Chamarajanagar Lok Sabh Constituency: ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಿನ್ನೆಲೆ ತಿಳಿಯಿರಿ
ಚಾಮರಾಜನಗರ, ಮಾರ್ಚ್, 31: ರಾಜ್ಯದಲ್ಲಿ ಈಗಾಗಲೇ ಲೋಕಸಭೆ ಅಖಾಡ ರಂಗೇರಿದ್ದು, ಈಗಾಗಲೇ ಎಲ್ಲಾ ಪಕ್ಷಗಳಿಂದಲೂ ಬಹುತೇಕ ಕ್ಷೇತ್ರಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಹಾಗೇಯೆ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸುನಿಲ್ ಬೋಸ್ ಅವರ ಹೆಸರನ್ನು ಕಾಂಗ್ರೆಸ್ ಘೋಷಣೆ ಮಾಡಿದ್ದು, ಸಿಎಂ ಕ್ಷೇತ್ರದಲ್ಲಿ ಸಚಿವ ಎಚ್.ಚಿ.ಮಹದೇವಪ್ಪ ಪುತ್ರ ಕಣಕ್ಕಿಳಿಯಲಿದ್ದಾರೆ.
ಸುನೀಲ್ ಬೋಸ್ ವಿವರ ಹೀಗಿದೆ
* ತಂದೆಯ ಹೆಸರು - ಡಾ ಹೆಚ್ ಸಿ ಮಹದೇವಪ್ಪ
* ತಾಯಿಯ ಹೆಸರು : ಶ್ರೀಮತಿ ವಿನೋದ
* ಜನ್ಮ ದಿನಾಂಕ : 31-08-1981

ಖಾಯಂ ವಿಳಾಸ : ನಂಬರ್ 33, ಹದಿನಾರು ಗ್ರಾಮ, ಚಿಕ್ಕಯ್ಯನಛತ್ರ ಹೋಬಳಿ, ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆಯಾಗಿದ್ದು, ಇವರು ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಹೊಂದಿದ್ದಾರೆ. ವೃತ್ತಿ ಕೃಷಿ.
ಕಾಂಗ್ರೆಸ್ ಪಕ್ಷದಲ್ಲಿ ಸುನೀಲ್ ಬೋಸ್ ಸಾಧನೆ: 2008ರಿಂದ ಕಾಂಗ್ರೆಸ್ ಪಕ್ಷದ ಸದಸ್ಯರಾಗಿ ಸೇವೆ, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಟಿ.ನರಸೀಪುರ ತಾಲ್ಲೂಕಿನ ವಸತಿ ಜಾಗೃತಿ ಸಮಿತಿಯ ಅಧ್ಯಕ್ಷರಾಗಿ ಸೇವೆ, ಕಾಂಗ್ರೆಸ್ ಪಕ್ಷವು ಸೂಚಿಸಿದ ಎಲ್ಲಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗಿ, ನಂಜನಗೂಡು, ಹುಣಸೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಗೆಲುವಿಗಾಗಿ ಶ್ರಮವಹಿಸಿದ್ದರು. ಇದೀಗ ಚಾಮರಾಜನಗರ ಲೋಕಸಭೆ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.
ಏ.4ರಂದು ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಕೆ.?: ಇದೀಗ ರಾಜ್ಯದೆಲ್ಲೆಡೆ ಲೋಕಸಭಾ ಚುನಾವಣೆಯ ಕಾವು ರಂಗೇರುತ್ತಿದೆ. ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದು, ಇತ್ತ ಜಿದ್ದಾಜಿದ್ದಿಯಿಂದ ಕೂಡಿರುವ ಚಿತ್ರದುರ್ಗ ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿ ನಡುವೆ ನೇರ ಪೈಪೋಟಿ ಶುರುವಾಗಿದೆ.
