• search
  • Live TV
ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  

ಚಾಮರಾಜನಗರ: ಒಂದೆಡೆ ಸಾರಿಗೆ ನೌಕರರಿಗೆ ಪ್ರಶಂಸೆ, ಮತ್ತೊಂದೆಡೆ ತರಾಟೆ!

|
Google Oneindia Kannada News

ಚಾಮರಾಜನಗರ, ಏಪ್ರಿಲ್ 15: ಸಾರಿಗೆ ನೌಕರರ ಮುಷ್ಕರ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಚಾಮರಾಜನಗರದಲ್ಲಿ ಮುಷ್ಕರದ ಅವಧಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಾರಿಗೆ ಸಿಬ್ಬಂದಿಗೆ ಪ್ರಶಂಸನಾ ಪತ್ರ ಹಾಗೂ ಸಿಹಿ ವಿತರಿಸಿ ಗೌರವಿಸಲಾಗಿದೆ.

ಇದೇ ವೇಳೆ ಮತ್ತೊಂದು ಕಡೆ ಕಾರ್ಯ ನಿರತ ಚಾಲಕರನ್ನು ಅಡ್ಡಗಟ್ಟಿ ಮುಷ್ಕರ ನಿರತ ನೌಕರರು ಹಾರ ಹಾಕಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಚಾಮರಾಜನಗರ ವಿಭಾಗದಲ್ಲಿ ಮೊದಲ ಹಂತದಲ್ಲಿ 41 ಮಂದಿ ಸಾರಿಗೆ ಸಿಬ್ಬಂದಿಗೆ ಪ್ರಶಂಸನಾ ಪತ್ರ ಹಾಗೂ ಸಿಹಿ ವಿತರಣೆ ಮಾಡಲಾಗಿದ್ದು, ಏ.7ರಿಂದ ಕರ್ತವ್ಯಕ್ಕೆ ತರುತ್ತಿರುವ ಸಿಬ್ಬಂದಿಗೆ ಮಾರ್ಚ್ ತಿಂಗಳ ವೇತನ ಬಿಡುಗಡೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಶ್ರೀನಿವಾಸ್ ತಿಳಿಸಿದ್ದಾರೆ.

ಚಾಮರಾಜನಗರ ವಿಭಾಗದಲ್ಲಿ 150ಕ್ಕೂ ಹೆಚ್ಚು ಸಾರಿಗೆ ಬಸ್ಸುಗಳು ಕಾರ್ಯಾಚರಣೆ ನಡೆಸಿವೆ. ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಪ್ರೋತ್ಸಾಹಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಅವರು ಹೇಳಿದ್ದಾರೆ. ಈ ನಡುವೆ ಮಂಗಳವಾರ ಕಿಡಿಗೇಡಿಗಳು ಎರಡು ಬಸ್ಸುಗಳ ಮೇಲೆ ಕಲ್ಲು ತೂರಿದ ಘಟನೆಯೂ ನಡೆದಿದೆ.

ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಕೆಎಸ್‍ಆರ್‍ಟಿಸಿ ಬಸ್ಸುಗಳಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ಇದೆಲ್ಲದರ ನಡುವೆ ಸಾರಿಗೆ ನೌಕರರ ಮುಷ್ಕರ ಒಂಬತ್ತನೇ ದಿನಕ್ಕೆ ಕಾಲಿಟ್ಟಿದ್ದು, ಚಾಮರಾಜಗರದ ಗುಂಡ್ಲುಪೇಟೆಯಲ್ಲಿ ಮುಷ್ಕರದ ನಡುವೆ ಸಂಚರಿಸುತ್ತಿದ್ದ ಸಾರಿಗೆ ಬಸ್ಸುಗಳನ್ನು ಅಡ್ಡಗಟ್ಟಿದ ಮುಷ್ಕರ ನಿರತ ನೌಕರರ ಪತ್ನಿಯರು, ಕುಟುಂಬಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಮೈಸೂರಿನಿಂದ ಗುಂಡ್ಲುಪೇಟೆಗೆ ಬರುತ್ತಿದ್ದ ಬಸ್ಸುಗಳನ್ನು ಅಡ್ಡಗಟ್ಟಿದ ಮಹಿಳೆಯರು, ಬಸ್ ಚಲಾಯಿಸುತ್ತಿದ್ದ ಚಾಲಕ ಹಾಗೂ ನಿರ್ವಾಹಕರನ್ನು ತರಾಟೆಗೆ ತೆಗೆದುಕೊಂಡರು. ಚಾಲಕನಿಗೆ ಹೂವಿನ ಹಾರ ಹಾಕಲು ಯತ್ನಿಸಿ ಮುಷ್ಕರವಿದ್ದರೂ ಕರ್ತವ್ಯಕ್ಕೆ ಹಾಜರಾಗಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಬಳಿಕ ಕರ್ತವ್ಯಕ್ಕೆ ಅಡ್ಡಿಪಡಿಸಿದ ಮೂವರು ಸಾರಿಗೆ ಸಿಬ್ಬಂದಿ ಹಾಗೂ ಅವರ ಕುಟುಂಬ ವರ್ಗದವರನ್ನು ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ಕರೆದೊಯ್ದು ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.

English summary
Appreciation letters distributed to the transport employees who were on duty during the Bus strike in Chamarajanagar.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X