ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇವಾಲಯಗಳ ಸ್ವಾಯತ್ತತೆ: ಸಿದ್ದರಾಮಯ್ಯ ಮಹತ್ವದ ಪತ್ರಿಕಾ ಹೇಳಿಕೆ

|
Google Oneindia Kannada News

ಚಾಮರಾಜನಗರ, ಜ 2: ದೇವಾಲಯಗಳನ್ನು ಸ್ವತಂತ್ರಗೊಳಿಸುವ ಸರ್ಕಾರದ ನಿರ್ಧಾರ ಕುರಿತು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿದ್ದಾರೆ. "ಸರ್ಕಾರವು ರಾಜ್ಯದ ದೇವಸ್ಥಾನಗಳನ್ನು ಸ್ವತಂತ್ರಗೊಳಿಸುವುದಾಗಿ, ಸ್ವಾಯತ್ತಗೊಳಿಸುವುದಾಗಿ ಹೇಳುತ್ತಿದೆ. ದೇವಸ್ಥಾನಗಳು ಈಗಲೂ ಸ್ವತಂತ್ರವಾಗಿಯೆ ಇವೆ. ಸರ್ಕಾರ ಅನೇಕ ದೇವಸ್ಥಾನಗಳಿಗೆ ನೆರವು ನೀಡುವುದರ ಮೂಲಕ ಅವುಗಳನ್ನು ಪೊರೆಯುತ್ತಿದೆ" ಎಂದು ಸಿದ್ದರಾಮಯ್ಯ ಹೇಳಿದರು.

ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಚಾಮರಾಜನಗರದಲ್ಲಿ ಆಯೋಜಿಸಿದ್ದ ಮೇಕೆದಾಟು ಜನ ಜಾಗೃತಿ ಸಮಾವೇಶಕ್ಕೆ ಮುನ್ನ ನಡೆದ ಪಾದಯಾತ್ರೆಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ, "ಮುಜರಾಯಿ ಇಲಾಖೆಯ ವಾರ್ಷಿಕ ಬಜೆಟ್ಟು ಸುಮಾರು 350 ಕೋಟಿಗಳಷ್ಟಿದೆ. ಸರ್ಕಾರವೇ ದೇವಸ್ಥಾನಗಳನ್ನು ನಡೆಸುವುದೆಂದರೆ ಸಮಾಜದ ಕಟ್ಟ ಕಡೆಯ ಮನುಷ್ಯರಿಗೂ ಅವುಗಳ ಮೇಲೆ ಹಕ್ಕುಗಳು ಇವೆಯೆಂದು ಅರ್ಥ" ಎನ್ನುವ ಅಭಿಪ್ರಾಯವನ್ನು ಪಟ್ಟರು.

ದೇವಾಲಯ ಸ್ವಾಯತ್ತತೆ: ಮುಜರಾಯಿ ದೇವರ ಜವಾಬ್ದಾರಿ ಭಕ್ತರಿಗೆ, ತಪ್ಪು, ಒಪ್ಪುಗಳುದೇವಾಲಯ ಸ್ವಾಯತ್ತತೆ: ಮುಜರಾಯಿ ದೇವರ ಜವಾಬ್ದಾರಿ ಭಕ್ತರಿಗೆ, ತಪ್ಪು, ಒಪ್ಪುಗಳು

"ಸರ್ಕಾರ ದೇವಸ್ಥಾನಗಳ ಮೇಲಿನ ಹಿಡಿತವನ್ನು ತಪ್ಪಿಸುವುದೆಂದರೆ ಜನ ಸಮುದಾಯಗಳಿಗೆ ಇರುವ ಅಧಿಕಾರವನ್ನು ತಪ್ಪಿಸುವುದೆಂದು ಅರ್ಥ. ಈಗ ಸರ್ಕಾರ ಮಾಡ ಹೊರಟಿರುವುದೇನೆಂದರೆ ನಾಡಿನ ಐದೂವರೆ ಕೋಟಿ ಕನ್ನಡಿಗ ಹಿಂದೂಗಳ ಅಧಿಕಾರವನ್ನು ತಪ್ಪಿಸಿ ಕೇವಲ ಶೇ.ಎರಡರಷ್ಟು ಜನರ ಕೈಗೆ ಕೊಡಲು ಮುಂದಾಗಿರುವುದು. ಸರ್ಕಾರದ ಈ ನಿರ್ಧಾರದಿಂದ ಶೇ. 80ರಷ್ಟು ಜನ ಮತ್ತೆ ಊಳಿಗಮಾನ್ಯ ಸಮಾಜದ ಕ್ರೌರ್ಯವನ್ನು ಅನುಭವಿಸಬೇಕೆಂದು ಸರ್ಕಾರ ತೀರ್ಮಾನಿಸಿದಂತೆ ಕಾಣುತ್ತಿದೆ" ಎಂದು ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದರು.

