ಚಾಮರಾಜನಗರ ಜಿಲ್ಲಾಧಿಕಾರಿ, ಎಡಿಸಿ ದಿಢೀರ್ ವರ್ಗಾವಣೆ
ಚಾಮರಾಜನಗರ, ಜೂನ್, 28: ಚಾಮರಾಜನಗರ ಜಿಲ್ಲಾಧಿಕಾರಿ ಹಾಗೂ ಹೆಚ್ಚುವರಿ ಜಿಲ್ಲಾಧಿಕಾರಿಯನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.
ಚಾಮರಾಜನಗರ ಜಿಲ್ಲಾಧಿಕಾರಿಯಾಗಿದ್ದ ಡಿ.ಎಸ್.ರಮೇಶ್ ಅವರನ್ನು ತೋಟಗಾರಿಕೆ ಇಲಾಖೆ ನಿರ್ದೇಶಕರನ್ನಾಗಿ ನೇಮಕ ಮಾಡಿದೆ. ಆದರೆ ಜಿಲ್ಲೆಗೆ ಇನ್ನೂ ಜಿಲ್ಲಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿಲ್ಲದಿರುವುದು ಅಚ್ಚರಿ ಮೂಡಿಸಿದೆ.
ಚಾಮರಾಜನಗರ ಹೆಚ್ಚುವರಿ ಡಿಸಿ ಹಾಗೂ ಮಲೆಮಹದೇಶ್ಚರ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿಯಾಗಿದ್ದ ಕಾತ್ಯಾಯಿನಿದೇವಿ ಅವರನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡಲಾಗಿದೆ. ಇನ್ನು ಕೊಳ್ಳೇಗಾಲ ಎಸಿಯಾಗಿ ಬಡ್ತಿ ಹೊಂದಿದ್ದ ಗೀತಾ ಹುಡೇದಾ ಅವರನ್ನು ಎಡಿಸಿ ಹಾಗೂ ಜಿಲ್ಲೆಯ ಪ್ರಾಧಿಕಾರದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಗೆ ನೂತನ ಡಿಸಿ ನೇಮಕ
ಮತ್ತೊಂದೆಡೆ ಚಿಕ್ಕಮಗಳೂರು ಜಿಲ್ಲೆಗೆ ನೂತನ ಜಿಲ್ಲಾಧಿಕಾರಿಯಾಗಿ ಮೀನಾ ನಾಗರಾಜ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಹಿಂದೆ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದ ಕೆ.ಎನ್.ರಮೇಶ್ ಅವರನ್ನು ವರ್ಗಾವಣೆ ಮಾಡಿ ಆದೇಶ ಮಾಡಿದೆ. ಇನ್ನು ಇಂದು ನೇಮಕ ಆಗಿರುವ ಮೀನಾ ನಾಗರಾಜ್ ಈ ಹಿಂದೆ ಮಾಹಿತಿ ತಂತ್ರಜ್ಞಾನ ಮತ್ತು ಬಯೋ ಟೆಕ್ನಾಲಜಿ ಸಂಸ್ಥೆ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದುಬಂದಿದೆ.
ಹಾಗೆಯೇ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ. ಮತ್ತೊಂದೆಡೆ ಜಿಲ್ಲಾ ಪಂಚಾಯತ್ ಸಿಇಓ ಜಿ.ಪ್ರಭು ಅವರನ್ನು ತುಮಕೂರು ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿಇಓ ಆಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಚಿಕ್ಕಮಗಳೂರು ಜಿ.ಪಂ.ಸಿಇಓ ಹುದ್ದೆಯನ್ನು ಕಾಯ್ದಿರಿಸಲಾಗಿದೆ.












Click it and Unblock the Notifications