ಕಾವೇರಿ ಕಿಚ್ಚು: ಚಾಟಿಯಿಂದ ಹೊಡೆದುಕೊಂಡು ಪ್ರತಿಭಟಿಸಿದ ಹೋರಾಟಗಾರರು
ಚಾಮರಾಜನಗರ, ನವೆಂಬರ್, 05: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 54 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಇಂದು ಕೂಡ ಚಾವಟಿಯಿಂದ ಹೊಡೆದುಕೊಳ್ಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.
ನಗರದ ಶ್ರೀಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು, ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಾವಟಿಯಿಂದ ಹೊಡೆದುಕೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 53ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಕೂಡ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನಿರ್ವಹಣಾ ಮಂಡಳಿಯು ತಮಿಳುನಾಡಿನ ಪರವಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಕೇಂದ್ರ ಸರ್ಕರ ಹಾಗೂ ಕಾವೇರಿ ನಿರ್ವಹಣಾ ಮಂಡಳಿ ರಾಜ್ಯಕ್ಕೆ ನಿರಂತರವಾಗಿ ಅನ್ಯಾಯ ಮಾಡಿದ್ದು, ತಮ್ಮನ್ನು ಚಾವಟಿಯಿಂದ ಹೊಡೆದುಕೊಳ್ಳುವಂತೆ ಮಾಡಿದೆ ಎಂದು ಆರೋಪಿಸಿ ನಾವೆಲ್ಲರೂ ಚಾವಟಿಯಿಂದ ಹೊಡೆದುಕೊಳ್ಳುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.
ಇನ್ನು ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು. ಈ ವೇಳೆ ಪ್ರತಿಭಟನೆಯಲ್ಲಿ ನಿಜದ್ವನಿಗೋವಿಂದರಾಜು, ಗು.ಪುರುಷೋತ್ತಮ ನಂಜುಂಡಸ್ವಾಮಿ, ಚಾ.ಹ.ರಾಮು ಇದ್ದರು.
ಬೈನಾಕುಲರ್‌ನಲ್ಲಿ ಸರ್ಕಾರದ ಹುಡುಕಾಟ ನಡೆಸಿ ಪ್ರತಿಭಟನೆ
ಹಾಗೆಯೇ ಇತ್ತೀಚೆಗಷ್ಟೇ ಕಾವೇರಿ ನೀರು ವಿಚಾರದಲ್ಲಿ ಕರ್ನಾಟಕ ಸರ್ಕಾರ ನಾಪತ್ತೆಯಾಗಿದೆ. ಆ ಸರ್ಕಾರವನ್ನು ಹುಡುಕಿ ಕೊಡಿ ಎಂದು ಕರ್ನಾಟಕ ಸೇನಾಪಡೆ ಸಂಘಟನೆ ಕಾರ್ಯಕರ್ತರು ನಗರದಲ್ಲಿ ಕಣ್ಣಿಗೆ ದುರ್ಬಿನ್ ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು.
ರಾಷ್ಟ್ರೀಯ ಹೆದ್ದಾರಿ-209 ಹಾದು ಹೋಗಿರುವ ನಗರದ ಶ್ರೀ ಭುವನೇಶ್ವರಿ ವೃತ್ತದಲ್ಲಿ ದುರ್ಬಿನ್ ಹಿಡಿದು ಜಮಾಯಿಸಿದ ಪ್ರತಿಭಟನಾಕಾರರು, ಕೆಲ ಕಾಲ ಹೆದ್ದಾರಿಯಲ್ಲಿ ಸಂಚಾರ ತಡೆದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ, ಕರ್ನಾಟಕ ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕೇಂದ್ರ ಸರ್ಕಾರ ಹಾಗೂ ಜನಪ್ರತಿನಿಧಿಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳು ನಾಡಿಗೆ ನೀರು ಹರಿಸುತ್ತಿರುವ ವಿಚಾರದಿಂದಾಗಿ ರಾಜ್ಯ ಸರ್ಕಾರ ಕಳೆದ ಎರಡು ತಿಂಗಳಿಂದ ಕಾಣೆ ಯಾಗಿದೆ. ಜನಪ್ರತಿನಿಧಿಗಳು ಸಹ ಕಾಣೆಯಾಗಿ ದ್ದಾರೆ. ಕಾಣೆಯಾಗಿರುವ ಇವರನ್ನು ಹುಡುಕಲು ನಾವು ದುರ್ಬಿನ್ ಹಾಕಿ ನೋಡಬೇಕಾಗಿದೆ ಎಂದರು.
ನೀರಿನ ವಿಚಾರದಲ್ಲಿ ರಾಜ್ಯ ಮತ್ತು ತಮಿಳುನಾ ಡಿನ ನಡುವೆ ಇಷ್ಟೆಲ್ಲ ಗೊಂದಲಗಳು ಗೊಂದಲಗಳು ಸೃಷ್ಟಿಯಾಗಿದ್ದರೂ ಸಹ ಇಲ್ಲಿಯವರೆಗೆ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡದೆ ಕುಳಿತು ನೋಡುತ್ತಿದೆ. ಕೂಡಲೇ ಕೇಂದ್ರ ಸರ್ಕಾರ ಮಧ್ಯ ಪ್ರವೇಶ ಮಾಡಿ ರಾಜ್ಯಕ್ಕೆ ನ್ಯಾಯ ಕೊಡಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಚಾ.ರಂ.ಶ್ರೀನಿವಾಸಗೌಡ, ಶಾ.ಮುರಳಿ, ಮಹೇಶ್ ಗೌಡ, ನಿಜದ್ವನಿ ಗೋಂದರಾಜು, ಪಣ್ಯದಹುಂಡಿ ರಾಜು, ಗು.ಪುರು ಷೋತ್ತಮ್, ಚಾ.ವೆಂ.ರಾಜ್‌ಗೋಪಾಲ್, ವೀರಭದ್ರ, ಚಾ.ಸಿ.ಸಿದ್ದರಾಜು, ರಾಚಪ್ಪ ಸೇರಿದಂತೆ ಇತರರು ಇದ್ದರು.












Click it and Unblock the Notifications