"ಬಸವಣ್ಣನವರ ನೇತೃತ್ವದ ಶರಣ ಚಳುವಳಿಯನ್ನು ದಮನ ಮಾಡಿದ ಪುರೋಹಿತಶಾಹಿ ಶಕ್ತಿಗಳೆ ಇಂದು ತಮ್ಮ ಬಿಜೆಪಿ ಪಕ್ಷದಲ್ಲಿರುವ ಶೂದ್ರ ರಾಜಕಾರಣಿಗಳನ್ನು ಬಳಸಿಕೊಂಡು ದೇವಸ್ಥಾನಗಳನ್ನು ತಮ್ಮ ವಶಕ್ಕೆ ತೆಗೆದುಕೊಂಡು ಐದೂವರೆ ಕೋಟಿ ಕನ್ನಡಿಗ ಹಿಂದೂಗಳನ್ನು ಧಾರ್ಮಿಕ ಗುಲಾಮಗಿರಿಯ ಕಡೆಗೆ ತಳ್ಳಲು ಪ್ರಯತ್ನಿಸುತ್ತಿವೆ" ಎಂದು ಸಿದ್ದರಾಮಯ್ಯ ಹೇಳಿದರು.

 ಸಂಘ ಪರಿವಾರದವರು ಇನ್ನಿಲ್ಲದಂತೆ ತೊಳಲಾಡುತ್ತಾರೆ ಎಂದ ಸಿದ್ದರಾಮಯ್ಯ

ಸಂಘ ಪರಿವಾರದವರು ಇನ್ನಿಲ್ಲದಂತೆ ತೊಳಲಾಡುತ್ತಾರೆ ಎಂದ ಸಿದ್ದರಾಮಯ್ಯ

"ಈ ಪುರೋಹಿತ ಶಾಹಿ ವರ್ಗ ಸ್ವಾಯತ್ತತೆಯ ಹೆಸರಲ್ಲಿ ಎಲ್ಲ ದೇವಸ್ಥಾನಗಳನ್ನು ವಶಪಡಿಸಿಕೊಳ್ಳುವುದಿಲ್ಲ. ಲಕ್ಷಾಂತರ, ಕೋಟ್ಯಾಂತರ ಆದಾಯವಿರುವ ದೇವಸ್ಥಾನಗಳನ್ನು ತಾವು ತೆಗೆದುಕೊಂಡು ಆದಾಯವಿಲ್ಲದ ಕೆಲವು ದೇವಸ್ಥಾನಗಳನ್ನು ಉಳಿದವರಿಗೆ ಬಿಟ್ಟುಕೊಡಬಹುದು. ಆದರೆ ಸರ್ಕಾರದ ಹಿಡಿತ ತಪ್ಪಿದ ಕೂಡಲೆ ಮನುವಾದಿ ನಿಯಮಗಳನ್ನು ಸಮಾಜದ ಮೇಲೆ ಹೇರಿಕೆ ಮಾಡಲು ಪ್ರಾರಂಭಿಸುತ್ತಾರೆ. ಈ ವಿಚಾರಗಳನ್ನು ಹೇಳಿದ ಕೂಡಲೆ ಸಂಘ ಪರಿವಾರದವರು ಇನ್ನಿಲ್ಲದಂತೆ ತೊಳಲಾಡುತ್ತಾರೆ" ಎಂದು ಸಿದ್ದರಾಮಯ್ಯ ಹೇಳಿದರು.

 ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ, ಸಿದ್ದರಾಮಯ್ಯ ಆಕ್ರೋಶ

ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ, ಸಿದ್ದರಾಮಯ್ಯ ಆಕ್ರೋಶ

"ತಾವು ಮಾತನಾಡಲಾರದೆ ತಮ್ಮ ಪಕ್ಷದಲ್ಲಿರುವ ಶೂದ್ರಾದಿ ದಲಿತ ನಾಯಕರನ್ನು ಛೂ ಬಿಟ್ಟು ಬಾಯಿಗೆ ಬಂದಂತೆ ಮಾತನಾಡಲು ಸೂಚಿಸುತ್ತಾರೆ. ಈ ಧಾರ್ಮಿಕ ಅನ್ಯಾಯಗಳ ವಿರುದ್ಧ, ಶೋಷಣೆಯ ನೀತಿಗಳ ವಿರುದ್ಧ ಮಾತನಾಡಿದರೆ, ಸಾಮಾಜಿಕ ನ್ಯಾಯ, ಸಂವಿಧಾನದ ಆಶಯಗಳ ಬಗ್ಗೆ ಪ್ರಸ್ತಾಪಿಸಿದ ಕೂಡಲೆ ಹಾಗೆ ಪ್ರಸ್ತಾಪಿಸಿದವರನ್ನು ಹಿಂದೂ ವಿರೋಧ, ಪಾಕಿಸ್ತಾನ, ಮುಸ್ಲಿಂ, ಕ್ರಿಶ್ಚಿಯನ್ ಮುಂತಾದ ವಿಷಯಗಳನ್ನು ಮಾತನಾಡಿ ಜನರನ್ನು ದಾರಿ ತಪ್ಪಿಸಲು ಪ್ರಯತ್ನಿಸುತ್ತಾರೆ. ಇದು ಮನುವಾದಿಗಳ ಪುರಾತನ ಅಜೆಂಡ"ಎಂದು ಸಿದ್ದರಾಮಯ್ಯ ಹೇಳಿದರು.

