Chamarajanagar Lok Sabha Election 2024 Results: ಚಾಮರಾಜನಗರ ಲೋಕಸಭೆ ಚುನಾವಣೆ ಫಲಿತಾಂಶ, ಸಿದ್ದರಾಮಯ್ಯ ಪ್ರತಿಷ್ಠೆ!
ಬೆಂಗಳೂರು, ಮೇ. 31: ಚಾಮರಾಜನಗರ ಲೋಕಸಭಾ ಕ್ಷೇತ್ರದ 2024ರ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಏಪ್ರಿಲ್ 26ರಂದು ಶೇ 76.82 ಮತದಾನವಾಗಿದ್ದು, 14 ಅಭ್ಯರ್ಥಿಗಳಲ್ಲಿ ಗೆಲುವು ಯಾರಿಗೆ? ಎಂಬುದು ಜೂನ್ 4ರಂದು ತಿಳಿಯಲಿದೆ. ಈ ಕ್ಷೇತ್ರದ ಚುನಾವಣಾ ಫಲಿತಾಂಶದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಷ್ಠೆಯೂ ಅಡಗಿದೆ.
ಚಾಮರಾಜನಗರ ಕ್ಷೇತ್ರದಲ್ಲಿ 2019ರಲ್ಲಿ ಬಿಜೆಪಿಯ ವಿ. ಶ್ರೀನಿವಾಸ್ ಪ್ರಸಾದ್ ಗೆಲುವು ಕಂಡಿದ್ದರು. ಆದರೆ 2024ರ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಏಪ್ರಿಲ್ 29ರಂದು ವಿ. ಶ್ರೀನಿವಾಸ ಪ್ರಸಾದ್ ನಿಧನರಾಗಿದ್ದು, ಹಾಲಿ ಕ್ಷೇತ್ರಕ್ಕೆ ಸಂಸದರು ಇಲ್ಲ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎರಡೂ ರಾಷ್ಟ್ರೀಯ ಪಕ್ಷಗಳು ಹೊಸ ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ಅದೃಷ್ಟ ಪರೀಕ್ಷೆಗೆ ಮುಂದಾಗಿವೆ. ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಎಸ್. ಬಾಲರಾಜು, ಕಾಂಗ್ರೆಸ್‌ನಿಂದ ಸುನೀಲ್ ಬೋಸ್ ಕಣದಲ್ಲಿದ್ದಾರೆ. ಕ್ಷೇತ್ರದಲ್ಲಿ ಬಿಎಸ್‌ಪಿ ಪ್ರಭಾವ ಹೊಂದಿದೆ. ಪಕ್ಷದಿಂದ ಎಂ. ಕೃಷ್ಣಮೂರ್ತಿ ಅಭ್ಯರ್ಥಿ.
ಮುಖ್ಯಮಂತ್ರಿಗಳಿಗೆ ಪ್ರತಿಷ್ಠೆ: ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರವೂ ಸೇರುತ್ತದೆ. ಆದ್ದರಿಂದ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವುದು ಮುಖ್ಯಮಂತ್ರಿಗಳಿಗೆ ಪ್ರತಿಷ್ಠೆಯ ವಿಷಯವಾಗಿದೆ.
ಹಿಂದೆ ಚಾಮರಾಜನಗರ ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ನಾಯಕ ಆರ್. ಧ್ರುವನಾರಾಯಣ 2023ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಿಧನ ಹೊಂದಿದರು. ಈ ಬಾರಿ ಕಾಂಗ್ರೆಸ್ ಬಹಳ ಲೆಕ್ಕಾಚಾರದ ಬಳಿಕ ಸಿದ್ದರಾಮಯ್ಯ ಆಪ್ತ, ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್. ಸಿ. ಮಹದೇವಪ್ಪ ಪುತ್ರ ಸುನೀಲ್ ಬೋಸ್ ಕಣಕ್ಕಿಳಿಸಿದೆ. ಇದು ಅವರಿಗೆ ಚೊಚ್ಚಲ ಲೋಕಸಭಾ ಚುನಾವಣೆಯಾಗಿದೆ.

