Get Updates
Get notified of breaking news, exclusive insights, and must-see stories!

Chamarajanagar Lok Sabha Election 2024 Results LIVE: ಚಾಮರಾಜನಗರ ಲೋಕಸಭಾ ಕ್ಷೇತ್ರ ಉಳಿಸಿಕೊಂಡ ಕಾಂಗ್ರೆಸ್

ಚಾಮರಾಜನಗರ, ಜೂನ್. 04: ಲೋಕಸಭಾ ಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಇಂದು ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫಲಿತಾಂಶ ಕೂಡ ಇಂದು ಪ್ರಕಟವಾಗಲಿದೆ. ಚಾಮರಾಜನಗರ ಕ್ಷೇತ್ರದಲ್ಲಿಯೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ದೊಡ್ಡ ಪೈಪೋಟಿಯಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ 2024ರ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಏಪ್ರಿಲ್ 26ರಂದು ಮೊದಲ ಹಂತದಲ್ಲಿ ಮತದಾನ ನಡೆದಿದ್ದು, 76.82% ಮತದಾನವಾಗಿದೆ. ಬರೋಬ್ಬರಿ 14 ಅಭ್ಯರ್ಥಿಗಳು ಕಣದಲ್ಲಿದ್ದರು. ಇದರಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರಾ ನೇರಾ ಪೈಪೋಟಿಯಿದೆ. ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಸ್. ಬಾಲರಾಜು, ಕಾಂಗ್ರೆಸ್‌ನಿಂದ ಸುನೀಲ್ ಬೋಸ್ ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಬಿಎಸ್‌ಪಿ ಪ್ರಭಾವ ಹೊಂದಿದ್ದು, ಪಕ್ಷದಿಂದ ಎಂ. ಕೃಷ್ಣಮೂರ್ತಿ ಅವರನ್ನು ಕಣಕ್ಕಿಳಿಸಿದೆ.

Chamarajanagar Lok Sabha Election 2024 Results LIVE Who will Win Sunil Bose Vs S Balaraj

ಸುನಿಲ್ ಬೋಸ್‌ಗೆ ಭರ್ಜರಿ ಜಯ

ತೀವ್ರ ಜಿದ್ದಾಜಿದ್ದಿ, ಕುತೂಹಲ ಕೆರಳಿಸಿದ್ದ ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ವಿಜಯ ಪತಾಕೆ ಹಾರಿಸಿದ್ದಾರೆ. ಚಾಮರಾಜನಗರದ ಬೇಡರಪುರ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ಮತ ಎಣಿಕೆಯಲ್ಲಿ ಎದುರಾಳಿ ಬಿಜೆಪಿ ಅಭ್ಯರ್ಥಿ ವಿರುದ್ಧ ಸುನೀಲ್ ಬೋಸ್ ಗೆಲುವಿನ ನಗೆ ಬೀರಿ ಸಂಸತ್ ಪ್ರವೇಶ ಮಾಡಿದ್ದಾರೆ.

ಚಾಮರಾಜನಗರ 2 ಲಕ್ಷ ಮತ ಎಣಿಕೆ ಬಾಕಿ

ಕಾಂಗ್ರೆಸ್ ಅಭ್ಯರ್ಥಿ ಸುನೀಲ್‌ಬೋಸ್ ಗೆ ಒಂದುವರೆ ಲಕ್ಷಕ್ಕು ಹೆಚ್ಚು ಮತಗಳ ಮುನ್ನಡೆ, ಗೆಲುವಿನ ಸನಿಹದಲ್ಲಿ ಸುನೀಲ್ ಬೋಸ್, ಕಾಂಗ್ರೆಸ್ ‌ಅಭ್ಯರ್ಥಿ ಸುನೀಲ್ ಬೋಸ್ ಗೆ 5,87,306 ಮತಗಳು, ಬಿಜೆಪಿ ಅಭ್ಯರ್ಥಿ ಬಾಲರಾಜುಗೆ 4,36,559 ಮತಗಳು ಬಂದಿವೆ. ಇನ್ನು,2 ಲಕ್ಷ ಮತ ಎಣಿಕೆ ಬಾಕಿಯಿದೆ.

