ಕಾವೇರಿ ನೀರಿಗಾಗಿ ನಿಲ್ಲದ ಹೋರಾಟ: ಚಾಮರಾಜನಗರದಲ್ಲಿ 44 ದಿನಗಳಿಂದ ನಿರಂತರ ಪ್ರತಿಭಟನೆ

ಚಾಮರಾಜನಗರ, ಅಕ್ಟೋಬರ್‌ 26: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 44 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಕೂಡ ಅಣಕು ಫುಟ್‌ಬಾಲ್ ಆಟ ಆಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಫುಟ್‌ಬಾಲ್ ಹಿಡಿದು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ಅಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಣಕುಫುಟ್‌ಬಾಲ್ ಆಟ ಆಡಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು‌ ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

Cauvery Dispute: 44 Days Continuous Protest In Chamarajanagar

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 44 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಭುವನೇಶ್ವರಿ ವೃತ್ತದಲ್ಲಿ ಅಣಕು ಫುಟ್‌ಬಾಲ್ ಆಟ ಆಡುವ ಮೂಲಕ ವಿನೂತನ‌ ಪ್ರತಿಭಟನೆ ನಡೆಸಲಾಗಿದೆ. ಸರ್ಕಾರಗಳು, ಕಾವೇರಿ ನೀರು ನಿರ್ವಹಣಾ ಮಂಡಳಿ ಕಾವೇರಿ ವಿಚಾರದಲ್ಲಿ ಫುಟ್‌ಬಾಲ್ ಆಟದ ರೀತಿಯಲ್ಲಿ ಚೆಂಡಾಟ ಆಡುತ್ತಿವೆ ಎಂದು ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.

ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

Cauvery Dispute: 44 Days Continuous Protest In Chamarajanagar

ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್ ಮಹೇಶ್ ಗೌಡ, ನಿಜಧ್ವನಿಗೋವಿಂದರಾಜು, ಲಿಂಗರಾಜು, ತಾಂಡವಮೂರ್ತಿ, ಗು.ಪುರುಷೋತ್ತಮ್, ಬಸವರಾಜು ನಾಯಕ್‌, ಚಾ.ಹ.ರಾಮು, ವೀರಭದ್ರ, ರಾಜಪ್ಪ, ಮೂಡ್ಲಪುರ ಪ್ರಕಾಶ್, ಸೋಮವಾರಪೇಟೆ ಮಂಜು, ಮಿಮಿಕ್ರಿ‌ಮಲ್ಲಣ್ಣ, ಚಾ.ಸಿ.ಸಿದ್ದರಾಜು, ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+