ಮದ್ಯದ ಪೌಚ್‌ಗಳ ಮೇಲೆ ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಫೋಟೋ, ವೈರಲ್‌

ಚಾಮರಾಜನಗರ, ಏಪ್ರಿಲ್‌, 25: ರಾಜ್ಯದಲ್ಲಿ 14 ಲೋಕಸಭೆ ಕ್ಷೇತ್ರಗಳಿಗೆ ಮೊದಲ ಹಂತದ ಮತದಾನ ನಡೆಯಲಿದೆ. ಇನ್ನು ಮತದಾನಕ್ಕೆ ಕ್ಷಣಗಣನೆ ಆರಂಭಗೊಂಡ ಹೊತ್ತಲ್ಲೇ ಎಣ್ಣೆ ಘಮಲು ಜೋರಾಗಿದೆ. ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಅವರ ಲೇಬಲ್ ಅಂಟಿಸಿರುವ ಮದ್ಯದ ಪೌಚುಗಳ ಹಂಚಿಕೆ ಮಾಡಲಾಗಿದ್ದು, ಇದೀಗ ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್‌ ವೈರಲ್‌ ಆಗುತ್ತಿವೆ.

ಸುನೀಲ್ ಬೋಸ್, ಕ್ರಮ ಸಂಖ್ಯೆ 3 ಎಂಬ ಲೇಬಲ್ ಇರುವ ಮದ್ಯದ ಪೌಚುಗಳನ್ನು ಹಂಚಿಕೆ ಮಾಡುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

Chamarajanagar Constituency Congress candidate photo on liquor pouche Viral

ಆದರೆ ಈ ಘಟನೆ ನಡೆದ ಸ್ಥಳದ ಬಗ್ಗೆ ನಿಖರತೆ, ಹಂಚಿರುವ ವ್ಯಕ್ತಿಗಳ ಬಗ್ಗೆ ಮಾಹಿತಿ ತಿಳಿದುಬಂದಿಲ್ಲ.

ಕೆ.ಎಸ್.ಈಶ್ವರಪ್ಪರಿಗೆ ಟಾಂಗ್ ಕೊಟ್ಟ ಬಿಜೆಪಿ ರಾಜ್ಯಾಧ್ಯಕ್ಷ: ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ದಿನದಿಂದ ದಿನಕ್ಕೆ ಬಿಜೆಪಿ ಪರ ಅಲೆ ಹೆಚ್ಚುತ್ತಿದೆ. ವಾತಾವರಣ ಚನ್ನಾಗಿದೆ. ಶಿವಮೊಗ್ಗದಲ್ಲಿ ಕಾರ್ಯಕರ್ತರೆಲ್ಲರೂ ರಣೋತ್ಸಾಹದಲ್ಲಿದ್ದಾರೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಉತ್ಸಾಹ ನೋಡಿದರೆ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ 4 ಲಕ್ಷ ಮತಗಳ ಅಂತರದಲ್ಲಿ ಗೆಲ್ಲುತ್ತಾರೆ ಎಂದು ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಜಿಎಂಐಟಿ ಗೆಸ್ಟ್ ಹೌಸ್‌ನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾವು ರಾಘವೇಂದ್ರ ಅವರು 2 ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂದುಕೊಂಡಿದ್ದೆವು. ಜನರ ಉತ್ಸಾಹ ನೋಡಿದರೆ ಅಂತರ ಹೆಚ್ಚಾಗುತ್ತದೆ ಎಂಬ ವಿಶ್ವಾಸ ಮೂಡಿದೆ. ಶಿವಮೊಗ್ಗದಲ್ಲಿ ರಾಘವೇಂದ್ರ ಬಿಟ್ಟು ಬೇರೆ ಯಾರೂ ಇಲ್ಲ. ಅವರಿಗೆ ಸರಿಸಾಟಿ ಕೂಡ ಯಾರು ಇಲ್ಲ. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪರ ಸ್ಪರ್ಧೆಯಿಂದ ಲೀಡ್ ಹೆಚ್ಚಾಗಿದೆ ಎಂದು ಹೇಳುವ ಮೂಲಕ ಟಾಂಗ್ ನೀಡಿದರು.

