ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜನಗರದಲ್ಲಿ ಪ್ರಜಾಧ್ವನಿ ಬಸ್ ಯಾತ್ರೆ: ಮಧ್ಯರಾತ್ರಿ ಬಾವುಟ ಕಟ್ಟಿದ "ಕೈ" ಶಾಸಕ, ವಿಡಿಯೋ ವೈರಲ್‌

ಚಾಮರಾಜನಗರದಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಬಸ್‌ ಯಾತ್ರೆ ನಡೆಸಲಿದ್ದು, ಶಾಸಕ ಪುಟ್ಟರಂಗಶೆಟ್ಟಿ ನಗರದಲ್ಲಿ ಯಾತ್ರೆಗೆ ಸಿದ್ಧತೆ ಮಾಡಿದ್ದು ಹೇಗೆ? ಇಲ್ಲಿದೆ ನೋಡಿ ಮಾಹಿತಿ.

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಜನವರಿ, 25: ಚಾಮರಾಜನಗರ ಕಾಂಗ್ರೆಸ್ ಶಾಸಕ ಸಿ. ಪುಟ್ಟರಂಗಶೆಟ್ಟಿ ಕಾರ್ಯಕರ್ತರ ಜೊತೆ ಸೇರಿ ನಗರದ ವಿವಿಧೆಡೆ ಪಕ್ಷದ ಬಾವುಟಗಳನ್ನು ಕಟ್ಟುವ ಮೂಲಕ ಗಮನ ಸೆಳೆದಿದ್ದಾರೆ.
ಶಾಸಕರು ಎಂದರೆ ದುರಹಂಕಾರ ಪ್ರದರ್ಶನ ಮಾಡುತ್ತಾರೆ ಎನ್ನುವ ಮಾತುಗಳನ್ನು ಕೇಳಿದ್ದೇವೆ. ಆದರೆ, ಸಿ. ಪುಟ್ಟರಂಗಶೆಟ್ಟಿ ಮಂಗಳವಾರ ರಾತ್ರಿ 9ರಿಂದ ಮಧ್ಯರಾತ್ರಿ 1ರ ತನಕವೂ ಕಾರ್ಯಕರ್ತರ ಜೊತೆ ಸೇರಿ ನಗರದ ವಿವಿಧೆಡೆ ಬಾವುಟ, ಕಟೌಟ್ ಹಾಕಲು ಸಹಾಯ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಸಿದ್ದರಾಮಯ್ಯರನ್ನ ಕಂಡರೇ ಮೋದಿಗೆ ಭಯ: ಕಾಂಗ್ರೆಸ್‌ ಶಾಸಕ ಪುಟ್ಟರಂಗಶೆಟ್ಟಿ ವ್ಯಂಗ್ಯಸಿದ್ದರಾಮಯ್ಯರನ್ನ ಕಂಡರೇ ಮೋದಿಗೆ ಭಯ: ಕಾಂಗ್ರೆಸ್‌ ಶಾಸಕ ಪುಟ್ಟರಂಗಶೆಟ್ಟಿ ವ್ಯಂಗ್ಯ

ಕಳೆದ ಮೂರು ಬಾರಿಯೂ ಶಾಸಕರಾಗಿ ಆಯ್ಕೆಯಾಗುತ್ತಿರುವ ಸಿ.ಪುಟ್ಟರಂಗಶೆಟ್ಟಿ ಸಿದ್ದರಾಮಯ್ಯ ಅವರ ಅನುಯಾಯಿ ಆಗಿದ್ದಾರೆ. ಕೆಲವು ದಿನಗಳ ಹಿಂದೆಯಷ್ಟೇ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕೆಂದು ಹೇಳಿದ್ದರು‌. ಜೊತೆಗೆ, ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾದರೇ ತಾನು ನಿವೃತ್ತಿ ಆಗುವೆ ಎಂದು ಘೋಷಿಸಿದ್ದರು.