ಏಪ್ರಿಲ್ 4ರಂದು ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ಅವರು ನಾಮಪತ್ರ ಸಲ್ಲಿಸಲಿದ್ದಾರೆ. ಈಗಾಗಲೇ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಆಶಿರ್ವಾದ ಪಡೆದು ಬಿ.ಫಾರಂ ಪಡೆದುಕೊಂಡಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ನಾಮಪತ್ರ ಸಲ್ಲಿಸಲು ಈಗಾಗಲೇ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, ಲಕ್ಷಾಂತರ ಕಾರ್ಯಕರ್ತರ ಜೊತೆ ಚಿತ್ರದುರ್ಗ ನಗರದ ಕನಕ ಸರ್ಕಲ್‌ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರೋಡ್ ಶೋ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸುವ ಮೂಲಕ ಬಿಜೆಪಿ ವಿರುದ್ಧ ರಣಕಹಳೆ ಮೊಳಗಿಸಲಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್.ಚಂದ್ರಪ್ಪ ನಾಮಪತ್ರ ಸಲ್ಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಸಚಿವ ಕೆ.ಹೆಚ್.ಮುನಿಯಪ್ಪ, ಶಾಸಕರಾದ ಕೆ.ಸಿ.ವೀರೇಂದ್ರ ಪಪ್ಪಿ, ಟಿ.ರಘುಮೂರ್ತಿ, ಬಿ.ಜಿ.ಗೋವಿಂದಪ್ಪ, ಎನ್.ವೈ.ಗೋಪಾಲಕೃಷ್ಣ, ಟಿ.ಬಿ.ಜಯಚಂದ್ರ, ಪಾವಗಡ ಶಾಸಕ ವಿ.ವೆಂಕಟೇಶ್, ಮಾಜಿ ಸಚಿವ ಹೆಚ್.ಆಂಜನೇಯ ಸೇರಿದಂತೆ ಮತ್ತಿತರರು ಸಾಥ್ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಅಭ್ಯರ್ಥಿ ಪರ ಮತಪ್ರಚಾರ ಮಾಡಿ, ಅಭ್ಯರ್ಥಿ ಕುರಿತು ಭಾಷಣ ಮಾಡಲಿದ್ದಾರೆ.
ಅಭ್ಯರ್ಥಿ ಮೊದಲ ಬಾರಿಗೆ 2014ರಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದ ಬಿ.ಎಂ.ಚಂದ್ರಪ್ಪ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಜನಾರ್ಧನಸ್ವಾಮಿ ಅವರನ್ನು 1,01,291 ಮತಗಳ ಅಂತರದಿಂದ ಪರಾಭವಗೊಳಿಸಿ ಆಯ್ಕೆಯಾದರು. ಈ ಚುನಾವಣೆಯಲ್ಲಿ 14 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಈ ಚುನಾವಣೆಯಲ್ಲಿ ನೋಟಾಗೆ ಒಟ್ಟು 8,895 ಮತಗಳು ಚಲಾವಣೆಯಾಗಿದ್ದವು.
ನಂತರ 2019ರಲ್ಲಿ ಜರುಗಿದ ಚುನಾವಣೆಯಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿದ್ದ ಎ.ನಾರಾಯಣಸ್ವಾಮಿ ಅವರು, ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಬಿ.ಎನ್.ಚಂದ್ರಪ್ಪ ಅವರಿಗಿಂತ 80,178 ಹೆಚ್ಚು ಮತಗಳನ್ನು ಪಡೆದು ಆಯ್ಕೆಯಾಗಿದ್ದರು. ಈ ಚುನಾವಣೆಯಲ್ಲಿ ಒಟ್ಟು 19 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ನೋಟಾಗೆ ಒಟ್ಟು 4,368 ಮತಗಳು ಚಲಾವಣೆಯಾಗಿದ್ದವು. ಚುನಾವಣೆಯಲ್ಲಿ ಶೇಕಡಾ 70.64ರಷ್ಟು ಮತದಾನವಾಗಿತ್ತು.
ಇದೀಗ 2024ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಅಭ್ಯರ್ಥಿಯಾಗಿದ್ದಾರೆ. ಮೂರು ಬಾರಿ ಚಂದ್ರಪ್ಪ ಅವರೇ ಸ್ವರ್ಧಿಸಿದ. ಎದುರಾಳಿಗಳು ಮಾತ್ರ ಹೊಸಬರು. 2014ರಲ್ಲಿ ಎದುರಾಳಿಯಾಗಿ ಜನಾರ್ಧನ ಸ್ವಾಮಿ, 2019ರಲ್ಲಿ ಎದುರಾಳಿಯಾಗಿ ಎ.ನಾರಾಯಣಸ್ವಾಮಿ ಇದೀಗ 2024ರ ಲೋಕಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿ ಎದುರಾಳಿಯಾಗಿ ಗೋವಿಂದ ಕಾರಜೋಳ ಅವರು ಕಣದಲ್ಲಿದ್ದಾರೆ.
ಒಂದು ಕಾಲದಲ್ಲಿ ಕೋಟೆನಾಡು ಕಾಂಗ್ರೆಸ್‌ನ ಭದ್ರ ಕೋಟೆಯಾಗಿದ್ದ ಜಿಲ್ಲೆ. ಮೂರು ಬಾರಿ ಕ್ಷೇತ್ರವನ್ನು ಕಳೆದುಕೊಂಡರೂ, ಈಗ ಕೈ ಬಿಗಿ ಹಿಡಿತದಿಂದ ತಪ್ಪಿದೆ. ಆದರೆ, ಅಲ್ಲಿ ಪೈಪೋಟಿ ತೀವ್ರವಾಗಿದೆ. 11 ಚುನಾವಣೆಗಳಲ್ಲಿ ಎಂಟು ಬಾರಿ ಕಾಂಗ್ರೆಸ್ ಅಭ್ಯರ್ಥಿಗಳೇ ಇಲ್ಲಿಂದ ಸಂಸತ್‌ಗೆ ಆಯ್ಕೆಯಾಗಿದ್ದಾರೆ.
