7ನೇ ದಿನಕ್ಕೆ ಕಾಲಿಟ್ಟ ಕಾವೇರಿ ಸಮರ: ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ಸಿಎಂ, ಡಿಎಸಿಎಂ ವಿರುದ್ಧ ಆಕ್ರೋಶ

ಚಾಮರಾಜನಗರ, ಸೆಪ್ಟೆಂಬರ್‌, 06: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡುತ್ತಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಇಂದು ಚಾಮರಾಜನಗರದಲ್ಲಿ 7ನೇ ದಿನ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.

ಚಾಮರಾಜನಗರ ಜಿಲ್ಲಾಡಳಿತ ಭವನದ ಎದುರು ಜಮಾಯಿಸಿದ ಹೋರಾಟಗಾರರು ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ರಾಜ್ಯ, ಕೇಂದ್ರ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿದರು.

cauvery-dispute-protest-continue

ಇದುವರೆಗೂ ಸಿಎಂ ಸಿದ್ದರಾಮಯ್ಯ ಕಾವೇರಿ ಅನ್ಯಾಯದ ಬಗ್ಗೆ ತುಟಿ ಬಿಚ್ಚುತ್ತಿಲ್ಲ, ಡಿ.ಕೆ.ಶಿವಕುಮಾರ್‌ ಹೋರಾಟಗಾರರ ವಿರುದ್ಧವೇ ಮಾತನಾಡುತ್ತಿದ್ದಾರೆ ಎಂದು ಧಿಕ್ಕಾರದ ಘೋಷಣೆ ಕೂಗಿದರು. ಈ ಮೂಲಕ ಅನ್ನದಾತರ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

ಮಹದಾಯಿ ಸೇರಿದಂತೆ ಹಲವು ಬಾರಿ ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ದಕ್ಷಿಣ ಕರ್ನಾಟಕ ಸ್ಪಂದಿಸಿದೆ. ಈಗ ಕಾವೇರಿ ವಿಚಾರದಲ್ಲಿ ಉತ್ತರ ಕರ್ನಾಟಕದ ರೈತರು ದನಿ ಎತ್ತಬೇಕು ಎಂದು ಪ್ರತಿಭಟನಾಕಾರರು ಮನವಿ ಮಾಡಿದರು.

ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ

ಕಾವೇರಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೆಪ್ಟೆಂಬರ್ 21ಕ್ಕೆ ಮುಂದೂಡಿದೆ. ಅಲ್ಲದೆ ಮತ್ತೊಂದೆಡೆ ಕಾವೇರಿ ಕೊಳ್ಳದ ಜಲಾಶಯದ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮಂಡ್ಯದಲ್ಲಿ ಚಡ್ಡಿ ಮೆರವಣಿಗೆ ನಡೆಸಿದರು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪಟ್ಟಿಯಂತಹ ಚಡ್ಡಿ ಧರಿಸಿ ಖಾಲಿ ಬಿಂದಿಗೆಯೊಂದಿಗೆ ಬೀದಿಗಿಳಿದ ಕಾರ್ಯಕರ್ತರು ರಾಜ್ಯ ಸರ್ಕಾರ, ಶಾಸಕರು, ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಎಲ್ಲ ಸಚಿವರ ವಿರುದ್ಧವೂ ಘೋಷಣೆ ಕೂಗಿದ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡಪರ ಕಾರ್ಯಕರ್ತರು ಬೆಂಗಳೂರು-ಮೈಸೂರು ಹೆದ್ದಾರಿ ಮಾರ್ಗವಾಗಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ವತಿಯಿಂದ ಸರ್ ಎಂ.ವಿ. ಪ್ರತಿಮೆ ಬಳಿ ನಡೆಸುತ್ತಿದ್ದ ಧರಣಿ ಸ್ಥಳಕ್ಕೆ ತೆರಳಿ ಚಳವಳಿಯಲ್ಲಿ ಪಾಲ್ಗೊಂಡರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಕಾವೇರಿ ಕಣಿವೆ ಜಿಲ್ಲೆಗಳ ರೈತರ ಹಿತ ಕಾಪಾಡಲು ಒತ್ತಾಯಿಸಿದರು.

ಕಾವೇರಿ ಕೊಳ್ಳದ ಜಲಾಶಯದಿಂದ ತಮಿಳುನಾಡಿಗೆ ಹರಿಸುತ್ತಿರುವ ನೀರನ್ನು ತಕ್ಷಣ ನಿಲ್ಲಿಸಬೇಕು. ಈಗಾಗಲೇ ನೆರೆ ರಾಜ್ಯಕ್ಕೆ ಕೆ.ಆರ್.ಎಸ್.ನಲ್ಲಿದ್ದ ನೀರು ಹರಿದುಹೋಗಿದ್ದು, ಇದಿರಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಾಗಾಗಿ ಮಂಡ್ಯ ಜಿಲ್ಲೆಗೆ 100 ಕೋಟಿ ರೂಪಾಯಿ ವಿಶೇಷ ಪ್ಯಾಕೇಜ್ ಘೋಷಿಸಬೇಕು. ರೈತರ ಬೆಳೆಗೆ ನೀರಿಲ್ಲದಂತೆ ಮಾಡಿರುವ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿದರು.

ಈ ವೇಳೆ ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್, ಗುತ್ತಲು ಚಂದ್ರು, ಜಯಮ್ಮ, ದರ್ಶನ್, ರಾಜೇಶ್, ನಂದೀಶ್ ಸೇರಿದಂತೆ ಮತ್ತಿತರರು ಇದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+