ಗುರುವಾರ ಪ್ರಜಾಧ್ವನಿ ಬಸ್ ಯಾತ್ರೆ

ಕಾಂಗ್ರೆಸ್‌ನ ಪ್ರಜಾಧ್ವನಿ ಬಸ್ ಯಾತ್ರೆಯು ಗುರುವಾರದಂದು ಚಾಮರಾಜನಗರ ಜಿಲ್ಲೆಗೆ ಆಗಮಿಸಲಿದ್ದು, ಬೃಹತ್ ಬಹಿರಂಗ ಸಭೆಯೂ ಆಯೋಜನೆಯಾಗಿದೆ. ಜನವರಿ 26ರ ಬೆಳಗ್ಗೆ 10 ಗಂಟೆಗೆ ಚಾಮರಾಜನಗರ ಜಿಲ್ಲೆಗೆ ಆಗಮಿಸಲಿರುವ ಬಸ್ ಯಾತ್ರೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗಿಯಾಗಲಿದ್ದಾರೆ. ಡಿವಿಯೇಷನ್ ರಸ್ತೆ, ಸುಲ್ತಾನ್ ಷರೀಪ್ ರಸ್ತೆ, ದೊಡ್ಡಂಗಡಿ ಬೀದಿ, ಚಿಕ್ಕಂಗಡಿ ಬೀದಿ, ಸಂತೇಮರಹಳ್ಳಿ ವೃತ್ತದಲ್ಲಿ ರೋಡ್ ಶೋ ಕೂಡ ನಡೆಸಲಿದ್ದಾರೆ. ಹಾಗೆಯೇ ರೇಷ್ಮೆ ಕಾರ್ಖಾನೆಯ ಹತ್ತಿರ ಮೈದಾನದಲ್ಲಿ ಬೃಹತ್ ಸಮಾವೇಶ ಕೂಡ ನಡೆಯಲಿದೆ.

Bus Yatra in Chamarajanagar: Congress MLA who tied flag at midnight

ಸಿದ್ದರಾಮಯ್ಯ ‌ಮತ್ತೊಮ್ಮೆ ಸಿಎಂ ಆಗಬೇಕು

ಸಿದ್ದರಾಮಯ್ಯ ‌ಮತ್ತೊಮ್ಮೆ ಸಿಎಂ ಆಗಬೇಕೆಂದು ಕಾಂಗ್ರೆಸ್ ಶಾಸಕ ಸಿ‌.ಪುಟ್ಟರಂಗಶೆಟ್ಟಿ ಇತ್ತೀಚೆಗಷ್ಟೇ ಚಾಮರಾಜನಗರದಲ್ಲಿ ಹೇಳಿದ್ದರು. ಚಾಮರಾಜನಗರದಲ್ಲಿ ನಡೆದ ಕುರುಬರ ಸಂಘದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹಿಂದುಳಿದ ವರ್ಗಗಳ ಹರಿಕಾರರು, ನನ್ನ ನೆಚ್ಚಿನ ನಾಯಕರಾದ ಸಿದ್ದರಾಮಯ್ಯ ಅವರು ಮತ್ತೊಮ್ಮೆ ರಾಜ್ಯದ ಮುಖ್ಯಮಂತ್ರಿ ಆಗಬೇಕು.‌ 2013ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿ 5 ವರ್ಷಗಳ ಕಾಲ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಹೆಚ್ವಿನ ಒತ್ತು ನೀಡಿದ್ದರು. ಸಿದ್ದರಾಮಯ್ಯ ಸಿಎಂ ಆಗಿದ್ದ ಅವಧಿಯಲ್ಲಿ ತಾಲೂಕು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಹಿಂದುಳಿದ ವರ್ಗಗಳ ಸಮುದಾಯ ಭವನಗಳು ನಿರ್ಮಾಣಕ್ಕಾಗಿ ಹೆಚ್ಚಿನ ಅನುದಾನ ನೀಡಿದ್ದರು ಎಂದು ಹೇಳಿದ್ದರು.

ಸಮುದಾಯ ಭವನ ನಿರ್ಮಾಣಕ್ಕೆ ಆದ್ಯತೆ

ಹಾಗೆಯೇ ನನ್ನ ಕ್ಷೇತ್ರದಲ್ಲಿ ತಾಲೂಕು ಕುರುಬರ ಸಂಘದ ಸಮುದಾಯ ಭವನಕ್ಕೆ 1 ಕೋಟಿ ರೂಪಾಯಿ, ಉಪ್ಪಾರ ಸಮುದಾಯ ಭವನಕ್ಕೆ 2 ಕೋಟಿ ರೂಪಾಯಿ, ಅಲ್ಲದೆ ಗ್ರಾಮಾಂತರ ಪ್ರದೇಶದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ ಆದ್ಯತೆ ನೀಡಿದ್ದರು. ಅವರು ಮತ್ತೆ ಮುಖ್ಯಮಂತ್ರಿ ಆದರೆ ಸಾಮಾಜಿಕ ನ್ಯಾಯ ದೊರೆಯುವುದರಲ್ಲಿ ಯಾವುದೇ ಸಂದೇಹವಿಲ್ಲ. ಅವರು ರಾಜಕೀಯದಿಂದ ನಿವೃತ್ತಿಯಾದರೇ ನಾನು ನಿವೃತ್ತಿಯಾಗುತ್ತೇನೆ ಎಂದು ಘೋಷಿಸಿದ್ದರು.

Bus Yatra in Chamarajanagar: Congress MLA who tied flag at midnight

ಸಿದ್ದರಾಮಯ್ಯ ಅವರ ಕೊಡುಗೆ ಅಪಾರ

ಉಪ್ಪಾರ ಸಮುದಾಯದವನಾದ ನಾನು ಮೂರು ಬಾರಿ ಶಾಸಕನಾಗಲು ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಿದೆ. ನಂತರ ನಮ್ಮ ಹಕ್ಕುಗಳನ್ನು ರಕ್ಷಣೆ ಮಾಡುವಲ್ಲಿ ನಿರಂತರವಾಗಿ ಶ್ರಮಿಸಿದ್ದರು. ನಾನು ಅವರ ಜೊತೆಯಲ್ಲಿಯೇ ಬೆಳೆದಿದ್ದೇನೆ. ಉಪ್ಪಾರ ಸಮಾಜವನ್ನು ಎಸ್‌ಟಿಗೆ ಸೇರಿಸಲು ಕುಲಶಾಸ್ತೀಯ ಆಧ್ಯಯನಕ್ಕೆ ಅವಕಾಶ ಮಾಡಿಕೊಟ್ಟಿದ್ದರು. ಈಗ ಕುಲಶಾಸ್ತ್ರೀಯ ಅಧ್ಯಯನ ಪೂರ್ಣಗೊಂಡಿದೆ. ಅವರ ಅವಧಿಯಲ್ಲಿ ಪೂರ್ಣಗೊಂಡಿದ್ದರೆ ಕೇಂದ್ರ ಸರ್ಕಾರಕ್ಕೆ ವರದಿ ಸಲ್ಲಿಸಿ ನಮ್ಮ ಸಮಾಜವನ್ನು ಎಸ್‌ಟಿಗೆ ಸೇರ್ಪಡೆ ಮಾಡುತ್ತಿದ್ದರು.

ನಗರದ ಹೃದಯ ಭಾಗದಲ್ಲಿ ಇಷ್ಟೊಂದು ಪ್ರಮಾಣದ ಜಾಗ ಮಾಡಿಕೊಟ್ಟ ಸಮಾಜದ ಹಿರಿಯರಾದ ಬೆಣ್ಣೆ ರಾಮೇಗೌಡ, ನಂಜೇಗೌಡ ಅವರನ್ನು ಎಲ್ಲರೂ ಸ್ಮರಿಸಿಕೊಳ್ಳಬೇಕು. 1967ರಲ್ಲಿ ದೂರದೃಷ್ಠ ವಹಿಸುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದರು. ಅದನ್ನು ಉಳಿಸಿ - ಬೆಳಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದಿದ್ದರು.

English summary
Congress Prajadwani Bus Yatra in Chamarajanagar on january 26th, Congress MLA C Puttarangashetty who tied flag at midnight, know more
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X