2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದ, ಮಾಜಿ ಶಾಸಕ ಎಸ್. ಬಾಲರಾಜು ಬಿಜೆಪಿ ಸೇರಿದ್ದರು. ವಿ. ಶ್ರೀನಿವಾಸ್ ಪ್ರಸಾದ್ ಅಳಿಯಂದಿರು ಟಿಕೆಟ್ ಆಕಾಂಕ್ಷಿಯಾಗಿದ್ದರೂ ಸಹ ಬಿಜೆಪಿ ಎಸ್. ಬಾಲರಾಜುಗೆ ಲೋಕಸಭೆ ಚುನಾವಣೆ ಟಿಕೆಟ್ ನೀಡುವ ಮೂಲಕ ಹೊಸ ದಾಳ ಉರುಳಿಸಿದೆ. ಪ್ರಥಮ ಬಾರಿಗೆ ಬಾಲರಾಜು ಲೋಕಸಭೆ ಚುನಾವಣೆ ಎದುರಿಸುತ್ತಿದ್ದಾರೆ.
ಮೀಸಲು ಕ್ಷೇತ್ರವಾಗಿರುವ ಚಾಮರಾಜನಗರ ಬಿಜೆಪಿ-ಕಾಂಗ್ರೆಸ್ ನಡುವಿನ ನೇರ ಹಣಾಹಣಿಗೆ ಕಾರಣವಾಗಿದೆ. ಏಪ್ರಿಲ್ 26ರಂದು ಮತದಾನದ ದಿನ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಘರ್ಷಣೆ ನಡೆದು ಮತಗಟ್ಟೆಯನ್ನು ಒಡೆದು ಹಾಕಿದ್ದರು. ಈ ಮೂಲಕ ಚಾಮರಾಜನಗರ ದೇಶದ ಗಮನ ಸೆಳೆದಿತ್ತು. ಚುನಾವಣಾ ಆಯೋಗ ಮರು ಮತದಾನವನ್ನು ನಡೆಸಿದ್ದು, ಅದು ಶಾಂತಿಯುತವಾಗಿ ಮುಕ್ತಾಯಗೊಂಡಿತ್ತು.
ಚಾಮರಾಜನಗರದಲ್ಲಿ ಕಾಂಗ್ರೆಸ್ ಸೋತರೆ ಸಿದ್ದರಾಮಯ್ಯ ವರ್ಚಸ್ಸಿಗೆ ಧಕ್ಕೆಯಾಗಲಿದೆ. ಆದ್ದರಿಂದ ಚುನಾವಣೆಗೂ ಮೊದಲು ಅವರು ಎಲ್ಲಾ ಮುನಿಸು ಮರೆತು, ಸಂಸದರಾಗಿದ್ದ ವಿ. ಶ್ರೀನಿವಾಸ್ ಪ್ರಸಾದ್ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕೀಯದಲ್ಲಿ ಕೋಲಾಹಲ ಉಂಟು ಮಾಡಿತ್ತು.
ಸಚಿವ ಹೆಚ್. ಸಿ. ಮಹದೇವಪ್ಪ ಪುತ್ರ ಸುನೀಲ್ ಬೋಸ್ ಗೆಲ್ಲಿಸಿಕೊಂಡು ಬರಲು ಚಾಮರಾಜನಗರಲ್ಲಿ ಮಗನಿಗಿಂತ ಹೆಚ್ಚಾಗಿ ಓಡಾಡಿದ್ದಾರೆ ಎಂದು ಜನರು ಹೇಳುತ್ತಾರೆ. ದಲಿತ ಸಂಘಟನೆಗಳ ಮುಖಂಡರು, ಹಲವು ಬಿಜೆಪಿ ಮುಖಂಡರನ್ನು ಸೆಳೆಯುವಲ್ಲಿ ಮಹದೇವಪ್ಪ ಯಶಸ್ವಿಯಾಗಿದ್ದು, ಇದು ಚುನಾವಣೆಯಲ್ಲಿ ಹೇಗೆ ಸಹಕಾರಿಯಾಗಲಿದೆ? ಎಂದು ಕಾದು ನೋಡಬೇಕಿದೆ.