ಕಾಂಗ್ರೆಸ್ ಪಕ್ಷದವರು ಹೇಗಾದರೂ ಮತದಾರರ ಮನಸ್ಸು ಗೆಲ್ಲಬೇಕೆಂದು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಎಷ್ಟೇ ಪ್ರಯತ್ನಪಟ್ಟರೂ ವಾತಾವರಣ ಬಿಜೆಪಿ-ಜೆಡಿಎಸ್ ಪರ ಇದೆ. ಮತದಾರರು ನರೇಂದ್ರ ಮೋದಿ ಪರ
ಇರಬೇಕೆಂದು ಗಟ್ಟಿಯಾದ ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ನಮ್ಮ ನಿರೀಕ್ಷೆ ಮೀರಿ ಬಿಜೆಪಿ ಪರ ವಾತಾವರಣ ಇದೆ. ರಾಜ್ಯದ 28 ಕ್ಷೇತ್ರಗಳಲ್ಲಿ ಗೆದ್ದೇ ಗೆಲ್ಲುತ್ತೇವೆ ಅನ್ನೋ ವಿಶ್ವಾಸವಿದೆ ಎಂದರು.

ದಾವಣಗೆರೆಯಲ್ಲಿ ನೂರಕ್ಕೆ ನೂರರಷ್ಟು ಬಿಜೆಪಿಗೆ ಗೆಲುವು. ಏಪ್ರಿಲ್ 28ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಾಹ್ನ 3 ಗಂಟೆಗೆ ದಾವಣಗೆರೆಗೆ ಬರುತ್ತಿದ್ದಾರೆ. ದಾವಣಗೆರೆಯಲ್ಲಿ ಲೊಕಸಭಾ ಚುನಾವಣೆ ಘೋಷಣೆಗೂ ಮುನ್ನ ಬಹಳ ಗೊಂದಲ ಇತ್ತು. ಇದೀಗ ಅದೆಲ್ಲವನ್ನೂ ಮರೆತು ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದಾರೆ ಎಂದರು.

ಚಿಕ್ಕಮಗಳೂರು, ಚಿತ್ರದುರ್ಗ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ ಸೇರಿ ಹಲವು ಕ್ಷೇತ್ರಗಳಲ್ಲಿ ಗೆಲ್ಲಲು ಕಾಂಗ್ರೆಸ್ ಕನಸು ಕಾಣುತ್ತಿದೆ. ಆದರೆ ಅದು ಆಗಲ್ಲ. ಎಲ್ಲಾ ಕಡೆ ಮೋದಿ, ಬಿಜೆಪಿ ಅಲೆ ಇದೆ ಎಂದು ಹೇಳಿದರು.

ಈ ವೇಳೆ ಸಂಸದ ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವ ಎಸ್.ಎ.ರವೀಂದ್ರನಾಥ್, ಜಿಲ್ಲಾಧ್ಯಕ್ಷ ರಾಜಶೇಖರ್ ಸೇರಿದಂಯೆ ಮತ್ತಿತರರು ಹಾಜರಿದ್ದರು.

ಬಿಜೆಪಿ ಬೂತ್ ಅಧ್ಯಕ್ಷರ ಸಭೆ: ಬೂತ್ ಮಟ್ಟದ ಅಧ್ಯಕ್ಷರ ಸಭೆಯನ್ನು ಬಿ.ವೈ. ವಿಜಯೇಂದ್ರ ನಡೆಸಿದರು. ಬೂತ್ ಮಟ್ಟದಲ್ಲಿ ಪಕ್ಷ ಸದೃಢ ಮಾಡುವಂತೆ ಕರೆ ನೀಡಿದರು. ದಾವಣಗೆರೆ ನಗರದ ಜಿಎಂಐಟಿ ಸಭಾಂಗಣದಲ್ಲಿ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಯಲ್ಲಿ ಮತ ಗಳಿಕೆ ಹೆಚ್ಚು ಮಾಡಿ. ಪಾಲಿಕೆ ಸದಸ್ಯರು ಹೆಚ್ಚು ಶ್ರಮ ಹಾಕಿ ಕೆಲಸ ಮಾಡುವಂತೆ ಸೂಚಿಸಿದರು.

ಎಸ್‌.ಎಸ್.ಎಂ ಆಪ್ತರು ಬಿಜೆಪಿ ಸೇರ್ಪಡೆ: ಕಾಂಗ್ರೆಸ್‌ನ ಮಹಾನಗರ ಪಾಲಿಕೆಯ ಮಾಜಿ ಸದಸ್ಯರು, ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಆಪ್ತರು ಬಿಜೆಪಿ ಸೇರ್ಪಡೆಗೊಂಡರು. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆ‌ಯಾದರು. ಮಾಜಿ ಕಾರ್ಪೋರೇಟರ್ ಕರಿಗಾರ ಬಸಪ್ಪ, ಲಿಂಗರಾಜ್, ಹಾಲೇಶ್ ಕಮಲ ಹಿಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+