ಜನತಾದಳದ ಅಭ್ಯರ್ಥಿಗಳು ಎರಡು ಬಾರಿ ಜಯಗಳಿಸಿದ್ದರೆ, 2009ರಲ್ಲಿ ಮೊದಲ ಬಾರಿಗೆ ಬಿಜೆಪಿ ಕೂಡ ಇಲ್ಲಿ ಗೆಲುವಿನ ನಗೆ ಬೀರಿತ್ತು. ಜನಾರ್ದನ ಸ್ವಾಮಿ ಕಾಂಗ್ರೆಸ್ ಪಾರುಪತ್ಯಕ್ಕೆ ಅಂಕುಶ ಹಾಕಿದ್ದರು. ಆದರೆ, ಕಾಂಗ್ರೆಸ್‌ನ ಎನ್.ಚಂದ್ರಪ್ಪ 2014ರ ಚುನಾವಣೆಯಲ್ಲಿ ಮತ್ತೆ ಅದನ್ನು 'ಕೈ' ತೆಕ್ಕೆಗೆ ಕ್ಷೇತ್ರವನ್ನು ಮರಳಿ ತೆಗೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ನಂತರ 2019ರಲ್ಲಿ ಬಿಜೆಪಿ ಅಭ್ಯರ್ಥಿ ಎ.ನಾರಾಯಣಸ್ವಾಮಿ ವಿರುದ್ಧ ಚಂದ್ರಪ್ಪ ಸೋಲು ಕಂಡು, ಕ್ಷೇತ್ರವನ್ನು ಬಿಜೆಪಿ ತೆಕ್ಕೆಗೆ ಬಿಟ್ಟು ಕೊಟ್ಟರು. ಇದೀಗ ಕ್ಷೇತ್ರವನ್ನು ಮರಳಿ ಕೈ ತೆಕ್ಕೆಗೆ ಪಡೆಯಲು ಕಾಂಗ್ರೆಸ್ ಸಿದ್ಧವಾಗಿದೆ.
ವಿಧಾನಸಭಾ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಘೋಷಿಸಿದ್ದ ಐದು ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲು ಕಾರಣವಾಯಿತು. ಈ ನಿಟ್ಟಿನಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರಗಳಲ್ಲಿ 7 ಜನ ಕಾಂಗ್ರೆಸ್ ಶಾಸಕರಾಗಿದ್ದಾರೆ.
ಒಂದರಲ್ಲಿ (ಹೊಳಲ್ಕೆರೆ) ಬಿಜೆಪಿ ಆಡಳಿತದಲ್ಲಿದೆ. ಏಳು ಜನ ಶಾಸಕರಿರುವ ಕ್ಷೇತ್ರಗಳಲ್ಲಿ ಅಭ್ಯರ್ಥಿ ಪರ ಟೊಂಕ ಕಟ್ಟಿ ನಿಂತು ಶಾಸಕರು ಕೆಲಸ ಮಾಡಿದರೇ ಚಂದ್ರಪ್ಪ ಅವರ ಗೆಲುವಿಗೆ ಸಹಕಾರಿಯಾಗಲಿದೆ. ಬಂಡಾಯ ಎದ್ದಿರುವ ಡಾ.ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಹಾಗೂ ಪಾವಗಡ ವೆಂಕಟರಮಣಪ್ಪ ಅವರನ್ನು ಸಂಧಾನ ಮಾಡಿ ಯಶಸ್ವಿಯಾಗುವ ಸಾಧ್ಯತೆಯಿದೆ.
ಈ ಎಲ್ಲಾ ಬೆಳವಣಿಗೆಗಳು ಒಂದಾದರೆ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಚಂದ್ರಪ್ಪ ಅವರನ್ನು ಕೈ ಹಿಡಿಯುವ ಸಾಧ್ಯತೆ ಹೆಚ್ಚು ಇದೆ. ಮತ್ತೊಂದೆಡೆ ಕ್ಷೇತ್ರದಲ್ಲಿ ಒಮ್ಮೆ ಗೆಲುವು ಸಾಧಿಸಿ, ಎರಡನೇ ಬಾರಿಗೆ ಸೋತರೂ ಕ್ಷೇತ್ರ ಬಿಡದೇ ಮತದಾರನ ಜೊತೆ ನಿರಂತರ ಸಂಪರ್ಕದಲ್ಲಿದ್ದಾರೆ. ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಾ, ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಲ್ಲಿ ಉತ್ತಮ ಒಡನಾಟ ಇಟ್ಟುಕೊಂಡಿರುವ ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿರುವ ಬಿ.ಎನ್.ಚಂದ್ರಪ್ಪ ಗೆಲುವಿಗೆ ಯಾವ ರೀತಿ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications