ಬೆಂಗಳೂರು: ರಾಷ್ಟ್ರಪತಿ ಅವರೊಂದಿಗೆ ಸಂವಾದಕ್ಕೆ ಆಯ್ಕೆಯಾದ ಜಿಲ್ಲಾವಾರು ಬುಡಕಟ್ಟು ಜನರ ವಿವರ ತಿಳಿಯಿರಿ
ಚಾಮರಾಜನಗರ, ಜುಲೈ, 02: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಜುಲೈ 3ರಂದು ಬೆಂಗಳೂರಿನಲ್ಲಿ ನಡೆಯಲಿರುವ ಸಂವಾದಕ್ಕೆ ಮೈಸೂರು, ಚಾಮರಾಜನಗರ, ಕೊಡಗು, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಬುಡಕಟ್ಟು ಜನಾಂಗದವರನ್ನು ಆಯ್ಕೆ ಮಾಡಲಾಗಿದೆ.
ಈ ಜಿಲ್ಲೆಗಳಲ್ಲಿರುವ ನೈಜ ದುರ್ಬಲ ಸಮುದಾಯಗಳಾದ ಜೇನುಕುರುಬ, ಕೊರಗ ಸಮಾಜದ ಕೆಲವರನ್ನು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ ಆಯ್ಕೆ ಮಾಡಿದೆ. ಈ ಸಂಬಂಧ ಆಯಾ ಜಿಲ್ಲೆಗಳ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳಿಗೆ ಪತ್ರ ಕಳುಹಿಸಲಾಗಿದೆ.

ಗುಂಡ್ಲುಪೇಟೆಯ ಜೇನು ಕುರುಬರ ಆಯ್ಕೆ
1: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಸಂವಾದದಲ್ಲಿ ಭಾಗವಹಿಸಲು ಗುಂಡ್ಲುಪೇಟೆಯ ದೇಶಿಪುರ ಕಾಲನಿಯ ಸಿದ್ದಮ್ಮ, ಪುಟ್ಟಮ್ಮ, ಮದ್ದೂರು ಕಾಲನಿಯ ಗೋವಿಂದ ಈ ಮೂವರು ಜೇನು ಕುರುಬರನ್ನು ಆಯ್ಕೆ ಮಾಡಲಾಗಿದೆ.
2. ಮೈಸೂರಿನ ಎಚ್.ಡಿ.ಕೋಟೆಯ ಬಸಮ್ಮ, ರಾಜೇಶ್, ಅಯ್ಯಪ್ಪ, ಭೈರಾ, ಸಿ.ಭಾಸ್ಕರ, ಪುಟ್ಟಬಸವಯ್ಯ, ಹುಣಸೂರಿನ ಜೆ.ಪಿ.ಪಾರ್ವತಿ, ಸುಮಾ, ರಾಜಪ್ಪ, ಸಚಿನ್, ಪಿರಿಯಾಪಟ್ಟಣದ ಜಯಮ್ಮ, ಗೌರಿ, ಲಕ್ಷ್ಮೀ, ಜಾನಕಮ್ಮ, ಬಸವಣ್ಣ, ಬಸಪ್ಪ, ಸರಗೂರಿನ ವಿಜಯ್ ಅವರನ್ನು ಆಯ್ಕೆ ಮಾಡಲಾಗಿದೆ.
3. ಕೊಡಗು ಜಿಲ್ಲೆಯ ಸೋಮವಾರಪೇಟೆಯ ಜೆ.ಕೆ.ಮುತ್ತಮ್ಮ, ಬಿ.ಕೆ.ಧರ್ಮಪ್ಪ, ಉಡುಪಿ ಜಿಲ್ಲೆಯ ನಳಿನಿ, ಡಾ.ಸಬಿತಾ, ಸುಶೀಲಾ, ಪ್ರಕೃತಿ, ಶಕೀಲಾ, ಸುನಂದಾ, ಕುಡ್ಪಾ, ಬಾಬು, ರಮೇಶ್, ಕೊಗ್ಗ, ಅಕ್ಷಯ್, ಕುಮಾರ್, ಸಂಜೀವ ಕೊರಗ, ಕೆ.ಪುತ್ರಯ ಅವರನ್ನು ಆಯ್ಕೆ ಮಾಡಲಾಗಿದೆ. ಇನ್ನು ದಕ್ಷಿಣ ಕನ್ನಡ ಜಿಲ್ಲೆಯ ರತ್ನ, ಚಂದ್ರವತಿ, ಶಶಿಕಲಾ, ರಾಧಾ, ಎಂ.ಸುಂದರ್, ಬಾಬು, ಮಥಾಡಿ, ಶ್ಯಾಮ್ ಅವರನ್ನು ಆಯ್ಕೆ ಮಾಡಲಾಗಿದೆ.
ಈ ಸಂವಾದದಲ್ಲಿ ರಾಷ್ಟ್ರಪತಿಯವರೊಂದಿಗೆ ಪೌಷ್ಟಿಕತೆ, ಶಿಕ್ಷಣ, ಅನುವಂಶೀಯ ಕಾಯಿಲೆಗಳು, ಬುಡಟ್ಟು ಜನರ ಸಮಸ್ಯೆಗಳ ಕುರಿತು ಚರ್ಚೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನ ರಾಜಭವನದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಜುಲೈ 3ರಂದು ಸಂಜೆ 7ರಿಂದ 7:30ರವರೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರೊಂದಿಗೆ ಬುಡಕಟ್ಟು ಜನಾಂಗದವರ ಸಂವಾದ ನಡೆಯಲಿದೆ. ಇದರಲ್ಲಿ ಭಾಗವಹಿಸಲು ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯಿಂದ ಜೇನುಕುರುಬ, ಕೊರಗ ಸಮಾಜದವರನ್ನು ಆಯ್ಕೆ ಮಾಡಲಾಗಿದೆ. ಚಾಮರಾಜನಗರ ಜಿಲ್ಲೆಯಿಂದ ಗುಂಡ್ಲುಪೇಟೆಯ ಮೂವರು ಆಯ್ಕೆಯಾಗಿದ್ದಾರೆ ಎಂದು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ ತಿಳಿಸಿದ್ದಾರೆ.












Click it and Unblock the Notifications