 ಸಿದ್ದರಾಮಯ್ಯ ಬಿಜೆಪಿ ವಿರುದ್ದ ಆರೋಪಿಸಿದರು

ಸಿದ್ದರಾಮಯ್ಯ ಬಿಜೆಪಿ ವಿರುದ್ದ ಆರೋಪಿಸಿದರು

"ಧರ್ಮ, ದೇವರು, ದೇವಸ್ಥಾನ, ಮಸೀದಿ, ಚರ್ಚುಗಳ ವಿಷಯದಲ್ಲಿ ರಾಜಕೀಯ ಮಾಡಿಕೊಂಡು ದೇಶವನ್ನು ಅದಾನಿ, ಅಂಬಾನಿ ಮುಂತಾದ ಬಂಡವಾಳಿಗರಿಗೆ ಒತ್ತೆ ಇಡುತ್ತಿರುವ ಬಿಜೆಪಿಯು ಆರಂಭದಿಂದಲೂ ಸುಳ್ಳುಗಳ ಫ್ಯಾಕ್ಟರಿ ಇಟ್ಟುಕೊಂಡು ಸುಳ್ಳುಗಳನ್ನೆ ಉತ್ಪಾದಿಸಿ ಜನರಿಗೆ ಮಾರಿ ರಾಜಕಾರಣ ಮಾಡುತ್ತಿದ್ದಾರೆ. ಅಂಥ ಹಲವು ಸುಳ್ಳುಗಳಲ್ಲಿ, ದೇವಸ್ಥಾನಗಳ ಹಣವನ್ನು ಮುಸ್ಲಿಂ ಮತ್ತು ಕ್ರಿಶ್ಚಿಯನ್ನರ ಧಾರ್ಮಿಕ ಸ್ಥಳಗಳ ಅಭಿವೃದ್ಧಿಗೆ ಖರ್ಚು ಮಾಡಲಾಗುತ್ತಿದೆ ಎಂಬುದೂ ಒಂದು" ಎಂದು ಸಿದ್ದರಾಮಯ್ಯ ಬಿಜೆಪಿ ವಿರುದ್ದ ಆರೋಪಿಸಿದರು.

 ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರ ವರ್ಷಾಸನ, ತಸ್ತೀಕ್ ನೀಡುತ್ತಿಲ್ಲವೆ?

ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರ ವರ್ಷಾಸನ, ತಸ್ತೀಕ್ ನೀಡುತ್ತಿಲ್ಲವೆ?

"ವಾಸ್ತವವಾಗಿ ದೇವಸ್ಥಾನಗಳ ಒಂದೇ ಒಂದು ರೂಪಾಯಿ ಹಣವನ್ನೂ ಮಸೀದಿಗಾಗಲಿ, ಚರ್ಚುಗಳಿಗಾಗಲಿ ಬಳಸಿಲ್ಲವೆಂದು ಇಲಾಖೆ ಉತ್ತರ ನೀಡಿದೆ. ಆದರೂ ಬಿಜೆಪಿಯ ಕೆಲವು ಸುಳ್ಳಿನ ಉತ್ಪಾದಕರು ಅಪಪ್ರಚಾರ ಮಾಡುತ್ತಲೆ ಇದ್ದಾರೆ. ದೇವರ ಹೆಸರಿನಲ್ಲಿ ಸುಳ್ಳು ಹೇಳುವ, ಅಪಚಾರ ಎಸಗುವ ಈ ಜನ ಎಷ್ಟು ಕೆಟ್ಟವರು, ಅಮಾನವೀಯ ವ್ಯಕ್ತಿಗಳು ಎಂಬುದಕ್ಕೆ ಇದು ಸಾಕ್ಷಿ. ಹಾಗಿದ್ದರೆ ಹಿಂದೂ ಮತ್ತು ಹಿಂದೂಯೇತರ ಧಾರ್ಮಿಕ ಸಂಸ್ಥೆಗಳಿಗೆ ಸರ್ಕಾರ ವರ್ಷಾಸನ ಮತ್ತು ತಸ್ತೀಕ್ ನೀಡುತ್ತಿಲ್ಲವೆ? ಖಂಡಿತ ನೀಡುತ್ತಿದೆ" ಎಂದು ಸಿದ್ದರಾಮಯ್ಯ ಹೇಳಿದರು.

Recommended Video

ಮಾತಾ ವೈಷ್ಣೋದೇವಿ ಮಂದಿರದಲ್ಲಿ ಕಾಲ್ತುಳಿತದಿಂದ 12 ಭಕ್ತರ ಸಾವು | Oneindia Kannada

English summary
Former CM Siddaramaiah Press Release on CM Basavaraj Bommai Government Decision On Temple Autonomy
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X