ದೀಪಾವಳಿಯ ದಿನವೂ ಆರದ ಕಾವೇರಿ ಕಿಚ್ಚು: ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣತೆ ಹಚ್ಚಿ ಪ್ರತಿಭಟನೆ
ಚಾಮರಾಜನಗರ, ನವೆಂಬರ್ 14: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ಕಳೆದ 65 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇಂದು ಕೂಡ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣತೆ ಹಚ್ಚಿ ಪ್ರತಿಭಟನೆ ನಡೆಸಿದ್ದಾರೆ.
ನಗರದ ಚಾಮರಾಜೇಶ್ವರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣತೆ ಹಚ್ಚಿ ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ಕಳೆದ 65 ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಇಂದು ಕೂಡ ದೀಪಾವಳಿ ಹಬ್ಬದ ಅಂಗವಾಗಿ ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಅಂಧಕಾರದಲ್ಲಿ ಮುಳುಗಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳಿಗೆ ಒಳ್ಳೆಯ ಬುದ್ಧಿ ಬಂದು, ರಾಜ್ಯ ಸರ್ಕಾರ ತಮಿಳುನಾಡಿಗೆ ಬಿಟ್ಟಿರುವ ನೀರನ್ನು ತಕ್ಷಣವೇ ನಿಲ್ಲಿಸಲಿ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ರಾಜ್ಯಕ್ಕೆ ಒಳ್ಳೆಯದು ಮಾಡಲಿ ಎಂದರು.
ಕಗ್ಗತ್ತಲಿನಲ್ಲಿರುವ ಕಾವೇರಿ ನಿರ್ವಹಣಾ ಮಂಡಳಿಗೆ ಬೆಳಕು ತಗಲಿ ಮುಂದಿನ ದಿನಗಳಲ್ಲಿ ಕರ್ನಾಟಕದ ಪರ ತೀರ್ಪು ನೀಡಲಿ ಎಂದು ನಾವೆಲ್ಲರೂ ರಾಷ್ಟ್ರೀಯ ಹೆದ್ದಾರಿಯಲ್ಲಿ ಹಣತೆ ಹಚ್ಚಿ ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.
ಪ್ರತಿಭಟನೆಯಲ್ಲಿ ಶಾ.ಮುರಳಿ, ಪಣ್ಯದಹುಂಡಿ ರಾಜು, ಚಾ.ವೆಂ.ರಾಜ್ ಗೋಪಾಲ್, ಗು.ಪುರುಷೋತ್ತಮ್, ಪ್ರಕಾಶ್, ವೀರಭದ್ರ, ಚಾ.ಸಿ.ಸಿದ್ದರಾಜು ಇತರರು ಭಾಗವಹಿಸಿದ್ದರು.
ಕಾವೇರಿ ಕಾವು: ಬಣ್ಣದ ಡಬ್ಬಿ ಹಿಡಿದು ಬಣ್ಣ ಬದಲಿಸುವ ಸರ್ಕಾರ ಎಂದು ಆಕ್ರೋಶ
ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ಕ್ರಮವನ್ನು ಖಂಡಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ನಗರದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು ಇತ್ತೀಚಿಗೆ ಬಣ್ಣದ ಡಬ್ಬ ಹಿಡಿದು ವಿನೂತನ ಪ್ರತಿಭಟನೆ ನಡೆಸಿದರು.
ನಗರದ ಚಾಮರಾಜೇಶ್ಚರ ಉದ್ಯಾನವನದ ಮುಂಭಾಗದಲ್ಲಿ ಕರ್ನಾಟಕ ಸೇನಾಪಡೆ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ ಅವರ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾನಿತರು ಅಲ್ಲಿಂದ ಮೆರವಣಿಗೆ ಹೊರಟು ಭುವನೇಶ್ವರಿ ವೃತ್ತಕ್ಕೆ ತೆರಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಣ್ಣದ ಡಬ್ಬಿಗಳನ್ನು ಹಿಡಿದು ಕೇಂದ್ರ ಮತ್ತು ರಾಜ್ಯ ಸರ್ಕಾರ, ತಮಿಳುನಾಡು ಸರ್ಕಾರ, ಕಾವೇರಿ ನೀರು ನಿರ್ವಹಣಾ ಮಂಡಳಿ ವಿರುದ್ದ ಧಿಕ್ಕಾರದ ಘೋಷಣೆಗಳನ್ನು ಕೂಗಿ ಅಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಪ್ರತಿಭಟನೆ ನೇತೃತ್ವ ವಹಿಸಿದ ಚಾ.ರಂ.ಶ್ರೀನಿವಾಸಗೌಡ ಮಾತನಾಡಿ, ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರವುದನ್ನು ಖಂಡಿಸಿ ನಮ್ಮ ಸಂಘಟನೆ ವತಿಯಿಂದ ನಗರದಲ್ಲಿ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದೆ. ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಕೂಡ ಸರ್ಕಾರಗಳು, ಕಾವೇರಿ ನಿರ್ವಹಣಾ ಮಂಡಳಿ ಗಂಟೆಗೊಮ್ಮೆ ಬಣ್ಣ ಬದಲಾಯಿಸುತ್ತದೆ ಎಂದು ಆರೋಪಿಸಿ ನಾವೆಲ್ಲರೂ ಬಣ್ಣ ಡಬ್ಬ ಹಿಡಿದು ವಿನೂತನ ಪ್ರತಿಭಟನೆ ನಡೆಸಲಾಗಿದೆ ಎಂದರು.
ಸರ್ಕಾರಗಳು ಖಾಲಿ ಡಬ್ಬ ಸರ್ಕಾರವಾಗಿದೆ ಖಾಲಿ ಡಬ್ಬ. ಕಾವೇರಿ ನೀರು ನಿರ್ವಹಣಾ ಸಮಿತಿ ಬಣ್ಣ ಬದಲಾಯಿಸುವುದರಲ್ಲಿ ಬಣ್ಣ ಬದಲಾಯಿಸುತ್ತದೆ. ಇದೊಂದು ದೊಡ್ಡ ಬಣ್ಣದ ನಾಟಕವಾಡುವ ಸಮಿತಿಯಾಗಿದ್ದು ಖಾಲಿ ಡಬ್ಬವಾಗಿದೆ. ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ಒದಗಿಸಿಕೊಡಬೇಕು. ಕರ್ನಾಟಕ ಸರ್ಕಾರ ಕೂಡಲೇ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.












Click it and Unblock the Notifications