ಚಾಮರಾಜನಗರ: ಕುಡಿಕೆ ನೀರು ಕರ್ನಾಟಕಕ್ಕೆ, ಕ್ಯೂಸೆಕ್‌ ನೀರು ತಮಿಳುನಾಡಿಗೆ: ಕನ್ನಡಪರ ಹೋರಾಟಗಾರರ ಘೋಷಣೆ ಇದು

ಚಾಮರಾಜನಗರ, ಸೆಪ್ಟೆಂಬರ್‌, 04: ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಈಗಾಗಗಲೇ ರಾಜ್ಯಾದ್ಯಂತ ರೈತರು ಪ್ರತಿಭಟನೆ ಮಾಡುತ್ತಲೇ ಇದ್ದಾರೆ. ಅದೇ ರೀತಿ ಇಂದು ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಇಂದು ಕನ್ನಡಪರ ಹೋರಾಟಗಾರರು ಕುಡಿಕೆಯಲ್ಲಿ ನೀರು ತುಂಬಿಕೊಂಡು ವಿನೂತನವಾಗಿ ಪ್ರತಿಭಟನಾ ಮೆರವಣಿಗೆ ನಡೆಸುವ ಮೂಲಕ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದಾರೆ.

ಕನ್ನಡ ಪರ ಹೋರಾಟಗಾರರು ಚಾಮರಾಜನಗರದ ಚಾಮರಾಜೇಶ್ವರಸ್ವಾಮಿ ದೇವಸ್ಥಾನದಿಂದ ಭುವನೇಶ್ವರಿ ವೃತ್ತದವರವಿಗೂ ಕುಡಿಕೆ ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಇನ್ನು ಇದೇ ವೇಳೆ ಕುಡಿಕೆ ನೀರು ಕರ್ನಾಟಕಕ್ಕೆ, ಕ್ಯೂಸೆಕ್‌ ನೀರು ತಮಿಳುನಾಡಿಗೆ ಎಂದು ಘೋಷಣೆ ಕೂಗುವ ಮೂಲಕ ಕೇಂದ್ರ, ರಾಜ್ಯ ಮತ್ತು ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

cauvery-dispute

ಕಾವೇರಿ ವಿಚಾರವಾಗಿ ಜಿಲ್ಲಾ ಕೇಂದ್ರದಲ್ಲಿ ಪ್ರತಿದಿನ ಪ್ರತಿಭಟನೆ ನಡೆಸುತ್ತಿರುವ ಕನ್ನಡ ಪರ ಸಂಘಟನೆ ಕಾರ್ಯಕರ್ತರು, ಇಂದು ರಾಷ್ಟ್ರೀಯ ಹೆದ್ದಾರಿಯ ಭುವನೇಶ್ವರಿ ವೃತ್ತದ ಬಳಿ ಕೆಲಕಾಲ ಧರಣಿ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+