ಮಹಾಲಯ ಅಮಾವಾಸ್ಯೆ ದಿನದಂದು ಹೂವು-ನೀರು ಬಿಟ್ಟು ಕಾವೇರಿ ಹೋರಾಟಗಾರರ ಪ್ರತಿಭಟನೆ

ಚಾಮರಾಜನಗರ, ಅಕ್ಟೋಬರ್‌ 14: ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನೀರು, ಹೂ ಬಿಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಯಿತು.

ಚಾಮರಾಜನಗರ ಶ್ರೀಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನೀರು, ಹೂ ಬಿಟ್ಟು ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಘೋಷಣೆ ಕೂಗಿ ಅಕ್ರೋಶ ವ್ಯಕ್ತಪಡಿಸಿದರು.

cauvery-dispute

ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ..ಶ್ರೀನಿವಾಸಗೌಡ ಮಾತನಾಡಿ, 'ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕ್ರಮವನ್ನು ಖಂಡಿಸಿ ಇಂದಿಗೆ 31 ದಿನಗಳಿಂದ ಹೋರಾಟ ಮಾಡಿಕೊಂಡು ಬಂದಿದ್ದು. ಇಂದು ಪಿತೃಪಕ್ಷದ ನಿಮಿತ್ತ ನೀರು, ಹೂ ಬಿಟ್ಟು ಕೇಂದ್ರ ಸರ್ಕಾರ, ತಮಿಳುನಾಡು ಸರ್ಕಾರ, ಕರ್ನಾಟಕ ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ಚೆನ್ನಾಗಿರಲಿ' ಎಂದರು.

ಕರ್ನಾಟಕ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು‌ನಿಲ್ಲಿಸಬೇಕು ಇಲ್ಲದಿದ್ದರೆ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್‌ ಗೋಪಾಲ್, ನಿಜಧ್ವನಿ ಗೋವಿಂದರಾಜು, ಗು.ಪುರುಷೋತ್ತಮ್, ರವಿಚಂದ್ರಪ್ರಸಾದ್ ಕಹಳೆ, ಲಿಂಗರಾಜು, ನಂಜುಂಡಸ್ವಾಮಿ, ಲೋಕೇಶ್ ಇತರರು ಭಾಗವಹಿಸಿದ್ದರು.

cauvery-dispute

ತಮಿಳುನಾಡಿಗೆ ಮುಂದಿನ 15 ದಿನಗಳು ಕಾವೇರಿ ನೀರು

ಕರ್ನಾಟಕಕ್ಕೆ ಕಾವೇರಿ ನೀರು ವಿಚಾರದಲ್ಲಿ ಆಘಾತಗಳೇ ಹೆಚ್ಚಾಗುತ್ತಿದ್ದು, ತಮಿಳುನಾಡಿಗೆ ಮುಂದಿನ 15 ದಿನಗಳ ಕಾವೇರಿ ನೀರು ಹರಿಸಬೇಕು ಎಂಬ ಶಿಫಾರಸು ಅನ್ನು ಎತ್ತಿಹಿಡಿದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ಹೊರಡಿಸಿದೆ.

ಹೀಗಿದ್ದರೂ ಸಹಿತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಕಾವೇರಿ ನೀರು ಬಿಡಲು ಕರ್ನಾಟಕ ನಿರ್ದೇಶಿಸಿದ್ದ ಕಾವೇರಿ ನೀರು ನಿರ್ವಹಣಾ ಸಮಿತಿ ಶಿಫಾರಸನ್ನು ಎತ್ತಿ ಹಿಡಿದಿದೆ. ನೀರು ಬಿಡಲು ಆದೇಶಿಸಿದೆ. ಈ ಮೂಲಕ ಕರ್ನಾಟಕಕ್ಕೆ ಮತ್ತೆ ಹಿನ್ನಡೆ ಆಗಿದೆ.

ಅಕ್ಟೋಬರ್ 11 ರಂದು ಕಾವೇರಿ ನೀರು ನಿರ್ವಹಣಾ ಸಮಿತಿ ತಮಿಳುನಾಡಿಗೆ ಮುಂದಿನ ಹದಿನೈದು ದಿನ ನೀರು ಹರಿಸುಂತೆ ಸೂಚಿಸಿ ಆದೇಶಿಸಿತ್ತು. ಇದಾದ ಬಳಿಕ ಇದೇ ವಿಚಾರ ಪ್ರಾಧಿಕಾರದ ಮುಂದೆ ಶುಕ್ರವಾರ ಬಂದಿತ್ತು. ಈ ವೇಳೆ ಇಲ್ಲಿನ ಆದೇಶ ತಮಿಳುನಾಡು ಪರವಾಗಿ ಬಂದಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+