ತಮಿಳುನಾಡಿಗೆ ಕಾವೇರಿ ನೀರು: ರಾಷ್ಟ್ರಪತಿಗೆ ಪತ್ರ ಬರೆದ ಪ್ರತಿಭಟನಾಕಾರರು, ಪತ್ರದಲ್ಲಿ ಏನಿದೆ ತಿಳಿಯಿರಿ
ಚಾಮರಾಜನಗರ, ಸೆಪ್ಟೆಂಬರ್, 26: ತಮಿಳುನಾಡಿಗೆ ನೀರು ಬಿಟ್ಟಿರುವುದನ್ನು ವಿರೋಧಿಸಿ ಈಗಾಗಲೇ ರಾಜ್ಯಾದ್ಯಂತ ರೈತರು ಸಮರ ಮುಂದುವರೆದಸಿದ್ದಾರೆ. ಹಾಗೆಯೇ ಚಾಮರಾಜನಗರದಲ್ಲಿ ಕಾವೇರಿ ಕ್ರಿಯ ಸಮಿತಿಯವರು ಅಂಚೆ ಕಾರ್ಡ್ ಚಳವಳಿ ನಡೆಸಿ ರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಚಾಮರಾಜನಗರ ಭವನದ ಎದುರು ಕೆಲಕಾಲ ಪ್ರತಿಭಟನಾ ನಡೆಸಿದ ಕಾವೇರಿ ಕ್ರಿಯ ಸಮಿತಿಯ ಕಾರ್ಯಕರ್ತರು ಕೇಂದ್ರ, ರಾಜ್ಯ ಹಾಗೂ ತಮಿಳುನಾಡು ಸರ್ಕಾರ ಮತ್ತು ಪ್ರಾಧಿಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ಅಲ್ಲದೆ ಇದೇ ವೇಳೆ ಕೂಡಲೇ ಮಧ್ಯೆ ಪ್ರವೇಶ ಮಾಡಿ ನ್ಯಾಯ ದೊರಕಿಸಿ ಕೊಡುವಂತೆ ರಾಷ್ಟ್ರಪತಿಗೆ ಅಂಚೆ ಪತ್ರ ಬರೆದು ಮನವಿ ಮಾಡಿದ ಘಟನೆ ನಡೆದಿದೆ.
ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಲಿ
ಕಾವೇರಿ ಜಲ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ರಾಜ್ಯ ಸರ್ಕಾರ ಸಿದ್ಧವಿದೆ. ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ವಿವಾದವನ್ನು ಕೋರ್ಟ್‌ನ ಹೊರಗೂ ತೀರ್ಮಾನ ಮಾಡಿಕೊಳ್ಳಲು ಅವಕಾಶ ಇದೆ. ಇದನ್ನೇ ನಾವು ಅನೇಕ ಬಾರಿ ಕೇಳಿದ್ದೇವೆ. ನಾನು ಪ್ರಧಾನಿ ಅವರಿಗೆ ಪತ್ರ ಬರೆದಿದ್ದೇನೆ. ದೇವೇಗೌಡರೂ ಪತ್ರ ಬರೆದಿದ್ದಾರೆ. ಈಗ ಬಿಜೆಪಿ- ಜೆಡಿಎಸ್ ಮೈತ್ರಿ ಆಗಿದೆ. ಈ ಕಾರಣಕ್ಕಾದರೂ ದೇವೇಗೌಡರ ಮಾತು ಕೇಳುತ್ತಾರೆ ಎಂದು ನೋಡೋಣ ಎಂದರು.
ಕಾವೇರಿ ವಿಚಾರದಲ್ಲಿ ಪ್ರಧಾನಿಯವರು ಮಧ್ಯಸ್ಥಿಕೆ ವಹಿಸಬೇಕು. ಕೇಂದ್ರದಿಂದ ತಜ್ಞರ ತಂಡ ಬರಬೇಕು. ಇದನ್ನು ನಾನು ಎರಡು ಬಾರಿ ಕೇಂದ್ರಕ್ಕೆ ಕೇಳಿದ್ದೇನೆ. ಈಗಲಾದರೂ ಕೇಂದ್ರದಿಂದ ತಂಡ ಬರಲಿ. ಯಾಕೆ ಕೇಂದ್ರದ ತಂಡ ಬರುತ್ತಿಲ್ಲ ಅಂತಾ ಬಿಜೆಪಿಯವರು ಹೇಳಲಿ? ಬಿಜೆಪಿಯವರ ಹಾದಿಬೀದಿಯಲ್ಲಿ ಹೋರಾಟ ಮಾಡುವ ಬದಲು ಕೇಂದ್ರದಿಂದ ತಜ್ಞರ ತಂಡ ಕರೆಸಲಿ. ಕೋರ್ಟ್ ಮಧ್ಯಸ್ಥಿಕೆ ಇಲ್ಲದೆ ಎರಡು ರಾಜ್ಯ ಕೂತು ಮಾತುಕತೆಗೆ ಈಗಲೂ ನಾವೂ ಸಿದ್ಧವಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕಾವೇರಿ ನೀರಿನ ವಿಚಾರದಲ್ಲಿ ದೇವೇಗೌಡರು ಪತ್ರ ಬರೆದಿರುವುದನ್ನು ನಾವು ಸ್ವಾಗತಿಸುತ್ತೇವೆ. ಈಗ ಅವರದು ಬಿಜೆಪಿ ಜೊತೆಗೆ ಹೊಸ ಪ್ರೇಮ. ಅವರು ಸಮಸ್ಯೆ ಬಗೆಹರಿಸುವ ಕಾರ್ಯ ಮಾಡಲಿ. ಆದರೆ, ಸರ್ಕಾರ ಸರಿಯಾದ ನಿರ್ಧಾರ ಕೈಗೊಳ್ಳಲಿಲ್ಲ ಎಂಬುದನ್ನು ಪತ್ರದಲ್ಲಿ ಉಲ್ಲೇಖಿಸಿರುವುದನ್ನು ನಾವು ಒಪ್ಪುವುದಿಲ್ಲ. ಸರ್ಕಾರ ಎಲ್ಲಾ ಹಂತದಲ್ಲೂ ನಾಡಿನ ಜನರ ರಕ್ಷಣೆಗೆ ಬದ್ಧವಾಗಿಯೇ ಇದೆ. ಕಾನೂನು ತಜ್ಞರು ಸರಿಯಾಗಿ ವಾದ ಮಾಡಿಲ್ಲ ಎಂಬ ಆರೋಪ ಸುಳ್ಳು ಎಂದರು.
ಹಿಂದಿನ ಎಲ್ಲಾ ಸರ್ಕಾರಗಳು ಇದ್ದಾಗಲೂ ಇದ್ದ ಲೀಗಲ್ ಟೀಮ್ ಈಗಲೂ ಇರೋದು. ಅವರೇ ವಾದ ಮಾಡಿದ್ದಾರೆ. ಕಾನೂನು ತಜ್ಞರಲ್ಲಿ ಯಾವ ಬದಲಾವಣೆ ಆಗಿಲ್ಲ. ಹೀಗಾಗಿ ಸಮರ್ಥ ವಾದ ಮಂಡಿಸಿಲ್ಲ ಎಂಬುದರಲ್ಲಿ ಅರ್ಥವಿಲ್ಲ ಎಂದರು.
ಪ್ರತಿಭಟನೆನಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು
ಬೆಂಗಳೂರು ಬಂದ್ ಬಗ್ಗೆ ಪ್ರತಿಕ್ರಿಯಿಸಿದ ಸಿಎಂ, ಪ್ರತಿಭಟನೆ ಮಾಡುವುದಕ್ಕೆ ನಮ್ಮ ವಿರೋಧವಿಲ್ಲ. ಪ್ರತಿಭಟನೆನಿಂದ ಇನ್ನೊಬ್ಬರಿಗೆ ತೊಂದರೆ ಆಗಬಾರದು. ಪ್ರತಿಭಟನೆ ಹೇಗೆ ಸಂವಿಧಾನತ್ಮಕ ಹಕ್ಕೋ, ಹಾಗೆಯೇ ಸಾಮಾನ್ಯ ಜನರಿಗೂ ಹಕ್ಕು ಇರುತ್ತದೆ. ಹಾಗಾಗಿ ಅವರ ಹಕ್ಕಿಗೆ ಧಕ್ಕೆ ತರಬೇಡಿ. ಜನರಿಗೆ ತೊಂದರೆ ಆಗಬಾರದು ಎಂಬ ಕಾರಣಕ್ಕಾಗಿ 144ನೇ ಸೆಕ್ಷನ್ ಜಾರಿ ಮಾಡಿದ್ದೇವೆ. ಜನರ ಹಕ್ಕನ್ನು ರಕ್ಷಿಸುವುದು ಸರ್ಕಾರದ ಕರ್ತವ್ಯ. ಅದೇ ಕೆಲಸವನ್ನು ನಾವು ಮಾಡಿದ್ದೇವೆ ಎಂದರು.
ಚಡ್ಡಿ ಚಳವಳಿ ಮಾಡಲಿ
ರಾಜ್ಯ ಕಾಂಗ್ರೆಸ್ ಡಿಎಂಕೆಯ ಬಿ ಟೀಮ್ ಎಂಬ ಎಚ್.ಡಿ.ಕುಮಾರಸ್ವಾಮಿ ಆರೋಪದ ಬಗ್ಗೆ ಮಾತನಾಡಿದ ಸಿಎಂ, ಎಐಡಿಎಂಕೆ ಬಿಜೆಪಿ ಜೊತೆ ಇತ್ತಲ್ಲ ಆಗ ಅದು ಯಾವ ಟೀಮ್? ಸುಮ್ಮನೆ ರಾಜಕೀಯ ಕಾರಣಕ್ಕೆ ಏನೇನೋ ಹೇಳಿಕೆ ಕೊಡಬಾರದು. ಸುಮ್ಮನೆ ಬಿ ಟೀಮ್, ಎ ಟೀಮ್ ಅನ್ನಬಾರದು ಎಂದು ಕುಮಾರಸ್ವಾಮಿ ವಿರುದ್ಧ ಹರಿಹಾಯ್ದರು.
ಅಲ್ಲದೆ, ಬಿಜೆಪಿಯಿಂದ ಚಡ್ಡಿ ಚಳುವಳಿ ವಿಚಾರದ ಬಗ್ಗೆಯೂ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರನ್ನು ನಾವು ಮೊದಲಿನಿಂದಲೂ ಚಡ್ಡಿಗಳು ಎಂದೇ ಕರೆಯುತ್ತಿದ್ದೇವೆ. ಈಗ ಚಡ್ಡಿ ಚಳುವಳಿ ಮಾಡುತ್ತಿದ್ದಾರೆ. ಮಾಡಲಿ ಬಿಡಿ ಎಂದು ಲೇವಡಿ ಮಾಡಿದರು.












Click it and Unblock the Notifications