ತಮಿಳುನಾಡಿನ 3ನೇ ಬೆಳೆಗೆ ಕಾವೇರಿ ನೀರು: ರಾಜ್ಯ,ಕೇಂದ್ರ ಸರ್ಕಾರಗಳ ವಿರುದ್ಧ ಹೆಚ್ಚಿದ ಆಕ್ರೋಶ
ಚಾಮರಾಜನಗರ, ಅಕ್ಟೋಬರ್ 11: ಕಳೆದ 1 ತಿಂಗಳಿನಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಇಂದು ಖಾಲಿ ಸಿಡಿಗಳನ್ನು ಪ್ರದರ್ಶನ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಚಾಮರಾಜನಗರದ ಜಿಲ್ಲಾಡಳಿತ ಭವನದ ಎದುರು ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಖಾಲಿ ಸಿಡಿಗಳನ್ನು ಹಿಡಿದು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದರು.

ಎಷ್ಟೇ ಮನವಿ, ಹೋರಾಟ ನಡೆಸುತ್ತಿದ್ದರೂ ರಾಜ್ಯದ ಜನರ ಹಿತ ಬಲಿಕೊಟ್ಟು ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ಖಾಲಿ ಕ್ಯಾಸೆಟ್ ಸರ್ಕಾರವಾಗಿದೆ. ಮಧ್ಯ ಪ್ರವೇಶ ಮಾಡದ ಕೇಂದ್ರ, ನೀರು ಬೇಕು ಎನ್ನುತ್ತಿರುವ ತಮಿಳುನಾಡು ಸರ್ಕಾರಗಳು ಖಾಲಿ ಕ್ಯಾಸೆಟ್ ಸರ್ಕಾರಗಳಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ನಮಗೆ ಕುಡಿಯಲು ನೀರಿಲ್ಲ ಆದರೆ ರಾಜ್ಯ ಸರ್ಕಾರ ತಮಿಳುನಾಡಿನ 3ನೇ ಬೆಳೆಗೆ ನೀರು ಕೊಡುತ್ತಿದೆ. ನಮ್ಮ ರೈತರು, ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ರೀತಿ ನೀರು ಹರಿಸಿದರೇ ಪರಿಸ್ಥಿತಿ ಬಿಗಡಾಯಿಸಲಿದೆ ಎಂದು ಅಸಮಾಧಾನ ಹೊರಹಾಕಿದರು.

ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು, ನೀರು ಹರಿಸಿ ಮತ್ತೇ ಮತ್ತೇ ಜನರನ್ನು ಸಂಕಷ್ಟಕ್ಕೆ ದೂಡಬಾರದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಗಾಯದ ಮೇಲೆ ಬರೆ ಎಳೆಯುತ್ತಿದ್ದು ವಾಸ್ತವ ಸ್ಥಿತಿ ಅರಿತು ಸಂಕಷ್ಟ ಸೂತ್ರ ಕೊಡಲಿ ಎಂದು ಹೋರಾಟಗಾರರು ಒತ್ತಾಯಿಸಿದರು.
ಇನ್ನು ಕಳೆದ 1 ತಿಂಗಳಿನಿಂದಲೂ ತಮಿಳುನಾಡಿಗೆ ಕಾವೇರಿ ನೀರು ಹರಿಸಬಾರದೆಂದು ಚಾಮರಾಜನಗರದಲ್ಲಿ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಮಂಗಳವಾರ ಟಿಶ್ಯೂ ಪೇಪರ್ ಹಿಡಿದು ಆಕ್ರೋಶ ಹೊರಹಾಕಿದ್ದರು.
ಕಾವೇರಿ ನೀರನ್ನು ತಮಿಳುನಾಡಿನ 3 ಬೆಳೆಗೆ ಹರಿಸಲಾಗುತ್ತಿದೆ. ಆದರೆ, ನಮ್ಮಲ್ಲಿ ಕುಡಿಯಲು ನೀರಿಲ್ಲ, ತರಕಾರಿ ಬೆಳೆಗಳು ಒಣಗುತ್ತಿವೆ. ನಮ್ಮ ರೈತರು, ಜನರು ಈಗಾಗಲೇ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ರೀತಿ ನೀರು ಹರಿಸಿದರೆ ಮುಂದೆ ಟಿಶ್ಯೂ ಪೇಪರ್‌ನ್ನೇ ಬಳಸಬೇಕಾಗುತ್ತದೆ. ಮುಖ ತೊಳೆಯಲೂ ನೀರಿರಲ್ಲ ಎಂದು ಟಿಶ್ಯೂ ಪೇಪರ್ ಹಿಡಿದು ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು.
ಯಾವುದೇ ಕಾರಣಕ್ಕೂ ತಮಿಳುನಾಡಿಗೆ ನೀರು ಹರಿಸಬಾರದು. ನೀರು ಹರಿಸಿ ಮತ್ತೇ ಮತ್ತೇ ರೈತರನ್ನು ಸಂಕಷ್ಟಕ್ಕೆ ದೂಡಬಾರದು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಿರುದ್ಧ ಗಾಯದ ಮೇಲೆ ಬರೆ ಎಳೆಯುತ್ತಿದ್ದು, ವಾಸ್ತವ ಸ್ಥಿತಿ ಅರಿತು ಸಂಕಷ್ಟ ಸೂತ್ರ ಕೊಡಲಿ ಎಂದು ಹೋರಾಟಗಾರರು ಒತ್ತಾಯಿಸಿದ್ದರು.
ಇದೇ ರೀತಿ ರಾಜ್ಯಕ್ಕೆ ಅನ್ಯಾಯ ಮುಂದುವರೆದರೇ ತಮಿಳುನಾಡಿನ ಉತ್ಪನ್ನಗಳನ್ನು ಬಹಿಷ್ಕಾರ ಮಾಡುತ್ತೇವೆ. ತಮಿಳುನಾಡು ಗಡಿಯನ್ನು ಬಂದ್ ಮಾಡುತ್ತೇವೆ ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದಾರೆ.











Click it and Unblock the Notifications