ಎಲ್ಲಾ ಕ್ಷೇತ್ರಗಳಲ್ಲಿ ಭರ್ಜರಿ ಲೀಡ್, ಆದರೆ, ಅಪ್ಪನ ಕ್ಷೇತ್ರದಲ್ಲಿಯೇ ಕಡಿಮೆ ಮತಗಳ ಅಂತರ ಗಳಿಸಿದ ಸುನೀಲ್ ಬೋಸ್
ಚಾಮರಾಜನಗರ, ಜೂನ್. 05: ಆರಂಭದಿಂದಲೂ ಭರ್ಜರಿ ಮುನ್ನಡೆ ಸಾಧಿಸಿದ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಜಯಭೇರಿ ಬಾರಿಸಿದ್ದಾರೆ. ಬರೋಬ್ಬರಿ 1,88,706 ಮತಗಳ ಅಂತರದಲ್ಲಿ ಭರ್ಜರಿ ಜಯ ಗಳಿಸಿದ್ದಾರೆ. ಆದರೆ, ಟಿ.ನರಸೀಪುರದಲ್ಲಿ ಮಾತ್ರ ಕಡಿಮೆ ಲೀಡ್ ಪಡೆದಿದ್ದಾರೆ.
ಚಾಮರಾಜನಗರ ಲೋಕಸಭಾ ಕ್ಷೇತ್ರಕ್ಕೆ ಚಾಮರಾಜನಗರ, ಗುಂಡ್ಲುಪೇಟೆ, ಹನೂರು ಹಾಗೂ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ಮತ್ತು ಮೈಸೂರು ಜಿಲ್ಲೆಯ ಟಿ.ನರಸೀಪುರ, ವರುಣ, ನಂಜನಗೂಡು ಹಾಗೂ ಎಚ್.ಡಿ.ಕೋಟೆ ಬರಲಿದ್ದು ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲೂ ಕೈ ಅಭ್ಯರ್ಥಿಗೆ ಲೀಡ್ ತಂದುಕೊಟ್ಟರೇ ಟಿ.ನರಸೀಪುರದಲ್ಲಿ ಮಾತ್ರ ಅಲ್ಪ ಲೀಡ್ ಪಡೆದಿದ್ದಾರೆ.

ಟಿ.ನರಸೀಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ 1 ನೇ ಸುತ್ತಿನಿಂದ 7 ನೇ ಸುತ್ತಿನ ತನಕವೂ ನಿರಂತರ ಮುನ್ನಡೆ ಹೊಂದಿದ್ದರು. ಅದಾದ ಬಳಿಕವೂ, ಸುನಿಲ್ ಬೋಸ್ 76722 ಮತ ಪಡೆದರೆ, ಬಿಜೆಪಿ ಅಭ್ಯರ್ಥಿ ಬಾಲರಾಜು 73801 ಮತಗಳನ್ನು ಪಡೆದುಕೊಂಡು 2921 ಮತಗಳ ಲೀಡ್ ಪಡೆದಿದ್ದಾರೆ. ಲಕ್ಷ ಮತಗಳ ಅಂತರದಲ್ಲಿ ಗೆದ್ದರೂ ಸುನಿಲ್ ಬೋಸ್ ಅವರಿಗೆ ತವರಿನಲ್ಲೇ ಅಲ್ಪ ಲೀಡ್ ಬಂದಿದ್ದು ಮುಜುಗರ ಅನುಭವಿಸಿದ್ದಾರೆ.
ಸಿಎಂ ಕ್ಷೇತ್ರದಲ್ಲಿ 33 ಸಾವಿರ ಲೀಡ್:
ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರದಲ್ಲಿ ಆರಂಭಿಕವಾಗಿ ಕೈ ಕಮಲದ ನಡುವೆ ಟೈಟ್ ಫೈಟ್ ನಡೆದರೂ ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿಗೆ 33,352 ಲೀಡ್ ಸಿಕ್ಕಿದೆ. ಬಿಜೆಪಿ ಅಭ್ಯರ್ಥಿ 73852 ಮತ ಪಡೆದರೇ ಕಾಂಗ್ರೆಸ್ ಅಭ್ಯರ್ಥಿ 1,07203 ಮತ ಪಡೆದುಕೊಂಡರು.
ಎಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಾಲರಾಜ್‌ಗೆ 72997 ಮತಗಳು ಬಂದಿದ್ದು, ಸುನಿಲ್ ಬೋಸ್‌ಗೆ 96,735 ಮತ ಸಿಕ್ಕಿದ್ದು 23, 738 ಲೀಡ್ ಸಿಕ್ಕಿದೆ. ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ 20,578 ಲೀಡ್, ಜೆಡಿಎಸ್ ಶಾಸಕ ಇರುವ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಕೈಗೆ 36,957 ಲೀಡ್ ಸಿಕ್ಕಿದೆ.

ಕೊಳ್ಳೇಗಾಲದಲ್ಲಿ 33,016 ಲೀಡ್, ಗುಂಡ್ಲುಪೇಟೆಯಲ್ಲಿ 17,982 ಲೀಡ್ ಹಾಗೂ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ 20326 ಮತಗಳು ಲೀಡ್ ಕೊಟ್ಟಿವೆ. 8 ವಿಧಾನಸಭಾ ಕ್ಷೇತ್ರಗಳಲ್ಲಿ ಟಿ.ನರಸಿಪುರ ಹೊರತುಪಡಿಸಿ ಉಳಿದೆಲ್ಲಾ ಕಡೆ ಭರ್ಜರಿ ಮತಗಳು ಕೈ ಬುಟ್ಟಿಗೆ ಬಂದಿವೆ. ಇವಿಎಂ ಮತ ಎಣಿಕೆ ಅಂಕಿ ಅಂಶಗಳು ಇದಾಗಿದ್ದು ಅಂಚೆ ಮತ ಪತ್ರದ ಲೆಕ್ಕ ಇನ್ನಷ್ಟೇ ತಿಳಿದುಬರಬೇಕಿದೆ.
ಕಡಿಮೆ ಲೀಡ್‌ಗೆ ಸುನೀಲ್ ಬೋಸ್ ಕೊಟ್ಟ ಕಾರಣ
ಎಲ್ಲಾ ಕ್ಷೇತ್ರದಲ್ಲೂ ಲೀಡ್ ಬಂದು ತವರಿನಲ್ಲೇ ಕಡಿಮೆ ಲೀಡ್ ಬಂದಿದ್ದರ ಕುರಿತು ವಿಜೇತ ಅಭ್ಯರ್ಥಿ ಸುನಿಲ್ ಬೋಸ್ ಮಾತನಾಡಿ, ಎಲ್ಲಾ 8 ಕ್ಷೇತ್ರಗಳಲ್ಲೂ ತನ್ನದೇ ಆದ ರಾಜಕೀಯ ಕಾರಣಗಳಿರುತ್ತವೆ. ಕಾಂಗ್ರೆಸ್ ಕಾರ್ಯಕರ್ತರಿಗೆ ಹುರುಪು ತುಂಬಿ ಮುಂದಿನ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಕಾಂಗ್ರೆಸ್ ಉತ್ತಮ ಸಾಧನೆ ಮಾಡುವಂತೆ ಮಾಡುತ್ತೇನೆ ಎಂದಿದ್ದಾರೆ.
-
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ -
ದ್ವಿತೀಯ PUC ಪರೀಕ್ಷೆ-2: ಅನುತ್ತೀರ್ಣರಾದ ವಿದ್ಯಾರ್ಥಿಗಳಿಗಾಗಿ ಸರ್ಕಾರಿ ಕಾಲೇಜುಗಳಲ್ಲಿ ವಿಶೇಷ ತರಗತಿಗಳು ಆರಂಭ












Click it and Unblock the Notifications