ಆರನೇ ಸುತ್ತಿನ ಮತ ಏಣಿಕೆ ಮುಕ್ತಾಯ

ಆರನೇ ಸುತ್ತಿನಲ್ಲೂ ಮುನ್ನಡೆ ಕಾಯ್ದುಕೊಂಡ ಕಾಂಗ್ರೆಸ್, ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ - 38,734, ಬಿಜೆಪಿ ಅಭ್ಯರ್ಥಿ ಬಾಲರಾಜ್ - 34,633,ಆರನೇ ಸುತ್ತಿನ ನಂತರ 4,101 ಮತಗಳ ಅಂತರವಿದೆ. ಸುನೀಲ್‌ಬೋಸ್ ಗೆ 72 ಸಾವಿರಕ್ಕೂ ಹೆಚ್ಚು ಮತಗಳಿಂದ ಮುನ್ನಡೆ. ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್‌ಗೆ 3,46,738, ಬಿಜೆಪಿ ಅಭ್ಯರ್ಥಿ ಎಸ್ ಬಾಲರಾಜುಗೆ 2,73,747 ಮತಗಳು.

3 ಸಾವಿರ ಮುನ್ನಡೆ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ

ಮುನ್ನಡೆ ಸಾಧಿಸುತ್ತಿದ್ದ ಬಾಲರಾಜುವನ್ನು ಹಿಂದಿಕ್ಕಿದ ಸುನಿಲ್ ಬೋಸ್ , ದಿಢೀರನೇ ಮುನ್ನಡೆ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್, ಬಾಲರಾಜುವಿಗೆ-5064 ಮತಗಳು, ಕಾಂಗ್ರೆಸ್ ಸುನಿಲ್ ಬೋಸ್ ಗೆ - 8251 ಮತ, 3 ಸಾವಿರ ಮುನ್ನಡೆ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ.

ಚಾಮರಾಜನಗರ ಅಂಚೆ ಮತದಾನ ಎಣಿಕೆ ಆರಂಭ

ಬೇಡರಪುರ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯುತ್ತಿರುವ ಮತ ಎಣಿಕೆ. ಅಂಚೆ ಮತಪತ್ರಗಳ ಮೂಲಕ ಒಟ್ಟು 4405 ಮತ ಚಲಾವಣೆ. ಪ್ರತಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆಯು ತಲಾ 14 ಟೇಬಲ್ ಗಳಲ್ಲಿ ನಡೆಯುತ್ತಿದೆ. ಪ್ರತಿ ಟೇಬಲ್‌ಗೆ ತಲಾ 14 ಮಂದಿ ಮತ ಎಣಿಕೆ ಮೇಲ್ವಿಚಾರಕರು, 14 ಮಂದಿ ಎಣಿಕೆ ಸಹಾಯಕರು, 14 ಮಂದಿ ಮೈಕ್ರೋ ಅಬ್ಸರ್‍ವರ್ ಹಾಗೂ ಅಂಚೆ ಮತ ಪತ್ರ ಎಣಿಕೆಗೆ 5 ಮಂದಿ ಸೇರಿ ಒಟ್ಟು 45 ಸಿಬ್ಬಂದಿ. ಅಂಚೆ ಮತ ಪತ್ರ ಎಣಿಕೆಗೆ 8 ಟೇಬಲ್‌ಗಳ ವ್ಯವಸ್ಥೆ.

ಕೆಲವೇ ಗಂಟೆಗಳಲ್ಲಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಚಾಮರಾಜನಗರ ಲೋಕಸಭಾ ಕ್ಷೇತ್ರದ ಸ್ಟ್ರಾಂಗ್ ರೂಂ ಓಪನ್ ಮಾಡಲಾಗಿದ್ದು ಬೆಳಗ್ಗೆ 8 ಕ್ಕೆ ಮತ ಎಣಿಕೆ ಆರಂಭಗೊಳ್ಳಲಿದೆ. ಚಾಮರಾಜನಗರ ಬೇಡರಪುರ ಎಂಜಿನಿಯರಿಂಗ್ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದ್ದು ಜಿಲ್ಲಾಧಿಕಾರಿ ಶಿಲ್ಪಾನಾಗ್, ಎಸ್ಪಿ ಪದ್ಮಿನಿ ಸಾಹು ಸಮ್ಮುಖದಲ್ಲಿ ಸ್ಟ್ರಾಂಗ್ ರೂಂ ತೆರೆಯಲಾಗಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕೆಲವೇ ಕ್ಷಣಗಳಲ್ಲಿ ಆರಂಭಗೊಳ್ಳಲಿದ್ದು ಮೊದಲಿಗೆ ಎಚ್.ಡಿ.ಕೋಟೆ ಸ್ಟ್ರಾಂಗ್ ರೂಂನ್ನು ಚುನಾವಣಾ ಅಧಿಕಾರಿಗಳು ತೆರೆದಿದ್ದಾರೆ.

