ಎರಡು ಕ್ಷೇತ್ರದಲ್ಲಿ ಸೋತ ಸೋಮಣ್ಣ: ಲಿಂಗಾಯತ ನಾಯಕನಿಗೆ ಕೊನೆ ಮೊಳೆ ಹೊಡೆಯಿತಾ ಬಿಜೆಪಿ?

ಚಾಮರಾಜನಗರ, ಮೇ 13: ತೀವ್ರ ಕುತೂಹಲ ಮೂಡಿಸಿರುವ ಚಾಮರಾಜನಗರ ವಿಧಾನಸಭಾ ಚುನಾವಣೆ ಫಲಿತಾಂಶದ ಮತ ಎಣಿಕೆ ಮುಕ್ತಾಯಗೊಂಡಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸಿ.ಪುಟ್ಟರಂಗ ಶೆಟ್ಟಿ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣಗೆ ತೀವ್ರ ಮುಖಭಂಗವಾಗಿದ್ದು, ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸೋಲು ಕಂಡಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಸಿ.ಪುಟ್ಟರಂಗ ಶೆಟ್ಟಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ವಿ.ಸೋಮಣ್ಣ ಚಾಮರಾಜನಗರ ಹಾಗೂ ವರುಣಾ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದು, ಎರಡೂ ಕ್ಷೇತ್ರಗಳಲ್ಲಿ ಸೋಮಣ್ಣಗೆ ಮುಖಭಂಗವಾಗಿದೆ. ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿದ್ದರಾಮಯ್ಯ ಮುನ್ನಡೆ ಸಾಧಿಸಿದ್ದು, ವಿ.ಸೋಮಣ್ಣ ಹಿನ್ನಡೆಯಲ್ಲಿದ್ದಾರೆ.

ಚಾಮರಾಜನಗರದಲ್ಲಿ ನಿರಂತರ 4 ಬಾರಿ ಶಾಸಕನಾದ ಮೊದಲಿಗರಾದ ಸಿ.ಪುಟ್ಟರಂಗಶೆಟ್ಟಿ ತಾವು ಸೋಲಿಲ್ಲದ ಸರದಾರ ಎನ್ನುವುದನ್ನು ಸಾಬೀತು ಮಾಡಿದ್ದಾರೆ. ಸುಮಾರು ಹತ್ತೊಂಬತ್ತು ಹಂತದಲ್ಲಿ ನಡೆದ ಮತ ಎಣಿಕೆಯಲ್ಲಿ 7,383 ಮತ ಅಂತರದಲ್ಲಿ ಸಿ‌.ಪುಟ್ಟರಂಗಶೆಟ್ಟಿಗೆ ಜಯ ಸಾಧಿಸಿದ್ದು, ಸಿ.ಪುಟ್ಟರಂಗಶೆಟ್ಟಿ 83,136 ಮತಗಳನ್ನು ಪಡೆದಿದ್ದರೆ, ವಿ.ಸೋಮಣ್ಣ 75,753 ಮತಗಳನ್ನು ಪಡೆದಿದ್ದಾರೆ.

chamarajanagar elction results 2023

ಮೊದಲ ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಫಲಿತಾಂಶದ ವಿವರ

ಸಿ.ಪುಟ್ಟರಂಗ ಶೆಟ್ಟಿ -4,865

ವಿ. ಸೋಮಣ್ಣ- 4,663

ಮೊದಲ ಸುತ್ತಿನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸಿ. ಪುಟ್ಟರಂಗ ಶೆಟ್ಟಿ 202 ಮತಗಳ ಮುನ್ನಡೆ ಸಾಧಿಸಿದ್ದಾರೆ.

ಎರಡನೇ ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಫಲಿತಾಂಶದ ವಿವರ

ಸಿ.ಪುಟ್ಟರಂಗಶೆಟ್ಟಿ- 5684

ವಿ.ಸೋಮಣ್ಣ- 4643

ಮೂರು ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಫಲಿತಾಂಶದ ವಿವರ

ಸಿ.ಪುಟ್ಟರಂಗಶೆಟ್ಟಿ- 5684

ವಿ.ಸೋಮಣ್ಣ- 4643

ಮೂರು ಸುತ್ತಿನ ಮತ ಎಣಿಕೆ ಪೂರ್ಣಗೊಂಡ ಬಳಿಕ ಕಾಂಗ್ರೆಸ್‌ ಅಭ್ಯರ್ಥಿ ಸಿ. ಪುಟ್ಟರಂಗ ಶೆಟ್ಟಿ 21,237 ಮತಗಳನ್ನು ಪಡೆದಿದ್ದು, ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ 16,727 ಮತಗಳನ್ನು ಪಡೆದಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+