ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದೇಗುಲದ ಪ್ರಸಾದವೇ ವಿಷವಾಗಿ... ಇತಿಹಾಸದಲ್ಲೇ ಮೊದಲ ಬಾರಿಗೆ ದೇವಾಲಯ ಬಂದ್

|
Google Oneindia Kannada News

ಚಾಮರಾಜನಗರ, ಡಿಸೆಂಬರ್ 15: ಚಾಮರಾಜನಗರ ಜಿಲ್ಲೆಯ ಕಿಚ್ಚುಗತ್ತಿ ಮಾರಮ್ಮನ ದೇವಾಲಯದಲ್ಲಿ ಯಾರದೋ ದ್ವೇಷದ ಕಿಚ್ಚಿಗೆ ಹನ್ನೊಂದು ಜೀವಗಳು ಬಲಿಯಾಗಿದೆ.

'ಇಷ್ಟಾರ್ಥ ಈಡೇರಲಿ' ಎಂದು ಕಣ್ಣಿಗೊತ್ತಿಕೊಂಡು ಸೇವಿಸಿದ ಪ್ರಸಾದವೇ ವಿಷವಾಗಿ ನೂರಾರು ಜನರನ್ನು ಸಾವಿನಂಚಿಗೆ ತಂದು ನಿಲ್ಲಿಸಿದೆ.

ಚಾಮರಾಜನಗರ : ಶುಕ್ರವಾರದ ದುರಂತ, ಪ್ರಸಾದ ಸೇವಿಸಿ 11 ಸಾವುಚಾಮರಾಜನಗರ : ಶುಕ್ರವಾರದ ದುರಂತ, ಪ್ರಸಾದ ಸೇವಿಸಿ 11 ಸಾವು

ಚಾಮರಾಜ ಜಿಲ್ಲೆಯ ಹನೂರು ತಾಲೂಕಿನ ಸುಳವಾಡಿಯಲ್ಲಿ ನಡೆದ ಈ ದುರಂತದಿಂದಾಗಿ ಇಂದು ದೇವಾಲಯದ ಬಾಗಿಲು ಬಂದ್ ಮಾಡಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಬಾರಿಗೆ ಈ ರೀತಿ ದೇವಾಲಯದ ಬಾಗಿಲು ಮುಚ್ಚಲಾಗುತ್ತಿದ್ದು, ಸದಾ ಜನರಿಂದ ತುಂಬಿರುತ್ತಿದ್ದ ದೇವಾಲಯದಲ್ಲಿ ಇಂದು ನೀರವ ಮೌನ ಆವರಿಸಿದೆ.

ಚಾಮರಾಜನಗರದಲ್ಲಿ ಆಡಳಿತ ಮಂಡಳಿ ಕಿತ್ತಾಟಕ್ಕೆ ಬಲಿಯಾಯಿತಾ 7 ಜೀವ?ಚಾಮರಾಜನಗರದಲ್ಲಿ ಆಡಳಿತ ಮಂಡಳಿ ಕಿತ್ತಾಟಕ್ಕೆ ಬಲಿಯಾಯಿತಾ 7 ಜೀವ?

Chamarajanagar food poison incident: Temple closed

ದೇವಾಲಯಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳ ನಡುವಿನ ದ್ವೇಷದ ಕಾರಣಕ್ಕೆ ಬೇಕೆಂದೇ ಪ್ರಸಾದಕ್ಕೆ ಕೀಟನಾಶಕ ಬೆರೆಸಲಾಗಿದೆ ಎಂಬ ಮಾತು ಕೇಳಿಬರುತ್ತಿದ್ದು, ಸೂಕ್ತ ತನಿಖೆ ನಡೆಯಬೇಕೆಂದು ಆಗ್ರಹಿಸಲಾಗಿದೆ.

ಪ್ರಕರಣದಲ್ಲಿ ಬಿದರಹಳ್ಳಿ ಎಂಬ ಒಂದೇ ಗ್ರಾಮದ ಏಳು ಜನ ಸಾವನ್ನಪ್ಪಿದ್ದು, ಇಡೀ ಗ್ರಾಮದಲ್ಲಿ ಸ್ಮಶಾನ ಮೌನ ಆವರಿಸಿದೆ.

English summary
bout 11 people died after consuming 'Prasadam' in Kichchugatti Maramma temple in Sulavadi village in Hanur taluk, Chamarajanagar district. For the first time in temple history, the door are closed after the incident.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X