ಆರ್. ಧ್ರುವನಾರಾಯಣ ಜೊತೆಗಿದ್ದ ಎಸ್. ಬಾಲರಾಜು ಬಳಿಕ ಬಿಜೆಪಿ ಸೇರಿ ಚುನಾವಣಾ ಕಣಕ್ಕಿಳಿದಿದ್ದಾರೆ. ಧ್ರುವನಾರಾಯಣ ಬೆಂಬಲಿಗರು ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಬಂದಿದ್ದಾಗ ಎಸ್. ಬಾಲರಾಜು ಪರವಾಗಿ ಪ್ರಚಾರವನ್ನು ಮಾಡಿ, ಚುನಾವಣಾ ಕಾವು ಹೆಚ್ಚಿಸಿದ್ದರು.
ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ತಿ. ನರಸೀಪುರ, ಹನೂರು, ಚಾಮರಾಜನಗರ, ಗುಂಡ್ಲುಪೇಟೆ, ಹೆಚ್. ಡಿ. ಕೋಟೆ, ನಂಜನಗೂಡು, ವರುಣ, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳು ಬರುತ್ತವೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ನ 7, ಜೆಡಿಎಸ್‌ನ ಒಬ್ಬರು ಶಾಸಕರು ಇದ್ದಾರೆ.
ಹಿಂದಿನ ಚುನಾವಣೆ ಫಲಿತಾಂಶ: ಚಾಮರಾಜನಗರದಲ್ಲಿ 2009ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಆರ್. ಧ್ರುವನಾರಾಯಣ 369,970 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದರು. ಬಿಜೆಪಿಯ ಎ. ಆರ್. ಕೃಷ್ಣಮೂರ್ತಿ 365,968 ಮತಗಳನ್ನು ಪಡೆದು ಸೋತಿದ್ದರು. ಜೆಡಿಎಸ್‌ನ ಎಂ. ಶಿವಣ್ಣ 106,876 ಮತಗಳನ್ನು ಪಡೆದಿದ್ದರು. ಬಿಎಸ್‌ಪಿಯ ಎನ್. ಮಹೇಶ್ 68,447 ಮತಗಳಿಸಿದ್ದರು.
2014ರಲ್ಲಿ ಕಾಂಗ್ರೆಸ್‌ನ ಆರ್. ಧ್ರುವನಾರಾಯಣ 567,782 ಮತಗಳನ್ನು ಪಡೆದು ಜಯಗಳಿಸಿದರು. ಬಿಜೆಪಿಯ ಎ. ಆರ್. ಕೃಷ್ಣಮೂರ್ತಿ 426,600 ಮತಗಳನ್ನು ಪಡೆದು ಸೋತರು. ಜೆಡಿಎಸ್‌ನ ಎಂ. ಶಿವಣ್ಣ 58,760 ಮತಗಳನ್ನು ಪಡೆದರು. ಬಿಎಸ್‌ಪಿಯ ಶಿವಮಲ್ಲು 34,846 ಮತ ಪಡೆದು ಸೋಲು ಕಂಡರು.
2019ರ ಚುನಾವಣೆಯಲ್ಲಿ ಬಿಜೆಪಿಯ ವಿ. ಶ್ರೀನಿವಾಸ ಪ್ರಸಾದ್ 568,537 ಮತಗಳನ್ನು ಪಡೆದು ಗೆಲುವು ಸಾಧಿಸಿದರು. ಕಾಂಗ್ರೆಸ್‌ನ ಆರ್. ಧ್ರುವನಾರಾಯಣ 566,720 ಮತಗಳನ್ನು ಪಡೆದು ಸೋತರು. ಬಿಎಸ್‌ಪಿಯ ಡಾ. ಶಿವಕುಮಾರ 87,631 ಮತಗಳನ್ನು ಪಡೆದರು.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ಬೇಸಿಗೆಯ ಸುಡು ಬಿಸಿಲಿನಿಂದ ಪಾರಾಗಲು ಭೇಟಿ ನೀಡಬಹುದಾದ ಭಾರತದ 10 ಪ್ರೇಕ್ಷಣೀಯ ಸ್ಥಳಗಳು












Click it and Unblock the Notifications