ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮುಂದಿನ ಮೂರು ದಿನಗಳ ಕಾಲ ದೇವಸ್ಥಾನ ಬಂದ್

|
Google Oneindia Kannada News

ಬೆಂಗಳೂರು, ಆ. 17: ಕೊರೊನಾ ವೈರಸ್ ಸೋಂಕು ಹರಡುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಚಾಮರಾಜನರ ಜಿಲ್ಲಾಡಳಿತ ವಿಶೇಷ ಕ್ರಮಕೈಗೊಂಡಿದೆ. ಇಂದಿನಿಂದ ಮೂರು ದಿನಗಳ ಕಾಲ ಜಿಲ್ಲೆಯಲ್ಲಿರುವ ಪ್ರಮುಖ ದೇವಸ್ಥಾನಗಳನ್ನು ಬಂದ್ ಮಾಡಲಾಗಿದೆ. ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಲೈ ಮಹದೇಶ್ವರ ಬೆಟ್ಟದ ದೇವಸ್ಥಾನಕ್ಕೆ ಮುಂದಿನ ಮೂರು ದಿನಗಳ ಕಾಲ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.

Recommended Video

Americaಗೆ ಹೊಟ್ಟೆ ಉರಿಸಲು #Russia ಮಾಡಿದ ಪ್ಲಾನ್ ಇದು | Oneindia Kannada

ಬೆನಕನ ಅಮಾವಾಸ್ಯೆ ನಿಮಿತ್ತ ವಿಶೇಷ ಪೂಜಾ ಕಾರ್ಯಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಹಿನ್ನಲೆಯಲ್ಲಿ ಈ ಆದೇಶ ಜಾರಿಮಾಡಲಾಗಿದೆ. ಕೊರೊನಾ ವೈರಸ್ ಸೊಂಕು ಹರಡದಂತೆ ತಡೆಯಲು ಮುಂಜಾಗ್ರತಾ ಕ್ರಮವಾಗಿ ಇಂದು, ನಾಳೆ ಮತ್ತು ನಾಡಿದ್ದು ದೇವಸ್ಥಾನ ಬಂದ್ ಆಗಲಿದೆ. ಅಮಾವಾಸ್ಯೆ ಅಂಗವಾಗಿ ವಿಶೇಷ ಪೂಜೆ, ಎಣ್ಣೆ ಮಜ್ಜನ, 108 ಕುಂಭಾಬಿಷೇಕ ಸಹಸ್ರ ಅಭಿಷೇಕ ನಡೆಯಲಿದೆ. ಆದರೆ ಭಕ್ತರಿಗೆ ಹಾಗೂ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.

ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು, ಜನಪ್ರತಿನಿಧಿಗಳನ್ನು ಹೊರತು ಪಡಿಸಿ ಉಳಿದಂತೆ ಸಾರ್ವಜನಿಕರಿಗೆ ಮಾತ್ರ ಪ್ರವೇಶ ನಿರ್ಬಂಧಿಸಲಾಗಿದೆ. ಆದರೆ ಅಧಿಕಾರಿಗಳನ್ನು ಹೊರತು ಪಡಿಸಿ ಜನಪ್ರತಿನಿಧಿಗಳಿಗೆ ಅವಕಾಶ ಮಾಡಿಕೊಟ್ಟಿರುವುದಕ್ಕೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ಸಾಂಪ್ರದಾಯದಂತೆ ಪೂಜೆಗಳು ನಡೆಯಲಿವೆ.

Chamarajanagar DC Restricted Devotees Entering Malai Mahadeshwara Temple for Three Days

ಆರಂಭದ ದಿನಗಳಲ್ಲಿ ಹಸಿರು ಜಿಲ್ಲೆಯಾಗಿದ್ದ ಚಾಮರಾಜನಗರ ಜಿಲ್ಲೆಯಲ್ಲಿ ಇದೀಗ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1584 ಆಗಿದ್ದು, 1143 ಜನರು ಗುಣಮುಖರಾಗಿದ್ದಾರೆ. ಸೋಂಕಿನಿಂದ 21 ಜನರು ಮೃತಪಟ್ಟಿದ್ದಾರೆ. ಜೊತೆಗೆ 412 ಸಕ್ರೀಯ ಸೋಂಕಿತರು ಜಿಲ್ಲೆಯಲ್ಲಿದ್ದಾರೆ.

English summary
Chamarajanagar District Administration has restricted devotees from entering Malai Mahadeshwara Temple for three days,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X