ದಿನೇದಿನೇ ಹೆಚ್ಚುತ್ತಿದೆ ಕಾವೇರಿ ಕಾವು: ತಮಿಳುನಾಡು-ಕರ್ನಾಟಕ ಗಡಿಯಲ್ಲಿ ರೈತರ ಪ್ರತಿಭಟನೆ
ಚಾಮರಾಜನಗರ, ಸೆಪ್ಟೆಂಬರ್ 13: ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬೇಕೆಂದು ಆದೇಶ ನೀಡಿರುವ ಕಾವೇರಿ ನಿರ್ವಹಣಾ ಮಂಡಳಿ ನಡೆ ಖಂಡಿಸಿ ಚಾಮರಾಜನಗರದಲ್ಲಿ ಕನ್ನಡ ಪರ ಹೋರಾಟಗಾರರು ಬಾಯಿ ಬಡಿದುಕೊಂಡು ಆಕ್ರೋಶ ಹೊರಹಾಕಿದ್ದಾರೆ.
ಚಾ.ರಂ.ಶ್ರೀನಿವಾಸಗೌಡ ನೇತೃತ್ವದಲ್ಲಿ ಚಾಮರಾಜೇಶ್ವರ ದೇಗುಲ ಬಳಿ ಜಮಾಯಿಸಿದ ಪ್ರತಿಭಟನಾಕಾರರು, ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಭುವನೇಶ್ವರಿ ವೃತ್ತದಲ್ಲಿ ರಸ್ತೆ ತಡೆದು ಆಕ್ರೋಶ ಹೊರಹಾಕಿದರು. ಕರ್ನಾಟಕದ ಪಾಲಿಗೆ ಕಾವೇರಿ ನಿರ್ವಹಣಾ ಪ್ರಾಧಿಕಾರದ ಸತ್ತು ಹೋಗಿದೆ ಎಂದು ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಕಾವೇರಿ ನಿರ್ವಹಣಾ ಪ್ರಾಧಿಕಾರದ ತಮ್ಮ ಪಾಲಿಗೆ ಸತ್ತು ಹೋಗಿದೆ ಎಂದು ಘೋಷಣೆ ಕೂಗೂತ್ತ ಕಡ್ಲೆಪುರಿ ಎರಚಿ, ಬಾಯಿ ಬಡಿದುಕೊಂಡು ಕಿಡಿಕಾರಿದರು. ಅರಶಿನ-ಕುಂಕುಮ ಪೂಜೆ ಮಾಡಿ ಕಿಡಿಕಾರಿದರು. ಯಾವುದೇ ಕಾರಣಕ್ಕೂ ಸರ್ಕಾರ ನೀರು ಬಿಡಕೂಡದು, ಮುಂದಿನ ದಿನಗಳಲ್ಲಿ ತಮಿಳುನಾಡು ವಾಹನಗಳು ರಾಜ್ಯದಲ್ಲಿ ಓಡಾಡದಂತೆ ಗಡಿ ಬಂದ್ ಮಾಡುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
ತಮಿಳುನಾಡು-ಕರ್ನಾಟಕ ಗಡಿಯಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ಕಾವೇರಿ ನೀರು ಬಿಡಬೇಕೆಂಬ ಪ್ರಾಧಿಕಾರ ಸೂಚನೆ ಹಿನ್ನೆಲೆಯಲ್ಲಿ ತಮಿಳುನಾಡು-ಕರ್ನಾಟಕ ಗಡಿ ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿದೆ. ಚಾಮರಾಜನಗರ ತಾಲೂಕಿನ ಪುಣಜನೂರು ಚೆಕ್ ಪೋಸ್ಟ್ ಬಂದ್ ಮಾಡಿ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ.

ರೈತರು ರಸ್ತೆಯಲ್ಲಿ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದು, ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ತಮಿಳುನಾಡು ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರತಿಭಟನೆ ಹಿನ್ನೆಲೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.












Click it and Unblock the Notifications