ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿಷ ಪ್ರಸಾದ ಸೇವಿಸಿ 11 ಸಾವು, 5 ಲಕ್ಷ ರೂ. ಪರಿಹಾರ ಘೋಷಣೆ

|
Google Oneindia Kannada News

ಚಾಮರಾಜನಗರ, ಡಿಸೆಂಬರ್ 14 : ಚಾಮರಾಜನಗರ ಜಿಲ್ಲೆಯ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಪ್ರಸಾದ ಸೇವಿಸಿ ಮೃತಪಟ್ಟವರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರವನ್ನು ಘೋಷಣೆ ಮಾಡಲಾಗಿದೆ. ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಭರಿಸಲಿದೆ.

ಶುಕ್ರವಾರ ಸಂಜೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಸುಳವಾಡಿ ಗ್ರಾಮದ ಕಿಚ್ಚುಗುತ್ತಿ ಮಾರಮ್ಮ ದೇವಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಪ್ರಸಾದ ಸೇವಿಸಿದ 11 ಭಕ್ತರು ಮೃತಪಟ್ಟ ಘಟನೆ ಅತ್ಯಂತ ಧಾರುಣವಾಗಿದ್ದು, ಇದು ಕರಾಳ ದಿನ' ಎಂದು ಹೇಳಿದರು.

ಚಾಮರಾಜನಗರ : ಪ್ರಸಾದದಲ್ಲಿ ವಿಷ 11 ಸಾವು, ಇಬ್ಬರ ಬಂಧನಚಾಮರಾಜನಗರ : ಪ್ರಸಾದದಲ್ಲಿ ವಿಷ 11 ಸಾವು, ಇಬ್ಬರ ಬಂಧನ

'ಘಟನೆಯಲ್ಲಿ ಮೃತಪಟ್ಟ ಕುಟುಂಬದವರಿಗೆ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಲಾಗಿದೆ. ಅಸ್ವಸ್ಥಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ' ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Chamarajanagar food poison case : CM announces Rs 5 lakh compensation

'ಜಿಲ್ಲಾ ಉಸ್ತುವಾರಿ ಸಚಿವರಿಗೆ ಸ್ಥಳಕ್ಕೆ ತೆರಳುವಂತೆ ಸೂಚಿಸಿದ್ದೇನೆ. ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು, ಅಸ್ವಸ್ಥಗೊಂಡವರ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ' ಎಂದು ತಿಳಿಸಿದ್ದಾರೆ.

ಹನೂರು ಶಾಸಕ ನಾಗೇಂದ್ರ ಅವರು ಈ ಕುರಿತು ಪ್ರತಿಕ್ರಿಯೆ ನೀಡಿದ್ದು, 'ಘಟನಾ ಸ್ಥಳಕ್ಕೆ ತೆರಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ರೈಸ್ ಬಾತ್‌ ಅನ್ನು ಪರೀಕ್ಷೆಗಾಗಿ ಕಳುಹಿಸುವಂತೆ ಸೂಚನೆ ನೀಡಲಾಗಿದೆ' ಎಂದರು.

ತೀವ್ರ ಸಂತಾಪ : ಚಾಮರಾಜನಗರ ಜಿಲ್ಲೆಯ ಸುಲ್ವಾಡಿ ಗ್ರಾಮದಲ್ಲಿ ಪ್ರಸಾದ ಸ್ವೀಕರಿಸಿ 11 ಜನರು ಮೃತಪಟ್ಟಿರುವುದಕ್ಕೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಸಿದ್ದಗಂಗಾ ಶ್ರೀಗಳ ಆರೋಗ್ಯ ವಿಚಾರಿಸಲು ಚೆನ್ನೈಗೆ ತೆರಳಿದ್ದ ಮುಖ್ಯಮಂತ್ರಿಗಳು ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ ಮಾಹಿತಿ ಕಡೆದುಕೊಂಡರು.

ಘಟನೆಯ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿ ವಿಚಾರಣೆ ನಡೆಸಿ ವಿವರವಾದ ವರದಿ ಸಲ್ಲಿಸುವಂತೆ ಸೂಚಿಸಿದರು. ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಈ ನೋವನ್ನು ಭರಿಸುವ ಶಕ್ತಿ ಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

English summary
Karnataka Chief Minister H.D.Kumarasa announced a compensation of Rs five lakh for the family members of the food poison case in Hanur taluk of Chamarajanagar. 11 dead after consuming prasads at Kichuu Gutti Maranam temple.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X