ತಮಿಳುನಾಡಿಗೆ ಕಾವೇರಿ ನೀರು ಹರಿಸಲು ಸುಪ್ರೀಂ ಆದೇಶ: ಚಾಮರಾಜನಗರದಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರ ಆಕ್ರೋಶ

ಚಾಮರಾಜನಗರ, ಸೆಪ್ಟೆಂಬರ್‌, 21: ತಮಿಳುನಾಡಿಗೆ 15 ದಿನಗಳ ಕಾಲ ಪ್ರತಿನಿತ್ಯ 5000 ಕ್ಯೂಸೆಕ್ ನೀರು ಹರಿಸಲು ಮತ್ತೆ ಸುಪ್ರೀಂ ಕೋರ್ಟ್ ಆದೇಶ ಕೊಟ್ಟಿದ್ದು, ಈ ಆದೇಶದ ವಿರುದ್ಧ ರಾಜ್ಯದ್ಯಂತ ಆಕ್ರೋಶಗಳು ಭುಗಿಲೆದ್ದಿವೆ. ಹಾಗೆಯೇ ಚಾಮರಾಜನಗರ ಜಿಲ್ಲೆಯಲ್ಲಿ ತಮಿಳುನಾಡಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದರು.

ಕಬ್ಬು ಬೆಳೆಗಾರರ ಸಂಘದ ಕಾರ್ಯಕರ್ತರು ಹಾಗೂ ರೈತರು ತಮಿಳುನಾಡಿಗೆ ತೆರಳುವ ರಾಷ್ಟ್ರೀಯ ಹೆದ್ದಾರಿಯನ್ನು ಒಂದು ಗಂಟೆಗೂ ಹೆಚ್ಚು ಕಾಲ ಬಂದ್ ಮಾಡಿ ಕೇಂದ್ರ, ರಾಜ್ಯ ಹಾಗೂ ತಮಿಳುನಾಡು ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ಇದೇ ವೇಳೆ ರಸ್ತೆ ಮಧ್ಯ ಟೈರ್‌ಗೆ ಬೆಂಕಿ ಹಚ್ಚಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ದ ಆಕ್ರೋಶ ಹೊರ ಹಾಕಿದರು.

Cauvery water release to Tamil Nadu: Farmers protest in Chamarajanagar against Supreme court Order

ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮುಖಿ ನಡೆದಿದ್ದು, ಪ್ರತಿಭಟನಾ ನಿರೆ ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.

ಚಾಮರಾಜನಗರದಲ್ಲೆ ಅಷ್ಟೇ ಅಲ್ಲದೆ ಬೆಂಗಳೂರು, ಮಂಡ್ಯ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುಪ್ರೀಂ ಕೋರ್ಟ್‌ ಆದೇಶದ ವಿರುದ್ಧ ಆಕ್ರೋಶಗಳು ಭುಗಿಲೆದ್ದಿವೆ. ಸುಪ್ರೀ ಕೋರ್ಟ್‌ ಆದೇಶ ಹೊರಬೀಳುತ್ತಿದ್ದಂತೆಯೇ ರಾಜ್ಯದ ಹಲವು ಭಾಗಗಳಲ್ಲಿ ರೈತರು ಕನ್ನಡ ಪರ ಸಂಘಟನೆಗಳು, ಕನ್ನಡ ಸಿನಿಮಾ ನಟನಟಿಯರು ಆಕ್ರೋಶಗಳನ್ನು ಹೋರಹಾಕುತ್ತಿದ್ದಾರೆ.

ಬೆಂಗಳೂರಿನಲ್ಲಿ ಕರವೇ ಅಧ್ಯಕ್ಷ ನಾರಾಯಣಗೌಡ ಬಣದಿಂದ ಪ್ರತಿಭಟನೆ ನಡೆಯಲಿದೆ. ಹಾಗೂ ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಲು ಕೆಆಸ್​ಎಸ್ ಪಕ್ಷ ಕರೆ ಕೊಟ್ಟಿದೆ. ಮಂಡ್ಯದ ಸಂಜಯ್ ಸರ್ಕಲ್​ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಲಿದೆ. ಕಾವೇರಿಗಾಗಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಕರವೇ ಅಧ್ಯಕ್ಷ ನಾರಾಯಣಗೌಡ ಮುಂದಾಗಿದ್ದಾರೆ.

