಟ್ಟವರಿಗೂ ವಿಶೇಷ ದರ್ಶನ ಸೇರಿದಂತೆ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಲಾಗಿತ್ತು.
ಮಾದಪ್ಪನಿಗೆ ತ್ರಿಕಾಲ ಪೂಜೆಯ ಜೊತೆಗೆ ಎಳ್ಳಿನ ಎಣ್ಣೆಯಿಂದ ಅಭಿಷೇಕ, ಪೂಜಾ ಕಾರ್ಯಗಳನ್ನು ನೆರವೇರಿಸಲಾಯಿತು. ದೇವಾಲಯದ ರಾಜಗೋಪುರ ಗರ್ಭಗುಡಿಯ ಗೋಪುರ, ಕಟ್ಟೆ ಬಸವೇಶ್ವರ ದೇವಾಲಯದ ಒಳಾಂಗಣ, ಹೊರಾಂಗಣ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಆಕರ್ಷಕ ವಿದ್ಯುತ್ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications