Get Updates
Get notified of breaking news, exclusive insights, and must-see stories!

ಏ. 24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆ, ತಯಾರಿಗಳು

ಚಾಮರಾಜನಗರ, ಏಪ್ರಿಲ್ 20: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟಕ್ಕೆ ಮುಖ್ಯಮಂತ್ರಿಗಳು ಭೇಟಿ ನೀಡಿದರೆ ಅಧಿಕಾರ ಕಳೆದುಕೊಳ್ಳಬೇಕಾಗುತ್ತದೆ ಎಂಬ ಮಾತಿತ್ತು. ಈ ಮಾತನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಟ್ಟಕ್ಕೆ ಪದೇ ಪದೇ ಭೇಟಿ ನೀಡುವ ಮೂಲಕ ಸುಳ್ಳಾಗಿಸಿದ್ದಾರೆ. ಈಗ ಏಪ್ರಿಲ್ 24ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ವಿಶೇಷ ಸಚಿವ ಸಂಪುಟ ಸಭೆಯನ್ನು ಆಯೋಜನೆ ಮಾಡಲಾಗಿದೆ. ಈ ಸಚಿವ ಸಂಪುಟ ಸಭೆಯಲ್ಲಿ ಶಿಷ್ಟಾಚಾರ ಕಡ್ಡಾಯವಾಗಿ ಪಾಲನೆಯಾಗಬೇಕು ಎಂದು ಮೈಸೂರು ವಿಭಾಗದ ಪ್ರಾದೇಶಿಕ ಆಯುಕ್ತರು ಈಗಾಗಲೇ ಸೂಚನೆ ನೀಡಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆಯ ಹಿನ್ನಲೆಯಲ್ಲಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಮತ್ತು ಶಾಸಕ ಎಂ. ಆರ್. ಮಂಜುನಾಥ್ ಮಲೆ ಮಹದೇಶ್ವರ ಬೆಟ್ಟದಲ್ಲಿ ಸಭೆಯ ಪೂರ್ವ ಸಿದ್ದತೆಗಳನ್ನು ಪರಿಶೀಲನೆ ನಡೆಸಿದರು. ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನೀಡಿದರು. ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಅಧಿಕಾರಿಗಳು ಆಗಮಿಸುವ ಹಿನ್ನಲೆಯಲ್ಲಿ ತಯಾರಿಯನ್ನು ಅಚ್ಚುಕಟ್ಟಾಗಿ ಮಾಡಬೇಕು ಎಂದು ನಿರ್ದೇಶನ ನೀಡಿದರು.

Cabinet Meeting In Male Mahadeshwara On April 24 Preparations

* ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು, ಸಚಿವರು ಪಾಲ್ಗೊಳ್ಳಲಿರುವ ಹಿನ್ನೆಲೆಯಲ್ಲಿ ವಿವಿಧ ಸ್ಥಳಗಳಿಗೆ ಅಧಿಕಾರಿಗಳೊಂದಿಗೆ ಭೇಟಿದ ಜಿಲ್ಲಾಧಿಕಾರಿಗಳು ಸಿದ್ದತೆಗಳ ಸಂಬಂಧ ಪರಿಶೀಲನೆ ನಡೆಸಿದರು.

* ಶಾಶ್ವತ ಹೆಲಿಪ್ಯಾಡ್ ಸ್ಥಳಕ್ಕೆ ಭೇಟಿ ನೀಡಿ ಅಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದರು. ಪಾರ್ಕಿಂಗ್‌ಗೆ ನಿಗದಿಪಡಿಸಿರುವ ಜಾಗದಲ್ಲಿ ನಿರ್ವಹಿಸಬೇಕಿರುವ ಕೆಲಸ ಕಾರ್ಯಗಳ ಬಗ್ಗೆ ನಿರ್ದೇಶನ ಕೊಟ್ಟರು. ಹೆಚ್ಚುವರಿ ಹೆಲಿಪ್ಯಾಡ್ ನಿಮಾಣ ಮಾಡುವ ಸಂಬಂಧ ಸ್ಥಳ ಪರಿಶೀಲಿಸಿದರು.

* ಮುಖ್ಯಮಂತ್ರಿಗಳು, ಸಚಿವರು, ಹಿರಿಯ ಅಧಿಕಾರಿಗಳ ವಾಸ್ತವ್ಯಕ್ಕಾಗಿ ನಿಗದಿಯಾಗಿರುವ ವಸತಿಗೃಹಗಳಿಗೆ ಭೇಟಿಕೊಟ್ಟು ಕೈಗೊಳ್ಳಲಾಗಿರುವ ಸ್ವಚ್ಚತೆ, ಸಿದ್ದತೆ, ಇನ್ನಿತರೆ ವ್ಯವಸ್ಥೆಗಳನ್ನು ವೀಕ್ಷಿಸಿದರು. ವಸತಿಗೃಹ ಬಳಿ ವಾಹನಗಳ ನಿಲುಗಡೆಗೆ ಇರುವ ಸ್ಥಳವನ್ನು ಸಹ ವೀಕ್ಷಿಸಿ ಅಧಿಕಾರಿಗಳಿಗೆ ಸೂಚನೆ ಕೊಟ್ಟರು.

* ಸಚಿವ ಸಂಪುಟ ಸಭೆ ನಿಗದಿಯಾಗಿರುವ ದೀಪದಗಿರಿ ಒಡ್ಡುವಿನ ಸ್ಥಳಕ್ಕೆ ಭೇಟಿ ನೀಡಿ ಪೂರ್ವ ತಯಾರಿ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಸಭೆ ನಡೆಯುವ ಸ್ಥಳದಲ್ಲಿ ಯಾವ ಯಾವ ಸಿದ್ದತೆಗಳು ಇರಬೇಕು ಹಾಗೂ ವ್ಯವಸ್ಥೆಗಳು ಕೈಗೊಳ್ಳುತ್ತಿರುವ ಬಗ್ಗೆ ವಿವರವಾಗಿ ವೀಕ್ಷಿಸಿ ಸಲಹೆ ಸೂಚನೆಗಳನ್ನು ಸಂಬಂಧಪಟ್ಟವರಿಗೆ ನೀಡಿದರು.

* ಶಿಷ್ಟಾಚಾರ, ಸ್ವಾಗತ, ಭದ್ರತೆ ಹಾಗೂ ಸಚಿವ ಸಂಪುಟ ಸಭೆ ಸ್ಥಳದಲ್ಲಿ ಯಾವುದೇ ಕೊರತೆಯಾಗದಂತೆ ಎಲ್ಲಾ ಕಾರ್ಯಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಗಳು, ಶಾಸಕರು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಮಾತನಾಡಿ, "ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯುವ ಅವಕಾಶ ದೊರೆತಿದೆ. ಇದು ನಮ್ಮ ವಿಭಾಗಕ್ಕೆ ಮುಖ್ಯವಾಗಿದೆ. ಅತ್ಯಂತ ಪ್ರಮುಖವಾಗಿರುವ ಸಚಿವ ಸಂಪುಟ ಸಭೆಯ ಪೂರ್ವಭಾವಿ ಕಾರ್ಯವನ್ನು ಎಲ್ಲಾ ಅಧಿಕಾರಿಗಳು ಉತ್ಸಾಹದಿಂದ ನಿರ್ವಹಿಸುತ್ತಿದ್ದು, ಇದರ ಯಶಸ್ಸಿಗೆ ಒಂದು ತಂಡವಾಗಿ ಕೆಲಸ ಮಾಡುತ್ತಿರುವುದು ಹೆಮ್ಮೆಯ ವಿಷಯವಾಗಿದೆ" ಎಂದರು.

ಶಾಸಕ ಎಂ. ಆರ್. ಮಂಜುನಾಥ್ ಮಾತನಾಡಿ, "ಸಚಿವ ಸಂಪುಟ ಸಭೆ ಮಲೆ ಮಹದೇಶ್ವರನ ಸನ್ನಿಧಿಯಲ್ಲಿ ನಡೆಯುತ್ತಿರುವುದು ಸಂತಸದ ವಿಷಯವಾಗಿದೆ. ಕ್ಷೇತ್ರ ಹಾಗೂ ಜಿಲ್ಲೆಯ ಸಮಗ್ರ ಅಭಿವೃದ್ದಿಯ ಉದ್ದೇಶದ ಹಿನ್ನೆಲೆಯಲ್ಲಿ ಸಚಿವ ಸಂಪುಟ ಸಭೆ ಮಹತ್ವ ಪಡೆದುಕೊಂಡಿದೆ" ಎಂದು ತಿಳಿಸಿದರು.

ಸಚಿವ ಸಂಪುಟ ಸಭೆ ನಿರ್ವಹಣೆಗಾಗಿ ರಚಿಸಲಾಗಿರುವ ಅಧಿಕಾರಿಗಳ ಸಮಿತಿಯ ಸಭೆಯನ್ನು ನಡೆಸಲಾಯಿತು. ಸಮಿತಿಗಳು ನಿಗದಿಪಡಿಸಲಾಗಿರುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಯಾವುದೇ ಗೊಂದಲಗಳಿಗೆ ಅವಕಾಶವಾಗಬಾರದು. ಸಾಕಷ್ಟು ಮುಂಚಿತವಾಗಿಯೇ ಎಲ್ಲಾ ಕೆಲಸಗಳು ಪೂರ್ಣಗೊಂಡಿರಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+