ಮೊದಲಿಗೆ ಅಂಚೆ ಮತ ಎಣಿಕೆ ನಡೆಯಲಿದ್ದಎರಡನೇ ಅರ್ದ ಗಂಟೆ ಬಳಿಕ ವಿದ್ಯುನ್ಮಾನ ಮತ ಕೌಂಟಿಂಗ್ ಆರಂಭಗೊಳ್ಳಲಿದೆ, ಮತ ಎಣಿಕೆ ಕೇಂದ್ರದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದ್ದು ಮೂರು ಹಂತದಲ್ಲಿ ತಪಾಸಣೆ ನಡೆಸಿ ಎಣಿಕೆ ಸಿಬ್ಬಂದಿಯನ್ನು ಒಳಕ್ಕೆ ಬಿಡಲಾಗುತ್ತಿದೆ.

ಸದ್ಯ ಬಿಜೆಪಿ ಕೈಯಲ್ಲಿರುವ ಕ್ಷೇತ್ರದಲ್ಲಿ 2019ರಲ್ಲಿ ಬಿಜೆಪಿಯ ವಿ. ಶ್ರೀನಿವಾಸ್ ಪ್ರಸಾದ್ ಗೆಲುವು ಕಂಡಿದ್ದರು. ಆದರೆ 2024ರ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಏಪ್ರಿಲ್ 29ರಂದು ವಿ. ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದು, ಹಾಲಿ ಕ್ಷೇತ್ರಕ್ಕೆ ಸಂಸದರು ಇಲ್ಲ. ಕಾಂಗ್ರೆಸ್‌ನಿಂದ ಬಿಜೆಪಿಗೆ ಬಂದಿರುವ ಮಾಜಿ ಶಾಸಕ ಎಸ್. ಬಾಲರಾಜು ಕಣಕ್ಕಿಳಿ ಕ್ಷೇತ್ರ ಉಳಿಸಿಕೊಳ್ಳುವುದರತ್ತ ಗಮನ ಹರಿಸಿದೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರವೂ ಸೇರುತ್ತದೆ. ಆದ್ದರಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವುದು ಮುಖ್ಯಮಂತ್ರಿಗಳಿಗೆ ಪ್ರತಿಷ್ಠೆಯ ವಿಷಯ. ಈ ಬಾರಿ ಕಾಂಗ್ರೆಸ್ ಬಹಳ ಲೆಕ್ಕಾಚಾರದ ಬಳಿಕ ಸಿದ್ದರಾಮಯ್ಯ ಆಪ್ತ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್. ಸಿ. ಮಹದೇವಪ್ಪ ಪುತ್ರ ಸುನೀಲ್ ಬೋಸ್ ಅವರನ್ನು ಕಣಕ್ಕಿಳಿಸಿದೆ.

Chamarajanagar Lok Sabha Election 2024 Results LIVE Who will Win Sunil Bose Vs S Balaraj

ಮೀಸಲು ಕ್ಷೇತ್ರವಾಗಿರುವ ಚಾಮರಾಜನಗರ ಬಿಜೆಪಿ-ಕಾಂಗ್ರೆಸ್ ನಡುವಿನ ನೇರ ಹಣಾಹಣಿಗೆ ಕಾರಣವಾಗಿದೆ. ಹೆಚ್. ಸಿ. ಮಹದೇವಪ್ಪ ಪುತ್ರ ಸುನೀಲ್ ಬೋಸ್ ಮತ್ತು ಮಾಜಿ ಶಾಸಕ ಎಸ್. ಬಾಲರಾಜು ಇಬ್ಬರಿಗೂ ಮೊದಲ ಲೋಕಸಭಾ ಚುನಾವಣೆ ಇದಾಗಿದೆ. 2019ರ ಚುನಾವಣೆಯಲ್ಲಿ ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್ 5,68,537 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಕಾಂಗ್ರೆಸ್‌ನ ಆರ್. ಧ್ರುವನಾರಾಯಣ 5,66,720 ಮತಗಳನ್ನು ಪಡೆದು ಸೋತರು. ಬಿಎಸ್‌ಪಿಯ ಡಾ. ಶಿವಕುಮಾರ 87,631 ಮತಗಳನ್ನು ಪಡೆದಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+