ಯಾವುದೇ ಕಾರಣಕ್ಕೂ ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಬಾರದು. ಕಾವೇರಿ ನೀರು ಹರಿಸುವುದನ್ನು ಕೂಡಲೇ ನಿಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ ಕೊಟ್ಟಿದೆ. ಕರವೇ ನಾರಯಣಗೌಡ ನೇತೃತ್ವದಲ್ಲಿ ವಿಧಾನಸೌಧ ಮುತ್ತಿಗೆ ಹಾಕಲು ನಿರ್ಧರಿಸಲಾಗಿದೆ. ಇನ್ನು ಮತ್ತೊಂದೆಡೆ ಪ್ರತಿಭಟನೆ ರ‍್ಯಾಲಿ ತಡೆಯಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ.

ಕರ್ನಾಟಕ ಮತ್ತು ಕಾವೇರಿ ಕಣಿವೆ ಪ್ರದೇಶದಲ್ಲಿ ತೀವ್ರತರವಾದ ಬರಗಾಲವಿದೆ. ಈ ನಡುವೆಯೂ ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ 5,000 ಕ್ಯೂಸೆಕ್‌ ನೀರು ಹರಿಸಲು ಆದೇಶ ಮಾಡಿರುವುದು ಅನ್ಯಾಯ. ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಇದನ್ನು ಪಾಲಿಸಬಾರದು. ರಾಜ್ಯದದ ರೈತರಿಗೆ ಮರಣ ಶಾಸನವಾಗಿರುವ ಈ ಆದೇಶ ವಾಪಾಸ್ ಪಡೆಯಬೇಕ. ಜನರಿಗೆ ಕುಡಿಯುವ ನೀರಿಗೆ ಆಸರೆಯಾಗಿರುವ ಕಾವೇರಿ ನೀರನ್ನು ಯಾವುದೇ ಕಾರಣಕ್ಕೂ ತಮಿಳುನಾಡಿಗೆ ಹರಿಸಬಾರದು ಎಂದು ಕರವೇ ಅಧ್ಯಕ್ಷ ನಾರಾಯಣಗೌಡ ಒತ್ತಾಯಿಸಿದ್ದಾರೆ.

ಗಾಂಧಿನಗರದ ಕರವೇ ಕೇಂದ್ರ ಕಚೇರಿ ಮುಂಭಾಗದಿಂದ ವಿಧಾನಸೌಧದವರೆಗೆ ಕಾಲ್ನಡಿಗೆ ಮೂಲಕ ಜಾಥಾ ಮಾಡಿ ಬಳಿಕ ವಿಧಾನಸೌಧಕ್ಕೆ ತೆರಳಿ ಮುತ್ತಿಗೆ ಹಾಕಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಮಂಡ್ಯದಲ್ಲಿ ಮಹಿಳಾ ಹೋರಾಟಗಾರ್ತಿಯರು ಸುಪ್ರೀಂಕೋರ್ಟ್​ ಆದೇಶಕ್ಕೆ ವಿರೋಧ ವ್ಯಕ್ತಪಡಿಸಿದ್ದು, ಇದೇ ವೇಳೆ ಇದು ಮರಣ ಶಾಸನ ಎಂದು ಕಣ್ಣೀರಿಟ್ಟಿದ್ದಾರೆ. ಅಲ್ಲದೆ ರಾಜ್ಯದ ಎಲ್ಲಾ ಸಂಸದರು ರಾಜಿನಾಮೆ ನೀಡುವಂತೆ ಆಗ್ರಹಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+